ಟಾಟಾ & ಮಹೀಂದ್ರಾ ಬಳಿಕ, ಅಬ್ಬರಿಸಲು ಹೊಸ ಸ್ವದೇಶಿ ಕಂಪನಿ ಸಿದ್ಧ.. ಮೊದಲ ಕಾರಿನ ಬಿಡುಗಡೆಗೆ ತಯಾರಿ, ಯಾವುದು?

ಜೆಎಸ್‌ಡಬ್ಲ್ಯೂ ಗ್ರೂಪ್ (JSW Group) & ಎಂಜಿ ಮೋಟಾರ್ (Mg Motor) ಕಂಪನಿಗಳು ವ್ಯಾಪಾರ ಸಹಭಾಗಿತ್ವ ಹೊಂದಿವೆ. ಇವೆರಡರ ಪಾಲುದಾರಿಕೆಯಲ್ಲಿ ಕಾಮೆಟ್ ಇವಿ ಹಾಗೂ ವಿಂಡ್ಸರ್ ಇವಿ ಸೇರಿದಂತೆ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಲಾಗುತ್ತಿದೆ. ಸದ್ಯ, ಜೆಎಸ್‌ಡಬ್ಲ್ಯೂ ಗ್ರೂಪ್‌ನ ಅಂಗಸಂಸ್ಥೆಯಾಗಿರುವ ಜೆಎಸ್‌ಡಬ್ಲ್ಯೂ ಮೋಟಾರ್ಸ್ (JSW Motors), ಭಾರತದ ವಾಹನೋದ್ಯಮಕ್ಕೆ ಸ್ವತಂತ್ರವಾಗಿ ಪ್ರವೇಶಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಅತಿ ಶೀಘ್ರದಲ್ಲೇ ನೂತನ ಎಸ್‌ಯುವಿಯೊಂದನ್ನು ಬಿಡುಗಡೆಗೊಳಿಸಲಿದೆ. ಅದು ಜಾಗತಿಕ ಮಾರುಕಟ್ಟೆಯಲ್ಲಿ ಸಿಗುವ ಚೀನಾದ 'ಚೆರಿ ಆಟೋಮೊಬೈಲ್'ನ 'ಜೆಟೂರ್ ಟಿ2' ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿರಲಿದೆ ಎಂದು ಹೇಳಲಾಗಿದೆ. ಬನ್ನಿ, ಈ ಎಸ್‌ಯುವಿಯ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ (Price):

ನೂತನ ಜೆಎಸ್‌ಡಬ್ಲ್ಯೂ ಎಸ್‌ಯುವಿಯು (ಜೆಟೂರ್ ಟಿ2) ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗುವ ಸಾಧ್ಯತೆಯಿದೆ. ಕನಿಷ್ಠ ರೂ.15 ಲಕ್ಷ ಹಾಗೂ ಗರಿಷ್ಠ ರೂ.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಇದೇ ದೀಪಾವಳಿ ಹಬ್ಬದ ವೇಳೆಗೆ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ. ಬಹುತೇಕ ಹೊಸ ಹೆಸರಿನೊಂದಿಗೆ ಪರಿಚಯಗೊಳ್ಳಬಹುದು ಎಂದು ಊಹಿಸಲಾಗಿದೆ.

JSW Motors Jetour T2 Based Upcoming Suv Expected Price Engine Mileage Features Details

ವಿನ್ಯಾಸ & ಬಣ್ಣಗಳು (Design & Colours):

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿರಲಿದೆ. ದೊಡ್ಡದಾದ ಗ್ರಿಲ್ & ಬಂಪರ್‌ನ್ನು ಒಳಗೊಂಡಿರಲಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿರಲಿದೆ. ಸ್ಟೋನ್ ಗ್ರೇ, ಬೋರಾ ಬ್ಲೂ, ಸ್ನೋ ವೈಟ್ ಹಾಗೂ ಸಿಲ್ವರ್ ಸ್ನೋ ಎಂಬ ಬಣ್ಣಗಳೊಂದಿಗೂ ಲಭ್ಯವಾಗಬಹುದು ಎನ್ನಲಾಗಿದೆ.

ಸುತ್ತಳತೆ (Dimensions):

ಇದು ವಿಶಾಲವಾಗಿರಲಿದೆ. 4,785 ಎಂಎಂ ಉದ್ದ, 2,006 ಎಂಎಂ ಅಗಲ ಹಾಗೂ 1,880 ಎಂಎಂ ಎತ್ತರವಿರಲಿದೆ. ಜೊತೆಗೆ 220 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,800 ಎಂಎಂ ವೀಲ್‌ಬೇಸ್‌ನ್ನು ಹೊಂದಿರಲಿದೆ. ಬರೋಬ್ಬರಿ 2,194 ಕೆಜಿ ತೂಕವಿರುವ ನಿರೀಕ್ಷೆಯಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಹೊಸ ಎಸ್‌ಯುವಿಯು (ಜೆಟೂರ್ ಟಿ2) 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿರಲಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 475 ರಿಂದ 580 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಕಾರ್ಯಕ್ಷಮತೆ (Performance):

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿರಲಿದೆ. 1.5-ಲೀ. 4-ಸಿಲಿಂಡರ್ ಟರ್ಬೊ ಪೆಟ್ರೋಲ್, 1.5-ಲೀ. ಪ್ಲಗ್-ಇನ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 2-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನುಒಳಗೊಂಡಿರಲಿದೆ. ಹಾಗೆಯೇ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ. 9 ರಿಂದ 19 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುವ ಸಾಧ್ಯತೆಯಿದೆ.

ವೈಶಿಷ್ಟ್ಯಗಳು (Features):

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿರಲಿದೆ. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 12-ಸ್ಪೀಕರ್ ಸೋನಿ ಆಡಿಯೋ ಸಿಸ್ಟಮ್ ಹಾಗೂ ವೈರ್‌ಲೆಸ್ ಚಾರ್ಜರ್‌ನಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿರಬಹುದು ಎನ್ನಲಾಗಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ನೂತನ ಎಸ್‌ಯುವಿಯು (ಜೆಟೂರ್ ಟಿ2) ಸುರಕ್ಷತೆಗೂ ಹೆಸರುವಾಸಿಯಾಗಿರಲಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ರಿಂದ 10-ಏರ್‌ಬ್ಯಾಗ್‌, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

More from DriveSpark

Article Published On: Thursday, February 26, 2026, 11:12 [IST]
English summary
Jsw motors jetour t2 based upcoming suv expected price engine mileage features details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+