Honda: ಸದ್ದಿಲ್ಲದೇ ಈ ಜನಪ್ರಿಯ ಎಸ್‌ಯುವಿ ಬೆಲೆ ಏರಿಕೆ.. 17 ಕಿ.ಮೀ ಮೈಲೇಜ್.. 5-ಸೀಟರ್!
ಹೋಂಡಾ ಎಲಿವೇಟ್ (Honda Elevate) ಪ್ರಮುಖ ಮಿಡ್-ಸೈಜ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ಉತ್ತಮವಾದ ಬೇಡಿಕೆಯಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಅದಕ್ಕೆ ತಕ್ಕಂತೆ ನೋಡಲು ತುಂಬಾ ಚೆನ್ನಾಗಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿದೆ. ಸದ್ಯ, ಈ ಕಾರಿನ ಬೆಲೆಯನ್ನು ಕಂಪನಿಯು ಪರಿಷ್ಕರಿಸಿದ್ದು, ಶೇಕಡ 5.5% ವರೆಗೆ ದರವನ್ನು ಹೆಚ್ಚಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೂತನ 'ಹೋಂಡಾ ಎಲಿವೇಟ್' ಬೆಲೆಯೂ ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.9,990 ರಿಂದ ರೂ.59,990 ವರೆಗೆ ಅಧಿಕಗೊಂಡಿದೆ. ದರ ಏರಿಕೆ ಬಳಿಕ, ಕನಿಷ್ಠ ರೂ.11.60 ಲಕ್ಷ ಹಾಗೂ ಗರಿಷ್ಠ ರೂ.16.57 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

ಈ 'ಎಲಿವೇಟ್' ಎಸ್‌ವಿ (SV, ವಿ (V), ವಿಎಕ್ಸ್ (VX) ಹಾಗೂ ಝಡ್ಎಕ್ಸ್ (ZX) ರೂಪಾಂತರಗಳೊಂದಿಗೂ ಸಿಗುತ್ತದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಕನೆಕ್ಟ್ಡ್ ಟೈಲ್ ಲ್ಯಾಂಪ್ ಮತ್ತು 17-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.
ಇದು ಫೀನಿಕ್ಸ್ ಆರೆಂಜ್ ಪರ್ಲ್, ಗೋಲ್ಡನ್ ಬ್ರೌನ್ ಮೆಟಾಲಿಕ್, ಅಬ್ಸಿಡಿಯನ್ ಬ್ಲೂ ಪರ್ಲ್, ರೇಡಿಯಂಟ್ ರೆಡ್ ಮೆಟಾಲಿಕ್ ಹಾಗೂ ಪ್ಲಾಟಿನಂ ವೈಟ್ ಪರ್ಲ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 220 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2650 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಹೋಂಡಾ ಎಲಿವೇಟ್' ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 6,600 ಆರ್‌ಪಿಎಂನಲ್ಲಿ 121 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4,300 ಆರ್‌ಪಿಎಂನಲ್ಲಿ 145 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಹಾಗೂ ಸಿವಿಟಿ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 15 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ.
ಈ ಕಾರು ಎಫ್‌ಡಬ್ಲ್ಯೂಡಿ (ಫ್ರಂಟ್ - ವೀಲ್ ಡ್ರೈವ್) ಟೆಕ್ನಾಲಜಿಯನ್ನು ಬೆಂಬಲಿಸುತ್ತದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 10.92 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸರಿ ಸುಮಾರು 1,259 ಕೆಜಿ ತೂಕವಿದೆ.
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 458 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ನೂತನ 'ಹೋಂಡಾ ಎಲಿವೇಟ್' ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೈಟ್ ಅಡ್ಜಸ್ಟೇಬಲ್ ಡ್ರೈವರ್ ಸೀಟ್, ರೇರ್-ಎಸಿ ವೆಂಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್-ಸ್ಟಾರ್ಟ್ ಅಸಿಸ್ಟ್, ಮತ್ತು ಟ್ರಾಕ್ಷನ್ ಕಂಟ್ರೋಲ್‌ನ್ನು ತನ್ನದಾಗಿಸಿಕೊಂಡಿದೆ.
ಇದಕ್ಕೆ ಸಾಲು - ಸಾಲು ಪ್ರತಿಸ್ಪರ್ಧಿಗಳಿವೆ. ಹ್ಯುಂಡೈ ಕ್ರೆಟಾ (Hyundai Creta), ಕಿಯಾ ಸೆಲ್ಟೋಸ್ (Kia Seltos), ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara), ಪೋಕ್ಸ್‌ವ್ಯಾಗನ್ ಟೈಗನ್ (Volkswagen Taigun) ಹಾಗೂ ಸ್ಕೋಡಾ ಕುಶಾಕ್ (Skoda Kushak) ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








