Maruti Suzuki: ಈ ಭಾರತ ನಿರ್ಮಿತ ಸ್ಟೈಲಿಶ್ ಮಾರುತಿ SUV ವಿದೇಶದಲ್ಲಿ ಮಾರಾಟಕ್ಕೆ.. 2 ಪಟ್ಟು ಅಧಿಕ ಬೆಲೆ!

ಈಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿತ್ತು ಸದ್ಯ, ಭಾರತ ನಿರ್ಮಿತ ಈ ಕಾರನ್ನು 'ಸುಜುಕಿ ಇ-ವಿಟಾರಾ' ಹೆಸರಿನೊಂದಿಗೆ ಬ್ರೆಜಿಲ್‌ನಲ್ಲೂ ಮಾರಾಟಕ್ಕೆ ತರಲಾಗಿದೆ ಎಂದು ವರದಿಯಾಗಿದೆ. ಅಲ್ಲಿ 269,990 ಡಾಲರ್ ಬೆಲೆಯನ್ನು ಹೊಂದಿದೆ. ಭಾರತೀಯ ರೂಪಾಯಿಗಳಲ್ಲಿ ರೂ. 48 ಲಕ್ಷ ಆಗುತ್ತದೆ.

ಇದು ಮಾರುತಿ ಸುಜುಕಿ ಇಂಡಿಯಾ'ದ ಮಾತೃ ಸಂಸ್ಥೆ 'ಸುಜುಕಿ ಮೋಟಾರ್ ಕಾರ್ಪೊರೇಷನ್'ನ ಕಾರ್ಯತಂತ್ರದ ಭಾಗವಾಗಿದೆ. ವಿಶ್ವದಾದ್ಯಂತ 100ಕ್ಕೂ ಹೆಚ್ಚು ದೇಶಗಳಲ್ಲಿ 'ಇ ವಿಟಾರಾ' ದೊರೆಯುವಂತೆ ಮಾಡುವ ಉದ್ದೇಶವನ್ನು ಕಂಪನಿಯು ಹೊಂದಿದೆ. ಈಗಾಗಲೇ ಗುಜರಾತ್‌ನ ಹಂಸಲ್‌ಪುರದಲ್ಲಿ ಸಿದ್ದಗೊಳ್ಳುವ 'ಇ ವಿಟಾರಾ'ವನ್ನು ಜಪಾನ್ ಹಾಗೂ ಯುಕೆ ಸೇರಿದಂತೆ 29 ಐರೋಪ್ಯ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ.

Made In India Suzuki e Vitara launched In Brazil Details

ಬ್ರೆಜಿಲ್‌ನಲ್ಲಿ ನೂತನ ಸುಜುಕಿ ಇ-ವಿಟಾರಾ (Suzuki e Vitara) ವೋಲ್ವೋ ಇಎಕ್ಸ್30 ಹಾಗೂ ಬಿವೈಡಿ ಯುವಾನ್ ಪ್ರೊ ಕಾರುಗಳೊಂದಿಗೆ ಸ್ಪರ್ಧಿಸಬೇಕಾಗಿದೆ. ಪ್ರಿ-ಬುಕ್ಕಿಂಗ್‌ನ್ನು ತೆರೆಯಲಾಗಿದೆ. ಅತಿ ಶೀಘ್ರದಲ್ಲೇ ಸಂಪೂರ್ಣ ದರ ಪಟ್ಟಿಯನ್ನು ಘೋಷಣೆ ಮಾಡಲಾಗುತ್ತದೆ ಎಂಬ ವಿವರಗಳು ಲಭ್ಯವಾಗಿವೆ. ಪ್ರಸ್ತುತ ಖರೀದಿಗೆ ದೊರೆಯುವ ಸ್ವದೇಶಿ 'ಮಾರುತಿ ಸುಜುಕಿ ಇ-ವಿಟಾರಾ'ದಂತೆ ಹೊಸ 'ಸುಜುಕಿ ಇ-ವಿಟಾರಾ'ವು ಇರಲಿದೆ. ವಿನ್ಯಾಸ ಹಾಗೂ ವೈಶಿಷ್ಟ್ಯಗಳಲ್ಲಿ ಯಾವುದೇ ಬದಲಾವಣೆಗಳಿರವುದಿಲ್ಲ.

ಭಾರತದಲ್ಲಿ ಸಿಗುವ 'ಮಾರುತಿ ಇ-ವಿಟಾರಾ' ವಿಶೇಷತೆಗಳೇನು:

ಈ ಎಲೆಕ್ಟ್ರಿಕ್ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ. ರೂ.15.99 ಲಕ್ಷದಿಂದ ರೂ.20.01 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬ್ಯಾಟರಿ-ಆಸ್-ಎ-ಸರ್ವಿಸ್ (ಬಾಸ್) ಯೋಜನೆಯಡಿಯೂ ಖರೀದಿಗೆ ಲಭ್ಯವಿದೆ. ಆ ಮಾಡೆಲ್ ರೂ.10.99 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿದೆ. ಪ್ರತಿ ಕಿಲೋಮೀಟರ್‌ ಸಂಚಾರಕ್ಕೆ ನಿಗದಿತ ಶುಲ್ಕವನ್ನು ಪಾವತಿಸಬೇಕು.

ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಗ್ರ್ಯಾಂಡಿಯರ್ ಗ್ರೇ, ನೆಕ್ಸಾ ಬ್ಲ್ಯೂ, ಆಪುಲೆಂಟ್ ರೆಡ್ & ಬ್ಲ್ಯೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಹೆಚ್ಚು ವಿಶಾಲವಾಗಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಇ-ವಿಟಾರಾ' ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ ಕ್ರಮವಾಗಿ 440 ರಿಂದ 543 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

ಈ ಎಲೆಕ್ಟ್ರಿಕ್ ಕಾರು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 236 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1-ಇಂಚು), ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟ್‌ರ್, 2-ಸ್ಪೋಕ್ ಸ್ಟೀರಿಂಗ್ ವೀಲ್, ಫಿಕ್ಸೆಡ್ ಗ್ಲಾಸ್ ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ.

ಇದು ಸುರಕ್ಷತೆಯಿಂದಲೂ ಖ್ಯಾತಿ ಗಳಿಸಿದೆ. 'ಭಾರತ್ ಎನ್‌ಸಿಎಪಿ'ಯಿಂದ 5 ಸ್ಟಾರ್ ರೇಟಿಂಗ್ ಹೊಂದುವಲ್ಲಿಯೂ ಯಶಸ್ವಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 360-ಡಿಗ್ರಿ ಕ್ಯಾಮೆರಾ, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

More from DriveSpark

Article Published On: Thursday, March 5, 2026, 16:01 [IST]
English summary
Made in india suzuki e vitara launched in brazil details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+