Hyundai: ಟಾಟಾ ನೆಕ್ಸಾನ್ ಎದುರಾಳಿ ಕಾರಿದು.. 8 ಲಕ್ಷ ರೂಪಾಯಿ.. 20.99 Km ಮೈಲೇಜ್.. ಮನಸೋತ ಗ್ರಾಹಕರು!

ಹ್ಯುಂಡೈ ವೆನ್ಯೂ (Hyundai Venue) ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 12,413 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 11,106 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 12% ಬೆಳವಣಿಗೆಯಾಗಿದೆ.

ಸ್ಟ್ಯಾಂಡರ್ಡ್ 'ಹ್ಯುಂಡೈ ವೆನ್ಯೂ' ವಿಶೇಷತೆಗಳೇನು:

ಈ ಕಾರು ಕೈಗೆಟುಕುವ ಬೆಲೆಯಲ್ಲಿಯೂ ದೊರೆಯುತ್ತದೆ. ರೂ.8 ಲಕ್ಷದಿಂದ ರೂ.15.69 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಹೆಚ್ಎಕ್ಸ್2 (HX2), ಹೆಚ್ಎಕ್ಸ್4 (HX4), ಹೆಚ್ಎಕ್ಸ್5 (HX5) ಹಾಗೂ ಹೆಚ್ಎಕ್ಸ್6 (HX6) ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.

Hyundai Venue 12 413 Cars Sold in January 2026 Details

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & 17-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಅಬಿಸ್ ಬ್ಲ್ಯಾಕ್, ಅಟ್ಲಾಸ್ ವೈಟ್, ಟೈಟಾನ್ ಗ್ರೇ, ಡ್ರ್ಯಾಗನ್ ರೆಡ್ ಮತ್ತು ಹ್ಯಾಝೆಲ್ ಬ್ಲೂ ಬಣ್ಣಗಳೊಂದಿಗೂ ಲಭ್ಯವಿದೆ. ಸಾಕಷ್ಟು ವಿಶಾಲವಾಗಿದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

Hyundai Venue 12 413 Cars Sold in January 2026 Details

ನೂತನ 'ವೆನ್ಯೂ' ಬೆಲೆಗೆ ತಕ್ಕಂತೆ ಮೂರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.0-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಹಾಗೂ 1.5-ಲೀ. ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.9 ರಿಂದ 20.99 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ಈ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 375 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್‌ಗಳು, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 8-ಸ್ಪೀಕರ್ ಬೋಸ್ ಮ್ಯೂಸಿಕ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

'ಹ್ಯುಂಡೈ ವೆನ್ಯೂ ಎನ್ ಲೈನ್' ಸಹ ಖರೀದಿಗೆ ಲಭ್ಯ:

ಈ ಎಸ್‌ಯುವಿಯು ರೂ.10.65 ಲಕ್ಷದಿಂದ ರೂ.15.58 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಅಬಿಸ್ ಬ್ಯ್ಲಾಕ್, ಅಟ್ಲಾಸ್ ವೈಟ್, ಡ್ರ್ಯಾಗನ್ ರೆಡ್, ಹ್ಯಾಜೆಲ್ ಬ್ಲೂ ಮತ್ತು ಟೈಟಾನ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,520 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ 'ಹ್ಯುಂಡೈ ವೆನ್ಯೂ ಎನ್ ಲೈನ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 1.0-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 18 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Monday, February 9, 2026, 13:37 [IST]
English summary
Hyundai venue 12413 cars sold in january 2026 details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+