ರೂ.5.80 ಲಕ್ಷ.. ಸದ್ದಿಲ್ಲದೇ ಚಿಕ್ಕ ಹ್ಯುಂಡೈ SUV ಮಾರಾಟಕ್ಕೆ.. ಹೊಸ ಟಾಟಾ ಕಾರಿನೊಂದಿಗೆ ಸೆಣಸಲಿದೆ.. ಯಾವುದು ಬೆಸ್ಟ್?

ನಿನ್ನೆಯಷ್ಟೇ 2026ರ ನೂತನ ಹ್ಯುಂಡೈ ಎಕ್ಸ್‌ಟರ್ ಫೇಸ್‌ಲಿಫ್ಟ್ (Hyundai Exter Facelift) ಮೈಕ್ರೋ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿದೆ. ಇದಕ್ಕೆ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಇವೆರಡು ಕಾರುಗಳು ಒಂದಕ್ಕಿಂತ ಅದ್ಭುತವಾಗಿವೆ. ಹಲವು ಹೊಸತನಗಳಿಗೂ ಸಾಕ್ಷಿಯಾಗಿವೆ. ನಾವಿಲ್ಲಿ.. ಈ ಹೊಸ ಎಸ್‌ಯುವಿಗಳ ಬೆಲೆ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬೆಲೆ (Price):

ಈ ಕಾರುಗಳು ಕೈಗೆಟುಕುವ ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿವೆ. ಹ್ಯುಂಡೈ ಎಕ್ಸ್‌ಟರ್ ಫೇಸ್‌ಲಿಫ್ಟ್ ರೂ.5.80 ಲಕ್ಷದಿಂದ ರೂ.9.42 ಲಕ್ಷ ಬೆಲೆಯನ್ನು ಹೊಂದಿದೆ. ಅದೇ ರೀತಿಯಲ್ಲಿ 'ಟಾಟಾ ಪಂಚ್ ಫೇಸ್‌ಲಿಫ್ಟ್' ರೂ.5.60 ಲಕ್ಷದಿಂದ ರೂ.10.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಬೆಲೆಯ ವಿಚಾರದಲ್ಲಿ ಎಕ್ಸ್‌ಟರ್ ಹಾಗೂ ಪಂಚ್ ಹೆಚ್ಚು-ಕಮ್ಮಿ ಸಮಾನವಾಗಿವೆ.

Hyundai Exter Facelift vs Tata Punch Facelift Which Suv Best Comparison

ವಿನ್ಯಾಸ (Design):

ಇವೆರೆಡು ಎಸ್‌ಯುವಿಗಳು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿವೆ. ಎಕ್ಸ್‌ಟರ್ ಫೇಸ್‌ಲಿಫ್ಟ್ ತುಂಬಾ ಚೆನ್ನಾಗಿರುವ ಗ್ರಿಲ್, ಹ್ಯಾಲೊಜೆನ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 15-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಟೈಟಾನಿಯಂ ಬ್ಲ್ಯಾಕ್ ಮ್ಯಾಟ್, ಗೋಲ್ಡನ್ ಬ್ರಾನ್ಜ್, ಸ್ಟಾರಿ ನೈಟ್, ಅಟ್ಲಾಸ್ ವೈಟ್, ಟೈಟಾನ್ ಗ್ರೇ, ಟೈಟಾನಿಯಂ ಬ್ಲ್ಯಾಕ್ ಮತ್ತು ರೇಂಜರ್ ಖಾಕಿ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಪಂಚ್ ಫೇಸ್‌ಲಿಫ್ಟ್ ಸಹ ಉತ್ತಮವಾಗಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು ಸ್ವಲ್ಪ ಮಟ್ಟಿಗೆ ದೊಡ್ಡದಾದ 16-ಇಂಚಿನ ಅಲಾಯ್‌ ವೀಲ್‌ಗಳನ್ನು ಒಳಗೊಂಡಿದೆ. ಪ್ರಿಸ್ಟೈನ್ ವೈಟ್, ಡೇಟೋನ್ ಗ್ರೇ, ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಸೈಂಟಿಫಿಕ್ ಬ್ಲೂ & ಕ್ಯಾರಮೆಲ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

Hyundai Exter Facelift vs Tata Punch Facelift Which Suv Best Comparison

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಈ ಕಾರುಗಳು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿವೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ ಹ್ಯುಂಡೈ ಎಕ್ಸ್‌ಟರ್ ಫೇಸ್‌ಲಿಫ್ಟ್ ಎಸ್‌ಯುವಿಯು 391 ಲೀಟರ್ ಹಾಗೂ ಟಾಟಾ ಪಂಚ್ ಫೇಸ್‌ಲಿಫ್ಟ್ ಕಾರು 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಕಾರ್ಯಕ್ಷಮತೆ (Performance):

ಇವೆರೆಡು ಎಸ್‌ಯುವಿಗಳು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿವೆ. ಎಕ್ಸ್‌ಟರ್ ಕಾರು 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19.4 ರಿಂದ 27.1 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ಪಂಚ್ ಎಸ್‌ಯುವಿಯು 1.2-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್, 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19 ರಿಂದ 27 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯಗಳು (Features):

ಈ ಕಾರುಗಳು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿವೆ. ಹ್ಯುಂಡೈ ಎಕ್ಸ್‌ಟರ್ ಫೇಸ್‌ಲಿಫ್ಟ್ ಕಾರು ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸಿಂಗಲ್-ಪೇನ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್ ಹಾಗೂ ಯುಎಸ್‌‍ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರೇರ್ ವ್ಯೂ ಕ್ಯಾಮೆರಾವನ್ನು ಹೊಂದಿದೆ.

ಟಾಟಾ ಪಂಚ್ ಫೇಸ್‌ಲಿಫ್ಟ್ ಎಸ್‌ಯುವಿಯು 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್‌, ಟೈಪ್-ಸಿ ಫಾಸ್ಟ್ ಚಾರ್ಜರ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ ಮತ್ತು ರೈನ್ ಸೆನ್ಸಿಂಗ್ ವೈಪರ್‌ಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Saturday, March 21, 2026, 8:25 [IST]
English summary
Hyundai exter facelift vs tata punch facelift which suv best comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+