Mahindra: 7-ಸೀಟರ್‌ನ ಜನಪ್ರಿಯ ಮಹೀಂದ್ರಾ ಕಾರಿದು.. ಬಿಸಿ ಪೂರಿಯಂತೆ ಸೇಲ್ಸ್.. 13.49 ಲಕ್ಷ ರೂಪಾಯಿ!
ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ಪ್ರಮುಖ ಎಸ್‌ಯುವಿ ಎಂದೇ ಮನೆ ಮಾತಾಗಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಮುಗುಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ 2026ರ ಫೆಬ್ರವರಿ ತಿಂಗಳಲ್ಲೂ ಭಾರೀ ಸಂಖ್ಯೆಯೇ ಮಾರಾಟಗೊಂಡಿದೆ. ಒಟ್ಟು 14,665 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 13,618 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 7.69% ಬೆಳವಣಿಗೆಯಾಗಿದೆ.
ನೂತನ 'ಮಹೀಂದ್ರಾ ಸ್ಕಾರ್ಪಿಯೋ' ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳಲು ಹಲವು ಕಾರಣಗಳಿವೆ. ಇದು ಉತ್ತಮ ನಿರ್ಮಾಣ ಗುಣಮಟ್ಟವನ್ನು ಹೊಂದಿದ್ದು, ಹೆಚ್ಚಿನ ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಹೀಗಾಗಿ, ಉತ್ತಮವಾಗಿ ಮಾರಾಟವಾಗುತ್ತಿದೆ ಎಂದು ಹೇಳಲಾಗಿದೆ. ಇದು 'ಸ್ಕಾರ್ಪಿಯೋ ಎನ್' ಮತ್ತು 'ಸ್ಕಾರ್ಪಿಯೋ ಕ್ಲಾಸಿಕ್' ಎಂಬ 2 ರೂಪದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.

ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ವಿಶೇಷತೆಗಳೇನು:
ಇದು ರೂ.13.49 ಲಕ್ಷದಿಂದ ರೂ.24.34 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಝಡ್2, ಝಡ್4, ಝಡ್6, ಝಡ್8 ಎಸ್, ಝಡ್8, ಝಡ್8 ಟಿ, ಮತ್ತು ಝಡ್8 ಎಲ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.
ಈ ಎಸ್‌ಯುವಿಯು ತುಂಬಾ ವಿಶಾಲವಾಗಿದೆ. 4,662 ಎಂಎಂ ಉದ್ದ, 1,917 ಎಂಎಂ ಅಗಲ ಹಾಗೂ 1,857 ಎಂಎಂ ಎತ್ತರವಿದೆ. ಜೊತೆಗೆ 187 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,750 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಎವರೆಸ್ಟ್ ವೈಟ್, ಸ್ಟೆಲ್ತ್ ಬ್ಲ್ಯಾಕ್, ವ್ಯಾಲಿರಿಯನ್ ಸಿಲ್ವರ್, ಡೀಪ್ ಫಾರೆಸ್ಟ್ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಸ್ಕಾರ್ಪಿಯೋ ಎನ್' ಬೆಲೆಗೆ ತಕ್ಕಂತೆ ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 2.2-ಲೀಟರ್ ಡೀಸೆಲ್ ಮತ್ತು 2.0-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 12.12 ರಿಂದ 15.94 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 11 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಇದು 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆಯಲಿದೆ. ಹೆಚ್ಚಿನ ಲಗೇಜ್ ಸಾಗಿಸಲು 460 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಸಹ ಖರೀದಿಗೆ ಲಭ್ಯ:
ಈ ಎಸ್‌ಯುವಿಯು ರೂ.12.98 ಲಕ್ಷದಿಂದ ರೂ.16.70 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಸ್ ಮತ್ತು ಎಸ್11 ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ತನ್ನದಾಗಿಸಿಕೊಂಡಿದೆ. ಎವರೆಸ್ಟ್ ವೈಟ್, ಗ್ಯಾಲಕ್ಸಿ ಗ್ರೇ, ಸ್ಟೆಲ್ತ್ ಬ್ಲ್ಯಾಕ್, ಮೊಲ್ಟನ್ ರೆಡ್ ರೇಜ್ ಮತ್ತು ಡೈಮಂಡ್ ವೈಟ್ ಎಂಬ ಬಣ್ಣಗಳನ್ನು ಪಡೆದಿದೆ. ಸಾಕಷ್ಟು ದೊಡ್ಡದಾಗಿದೆ. 209 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,680 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ಇದು 2.2-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 14.44 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7/ 9 ಆಸನಗಳನ್ನು ಒಳಗೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು & ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಪಡೆದಿದೆ.


Click it and Unblock the Notifications








