Mahindra: ಅಬ್ಬರಿಸಿದ ಮಹೀಂದ್ರಾ.. ಈ ಕಾರಿಗೆ ಮುಗಿಬಿದ್ದ ಜನ.. 682 ಕಿ.ಮೀ ರೇಂಜ್.. ಎಲ್ಲವು ಸೇಲ್!
2025ರ ಆಗಸ್ಟ್ 14ರಂದು ಹೊಚ್ಚ ಹೊಸ ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ (Mahindra BE 6 Batman Edition) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಪರಿಚಯಿಸಲಾಗಿತ್ತು. ಕೆಲವೇ ದಿನಗಳಲ್ಲಿ ಬುಕ್ಕಿಂಗ್‌ನ್ನು ತೆರೆಯಲಾಗಿತ್ತು. ಬರೀ 135 ಸೆಕೆಂಡುಗಳಲ್ಲಿ ಎಲ್ಲ 999 ಕಾರುಗಳು ಸೋಲ್ಡ್ ಔಟ್ ಆಗಿದ್ದವು. ಈಚೆಗೆ ಗ್ರಾಹಕರ ಒತ್ತಡದಿಂದಾಗಿ ಕಂಪನಿಯು ಇದೇ ಎಸ್‌ಯುವಿಯನ್ನು ಮರು ಬಿಡುಗಡೆಗೊಳಿಸಿತ್ತು. ಮೊದಲಿದಂತೆ 999 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡುವುದಾಗಿ ಘೋಷಣೆ ಮಾಡಿತ್ತು. ನಿನ್ನೆಯಿಂದ ಆರ್ಡರ್ ತೆಗೆದುಕೊಳ್ಳುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. 7 ನಿಮಿಷದಲ್ಲೇ ಅವೆಲ್ಲ ಮಾರಾಟವಾಗಿವೆ.
ನೂತನ 'ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್' ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ರೂ.28.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಮೇಲ್ಮಧ್ಯಮ ಹಾಗೂ ಶ್ರೀಮಂತ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ಇದೇ ಏಪ್ರಿಲ್ 10 ರಿಂದ ವಿತರಣೆಯನ್ನು ಶುರು ಮಾಡಲಾಗುತ್ತದೆ.

ಮಹೀಂದ್ರಾ ಮತ್ತು ಡಿಸಿ ಕಾಮಿಕ್ಸ್ ಸಿನಿಮಾ ನಿರ್ಮಾಣ ಸಂಸ್ಥೆ ವಾರ್ನರ್ ಬ್ರದರ್ಸ್ ಮಧ್ಯೆ ಒಪ್ಪಂದವಾಗಿದೆ. ಇದರಿಂದಾಗಿ ಹೊಸ 'ಬ್ಯಾಟ್‌ಮ್ಯಾನ್ ಎಡಿಷನ್'ನ ಹೊರಭಾಗದ ವಿನ್ಯಾಸದಲ್ಲಿ ಬ್ಯಾಟ್‌ಮ್ಯಾನ್ ಸಿನಿಮಾ & ಕಾಮಿಕ್ಸ್‌ಗಳಲ್ಲಿರುವ ಅಂಶಗಳನ್ನು ಹೆಚ್ಚಾಗಿ ಕಾಣಬಹುದಾಗಿದೆ. ಕಸ್ಟಮ್ ಸ್ಯಾಟಿನ್ ಬ್ಲ್ಯಾಕ್ ಬಾಡಿ ಕಲರ್, ಫ್ರಂಟ್ ಡೋರ್‌ನಲ್ಲಿ ಕಸ್ಟಮ್ ಬ್ಯಾಟ್‌ಮ್ಯಾನ್ ಡೆಕಲ್‌ಗಳು ಮತ್ತು ಟೈಲ್‌ಗೇಟ್‌ನಲ್ಲಿ ಡಾರ್ಕ್ ನೈಟ್ ಬ್ಯಾಡ್ಜ್‌ನ್ನು ಒಳಗೊಂಡಿದೆ.
ಇದರೊಂದಿಗೆ ಸ್ಟ್ಯಾಂಡರ್ಡ್ 'ಮಹೀಂದ್ರಾ ಬಿಇ 6' ಕಾರಿಂದಂತೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, 'ಜೆ' ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್‌ಗಳು, ದೊಡ್ಡದಾಗಿರುವ 20-ಇಂಚಿನ ವೀಲ್‌ಗಳು, ಫ್ಲಶ್ ಪಾಪ್ ಔಟ್ ಡೋರ್ ಹ್ಯಾಂಡಲ್‌ಗಳು, ಫಂಕಿ ಸ್ಪಾಯ್ಲರ್ ಹಾಗೂ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ.
ಈ ಕಾರು ಸಾಕಷ್ಟು ವಿಶಾಲವಾಗಿದೆ. 4,371 ಮಿ.ಮೀ ಉದ್ದ, 1,907 ಮಿ.ಮೀ ಅಗಲ ಮತ್ತು 1,627 ಮಿ.ಮೀ ಎತ್ತರವಿದೆ. 207 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,775 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 2,070 ಕೆಜಿ ತೂಗುತ್ತದೆ.
ನೂತನ 'ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 682 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 285 ಪಿಎಸ್ ಅಶ್ವ ಶಕ್ತಿ ಮತ್ತು 380 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.
ಹೊಸ 'ಬ್ಯಾಟ್‌ಮ್ಯಾನ್ ಎಡಿಷನ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ & ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ ಬೃಹದಾಕಾರದ 455 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಆಲ್-ಬ್ಲ್ಯಾಕ್ ಪೇಂಟ್ ಸ್ಕೀಮ್‌ನ್ನು ಒಳಗೊಂಡಿದೆ. ಜೊತೆಗೆ ಇನ್ಫೋಟೈನ್‌ಮೆಂಟ್ & ಇನ್ಸ್ಟ್ರುಮೆಂಟೇಶನ್ ಸ್ಕ್ರೀನ್‌ಗಳು ಕಸ್ಟಮ್ ಬ್ಯಾಟ್‌ಮ್ಯಾನ್ ಅನಿಮೇಷನ್‌ನ್ನು ಹೊಂದಿವೆ. ಟೂ ಸ್ಪೋಕ್ ಸ್ಟೀರಿಂಗ್ ವೀಲ್, ಮ್ಯಾಗ್ನೆಟಿಕ್ ಕೀ ಫಾಬ್‌ಗಳು, ವೆಂಟಿಲೇಟೆಡ್ ಸೀಟ್‌ಗಳು, ಹರ್ಮನ್ ಮ್ಯೂಸಿಕ್ ಸಿಸ್ಟಮ್ ಹಾಗೂ ವೈರ್‌ಲೆಸ್ ಚಾರ್ಜರ್‌ಗಳಂತಹ ವೈಶಿಷ್ಟ್ಯಗಳನ್ನು ಪಡೆದಿದೆ.
ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








