ಫುಲ್ ಡಿಮ್ಯಾಂಡ್.. ಅಬ್ಬರಿಸಿದ ಕಿಯಾ.. ಪ್ರತಿದಿನ 368 ಸೆಲ್ಟೋಸ್ ಎಸ್‌ಯುವಿಗಳು ಸೇಲ್ಸ್.. 10.99 ಲಕ್ಷ ರೂಪಾಯಿ!
ಕಿಯಾ ಸೆಲ್ಟೋಸ್ (Kia Seltos) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಫೆಬ್ರವರಿ - 2026) ಭಾರೀ ಸಂಖ್ಯೆಯೇ ಮಾರಾಟಗೊಂಡಿದೆ. ಒಟ್ಟು 10,308 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 6,446 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 59.91% ಬೆಳವಣಿಗೆಯಾಗಿದೆ.
ಇದೇ ಜನವರಿಯಲ್ಲಿಯೂ ನೂತನ 'ಕಿಯಾ ಸೆಲ್ಟೋಸ್' ಉತ್ತಮ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. 10,639 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಆದರೆ, 2025ರಲ್ಲಿ ಈ ಕಾರಿನ ಮಾರಾಟದಲ್ಲಿ ಸಾಕಷ್ಟು ಏರುಪೇರಾಗಿತ್ತು. ಡಿಸೆಂಬರ್‌ನಲ್ಲಿ 4,369 ಯುನಿಟ್‌ಗಳು, ನವೆಂಬರ್‌ನಲ್ಲಿ 6,305 ಯುನಿಟ್‌ಗಳು, ಅಕ್ಟೋಬರ್‌ನಲ್ಲಿ 7,130 ಯುನಿಟ್‌ಗಳು ಮತ್ತು ಸೆಪ್ಟೆಂಬರ್‌ನಲ್ಲಿ 5,816 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು.

ಈ ವರ್ಷ 'ಕಿಯಾ ಸೆಲ್ಟೋಸ್' ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಜನವರಿ 2 ರಂದು ಹೊಸ ತಲೆಮಾರಿನ ಮಾಡೆಲ್‌ನ್ನು ಬಿಡುಗಡೆಗೊಳಿಸಲಾಗಿತ್ತು. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಹೀಗಾಗಿ 'ಸೆಲ್ಟೋಸ್' ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.
'ಕಿಯಾ ಸೆಲ್ಟೋಸ್' ವಿಶೇಷತೆಗಳೇನು:
ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.10.99 ಲಕ್ಷ ಹಾಗೂ ಗರಿಷ್ಠ ರೂ.19.99 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮೇಲ್ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಹೆಚ್‌ಟಿಇ, ಹೆಚ್‌ಟಿಇ (ಒ), ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ (ಎ), ಜಿಟಿಎಕ್ಸ್ & ಜಿಟಿಎಕ್ಸ್ (ಎ) ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.

ನೂತನ 'ಸೆಲ್ಟೋಸ್' ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಹಾಗೂ ಕನೆಕ್ಟ್ಡ್ ಎಲ್‌ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಮ್ಯಾಗ್ಮಾ ರೆಡ್, ಐವರಿ ಸಿಲ್ವರ್ ಗ್ಲೋಸ್, ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ & ಅರೋರಾ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಹೆಚ್ಚು ವಿಶಾಲವಾಗಿದ್ದು, 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,690 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ಈ ಕಾರು ಬಲಿಷ್ಠವಾದ ಮೂರು ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ತಕ್ಕಂತೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, 7-ಸ್ಪೀಡ್ ಡಿಸಿಟಿ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ರಿಂದ 20.7 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5-ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 447 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್‌ಗಳು, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ 'ಕಿಯಾ ಸೆಲ್ಟೋಸ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಯ ಸಲುವಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಡಿಸೆಂಟ್ ಕಂಟ್ರೋಲ್, ಫ್ರಂಟ್/ರೇರ್ ಪಾರ್ಕಿಂಗ್ ಸೆನ್ಸಾರ್‌ಗಳು, ಹಿಲ್-ಸ್ಟಾರ್ಟ್ ಅಸಿಸ್ಟ್ ಹಾಗೂ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್‌ನ್ನು ಪಡೆದಿದೆ.
Image Source link: Youtube Shorts @kiaanshdahiya


Click it and Unblock the Notifications








