ಟಾಟಾ ಪಂಚ್‌ಗೆ 'ಪಂಚ್' ಕೊಟ್ಟ ಕಾರಿದು.. ಬೈಕ್‌ನಂತೆ 27 Km ಮೈಲೇಜ್.. 5.64 ಲಕ್ಷ ರೂಪಾಯಿ.. ಮುಗಿಬಿದ್ದ ಗ್ರಾಹಕರು!

'ಟಾಟಾ ಪಂಚ್' ಪ್ರಖ್ಯಾತ ಮೈಕ್ರೋ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ಹ್ಯುಂಡೈ ಎಕ್ಸ್‌ಟರ್‌ (Hyundai Exter) ಪ್ರಬಲವಾದ ಎದುರಾಳಿಯಾಗಿದೆ. ಪ್ರತಿ ತಿಂಗಳು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಕಳೆದ ತಿಂಗಳು (ಜನವರಿ - 2026) ಅದು ಮುಂದುವರಿದಿದೆ. ಒಟ್ಟು 5,621 ಯುನಿಟ್‌ 'ಎಕ್ಸ್‌ಟರ್‌'ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 6,068 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ, ಮಾರಾಟ ಪ್ರಮಾಣವು ಸ್ವಲ್ಪ ಮಟ್ಟಿಗೆ ಅಂದರೆ ಶೇಕಡ -7.37% ಇಳಿಕೆಯಾಗಿದೆ.

ಅದೇ ರೀತಿಯಲ್ಲಿ 2025ರ ಕಡೆಯ 5 ತಿಂಗಳಲ್ಲೂ 'ಹ್ಯುಂಡೈ ಎಕ್ಸ್‌ಟರ್‌' ಉತ್ತಮವಾಗಿಯೇ ಮಾರಾಟವಾಗಿದೆ. ಆಗಸ್ಟ್‌ನಲ್ಲಿ 5,061 ಯುನಿಟ್, ಸೆಪ್ಟೆಂಬರ್‌ನಲ್ಲಿ 5,643 ಯುನಿಟ್, ಅಕ್ಟೋಬರ್‌ನಲ್ಲಿ 6,294 ಯುನಿಟ್, ನವೆಂಬರ್‌ನಲ್ಲಿ 5,705 ಯುನಿಟ್ ಹಾಗೂ ಡಿಸೆಂಬರ್‌ನಲ್ಲಿ 5,612 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

Hyundai Exter Suv Sales January 2026 Details

'ಹ್ಯುಂಡೈ ಎಕ್ಸ್‌ಟರ್‌' ವಿಶೇಷತೆಗಳೇನು:

ಈ ಕಾರು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದ್ದು, ಎಲ್ಲ ವರ್ಗದ ಜನರು ಕೊಂಡುಕೊಳ್ಳಬಹುದು. ರೂ.5.64 ಲಕ್ಷದಿಂದ ರೂ.9.61 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಸ್ (S), ಎಸ್ ಪ್ಲಸ್ (S Plus) ಎಸ್ಎಕ್ಸ್ (SX) ಹಾಗೂ ಇಎಕ್ಸ್ EX) ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು 15-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್, ರೇಂಜರ್ ಖಾಕಿ, ಸ್ಟಾರಿ ನೈಟ್, ಟೈಟಾನ್ ಗ್ರೇ, ಟೈಟಾನ್ ಗ್ರೇ ಮ್ಯಾಟ್, ಫೈರಿ ರೆಡ್ ಹಾಗೂ ಷಾಡೋ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Hyundai Exter Suv Sales January 2026 Details

ಹೊಸ 'ಎಕ್ಸ್‌ಟರ್‌' ಸಾಕಷ್ಟು ವಿಶಾಲವಾಗಿದೆ. 3,815 ಎಂಎಂ ಉದ್ದ, 1,710 ಎಂಎಂ ಅಗಲ ಹಾಗೂ 1,631 ಎಂಎಂ ಎತ್ತರವಿದೆ. ಜೊತೆಗೆ 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು​ 999 ಕೆಜಿ ತೂಕವಿದೆ.

ಈ ಎಸ್‌ಯುವಿಯು ಬೆಲೆಗೆ ತಕ್ಕಂತೆ ಎರಡು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 83 ಪಿಎಸ್ ಅಶ್ವ ಶಕ್ತಿ ಹಾಗೂ 114 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀ. ಸಿಎನ್‌ಜಿ ಎಂಜಿನ್‌, 69 ಪಿಎಸ್ ಅಶ್ವ ಶಕ್ತಿ ಮತ್ತು 95 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

Hyundai Exter Suv Sales January 2026 Details

ಇದು ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವುದೇ ಸಾಮಾನ್ಯ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 160 ಕೆಎಂಪಿಹೆಚ್ ಸ್ಪೀಡ್‌ನ್ನು ಹೊಂದಿದೆ. ಬರೀ 15.26 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ನೂತನ 'ಹ್ಯುಂಡೈ ಎಕ್ಸ್‌ಟರ್‌' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 391 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಸನ್‌ರೂಫ್ ಹಾಗೂ ರೇರ್ ಎಸಿ ವೆಂಟ್‌ಗಳಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಕ್ರೂಸ್ ಕಂಟ್ರೋಲ್ ಮತ್ತು ಹಿಲ್-ಅಸಿಸ್ಟ್ ಕಂಟ್ರೋಲ್‌ನ್ನು ಒಳಗೊಂಡಿದೆ.

More from DriveSpark

Article Published On: Thursday, February 12, 2026, 13:15 [IST]
English summary
Hyundai exter suv sales january 2026 details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+