Hyundai: ನಿರೀಕ್ಷೆ ಮೀರಿ ಹೋಗುತ್ತಿವೆ ಬುಕಿಂಗ್ಸ್.. ಈ ಅಗ್ಗದ ಹ್ಯುಂಡೈ ಎಸ್‌ಯುವಿಗೆ ಫುಲ್ ಡಿಮ್ಯಾಂಡ್!

2025ರ ನವೆಂಬರ್ 4ರಂದು ಎರಡನೇ ತಲೆಮಾರಿನ ನೂತನ ಹ್ಯುಂಡೈ ವೆನ್ಯೂ (Hyundai Venue) ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಇದು ನೋಡಲು ತುಂಬಾ ಚೆನ್ನಾಗಿದ್ದು, ನಾನಾ ಬಗೆಯ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಈ ಕಾರಿಗೆ ಅಂದಿನಿಂದಲೇ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಖರೀದಿದಾರರು ಸಹ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಇದೇ 'ವೆನ್ಯೂ' ಬುಕ್ಕಿಂಗ್‌ನಲ್ಲಿ ಹೊಸದೊಂದು ಇತಿಹಾಸ ನಿರ್ಮಾಣಗೊಂಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹೊಚ್ಚ ಹೊಸ 'ಹ್ಯುಂಡೈ ವೆನ್ಯೂ' ಎಸ್‌ಯುವಿಯು ದಾಖಲೆಯ 80,000 ಆರ್ಡರ್‌ಗಳನ್ನು ಪಡೆದುಕೊಂಡಿದೆ ಎಂದು ವರದಿಯಾಗಿದೆ. ಈ ಮೂಲಕ ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದೆ. ಈಗಲೂ ಬುಕ್ಕಿಂಗ್ ಓಪನ್ ಇದ್ದು, ಆಸಕ್ತರು ರೂ.25,000 ಮುಂಗಡ ಹಣ ಪಾವತಿಸುವುದರೊಂದಿಗೆ ಅಧಿಕೃತ ವೆಬ್‌ಸೈಟ್‌ ಅಥವಾ ಸಮೀಪದ ಶೋರೂಂಗೆ ಭೇಟಿ ನೀಡಿ, ಕಾಯ್ದಿರಬಹುದು.

Hyundai Venue Suv Get 80 000 Bookings Details

ಈ ಕಾರು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಲಭ್ಯವಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.8 ಲಕ್ಷದಿಂದ ರೂ.15.69 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಎಕ್ಸ್2, ಹೆಚ್ಎಕ್ಸ್4, ಹೆಚ್ಎಕ್ಸ್5 ಮತ್ತು ಹೆಚ್ಎಕ್ಸ್6 ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ಇದು ಜಬರ್ದಸ್ತ್ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಮನ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 17-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಅಬಿಸ್ ಬ್ಲ್ಯಾಕ್, ಅಟ್ಲಾಸ್ ವೈಟ್, ಟೈಟಾನ್ ಗ್ರೇ, ಡ್ರ್ಯಾಗನ್ ರೆಡ್, ಹ್ಯಾಝೆಲ್ ಬ್ಲೂ ಮತ್ತು ಮಿಸ್ಟಿಕ್ ಸಫಿರ್ ಎಂಬ ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ.

Hyundai Venue Suv Get 80 000 Bookings Details

ನೂತನ 'ವೆನ್ಯೂ' ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 3,995 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,665 ಎಂಎಂ ಎತ್ತರವಿದೆ. ಜೊತೆಗಿದು 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,520 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 1,251 ಕೆಜಿ ತೂಕವಿದೆ.

ಈ ಎಸ್‌ಯುವಿಯು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 83 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 114.7 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.0-ಲೀ. ಟರ್ಬೋ ಪೆಟ್ರೋಲ್ ಎಂಜಿನ್, 120 ಬಿಹೆಚ್‌ಪಿ ಅಶ್ವ ಶಕ್ತಿ ಹಾಗೂ 172 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.

Hyundai Venue Suv Get 80 000 Bookings Details

ಇನ್ನೊಂದು 1.5-ಲೀ. ಟರ್ಬೋ ಡೀಸೆಲ್ ಎಂಜಿನ್, 116 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 250 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಹೊಸ 'ವೆನ್ಯೂ' ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 17.9 ರಿಂದ 20.99 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ ದೊಡ್ಡದಾಗಿರುವ 375 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 10.99 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್‌ಗಳು, 8-ಸ್ಪೀಕರ್ ಬೋಸ್ ಮ್ಯೂಸಿಕ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Tuesday, February 10, 2026, 18:10 [IST]
English summary
Hyundai venue suv get 80000 bookings details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+