Hyundai: ರಣಹದ್ದಿನಂತಹ ಎಸ್‌ಯುವಿಯಿದು.. ಪ್ರತಿದಿನ 551 ಕಾರುಗಳು ಸೇಲ್ಸ್, 10.79 ಲಕ್ಷ ರೂಪಾಯಿ.. 21 Km ಮೈಲೇಜ್!
ಹ್ಯುಂಡೈ ಕ್ರೆಟಾ (Hyundai Creta) ಪ್ರಖ್ಯಾತ ಎಸ್‌ಯುವಿಯಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಹಕರು ಸಹ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ದೀರ್ಘಕಾಲ ಬಳಕೆಯೂ ಬರುತ್ತದೆ. 2025ರಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 201,122 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಪ್ರತಿದಿನ ಸರಾಸರಿ 551 ಕಾರುಗಳನ್ನು ಮಾರಾಟ ಮಾಡಲಾಗಿದೆ.
ಸ್ಟ್ಯಾಂಡರ್ಡ್ 'ಹ್ಯುಂಡೈ ಕ್ರೆಟಾ' ವಿಶೇಷತೆಗಳೇನು:
ಇದು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.10.79 ಲಕ್ಷದಿಂದ ರೂ.20.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇ (E), ಇಎಕ್ಸ್ (EX), ಎಸ್ (S) ಹಾಗೂ ಎಸ್ಎಕ್ಸ್ ಟೆಕ್ (SX Tech) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು 18 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಅಬಿಸ್ ಬ್ಲ್ಯಾಕ್, ಅಟ್ಲಾಸ್ ವೈಟ್, ರೇಂಜರ್ ಖಾಕಿ, ಟೈಟಾನ್ ಗ್ರೇ, ಸ್ಟಾರಿ ನೈಟ್, ಬ್ಲ್ಯಾಕ್ ಮ್ಯಾಟ್ ಹಾಗೂ ಟೈಟಾನ್ ಗ್ರೇ ಮ್ಯಾಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ನೂತನ 'ಕ್ರೆಟಾ' ಹೆಚ್ಚು ವಿಶಾಲ ಗಾತ್ರದಲ್ಲಿದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,610 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 433 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಇದು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀ. ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 21 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 200 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 13.73 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
'ಹ್ಯುಂಡೈ ಕ್ರೆಟಾ' ಎಸ್‌ಯುವಿ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 10.25-ಇಂಚಿನ ಡುಯಲ್ ಸ್ಕ್ರೀನ್ (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್-ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ & ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಹಿಲ್-ಸ್ಟಾರ್ಟ್ ಅಸಿಸ್ಟ್‌ಗಳನ್ನು ಪಡೆದಿದೆ.

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕೂಡ ಖರೀದಿಗೆ ಲಭ್ಯ:
ಈ ಕಾರು ರೂ.18.02 ಲಕ್ಷದಿಂದ ರೂ.23.96 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಓಷನ್ ಬ್ಲೂ ಮ್ಯಾಟ್ ಮ್ಯಾಟ್ ಮತ್ತು ಫಿಯರಿ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,610 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ.
ಇದು 42 ಮತ್ತು 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 390 ರಿಂದ 473 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 10.25-ಇಂಚಿನ ಡುಯಲ್ ಸ್ಕ್ರೀನ್, ಸನ್‌ರೂಫ್ ಹಾಗೂ ಡುಯಲ್ ಜೋನ್ ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








