Mahindra: ಒಂದೇ ಕಾರಿನಲ್ಲಿ ಒಮ್ಮೆಲೇ 9 ಜನ ಹೋಗಬಹುದು.. ಈ ಜನಪ್ರಿಯ ಮಹೀಂದ್ರಾ SUV ಕುರಿತ ಪ್ರಮುಖಾಂಶಗಳು!

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಬೃಹದಾಕಾರದ ಎಸ್‌ಯುವಿಯಾಗಿದೆ. ಈ ಕಾರು ನೋಡಲು ತುಂಬಾ ಆಕರ್ಷಕವಾಗಿದ್ದು, ಹಲವು ನವೀನತೆಗಳಿಗೂ ಸಾಕ್ಷಿಯಾಗಿದೆ. ನೀವು ಹೊಚ್ಚ ಹೊಸ ಎಸ್‌ಯುವಿವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಸ್ಕಾರ್ಪಿಯೋ ಕ್ಲಾಸಿಕ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಕಾರಿನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ನೂತನ 'ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್' ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.12.98 ಲಕ್ಷ ಹಾಗೂ ಗರಿಷ್ಠ ರೂ.16.70 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ಎಸ್ (S) ಹಾಗೂ ಎಸ್11 (S11) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Mahindra Scorpio Classic Price Design Colours Engine Mileage Features And All Details

ವಿನ್ಯಾಸ & ಬಣ್ಣಗಳು (Design & Colours):

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲ್ಯಾಂಪ್‌ಗಳು, ವರ್ಟಿಕಲ್ ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 17-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಎವರೆಸ್ಟ್ ವೈಟ್, ಗ್ಯಾಲಕ್ಸಿ ಗ್ರೇ, ಸ್ಟೆಲ್ತ್ ಬ್ಲ್ಯಾಕ್, ಮೊಲ್ಟನ್ ರೆಡ್ ರೇಜ್ ಹಾಗೂ ಡೈಮಂಡ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimensions):

ಇದು ಹೆಚ್ಚು ವಿಶಾಲವಾಗಿದೆ. 4,456 ಮಿ.ಮೀ ಉದ್ದ, 1,820 ಮಿ.ಮೀ ಅಗಲ ಮತ್ತು 1,995 ಮಿ.ಮೀ ಎತ್ತರವಿದೆ. 209 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,680 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,950 ಕೆಜಿ ತೂಕವಿದೆ.

Mahindra Scorpio Classic Price Design Colours Engine Mileage Features And All Details

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಹೊಸ 'ಸ್ಕಾರ್ಪಿಯೋ ಕ್ಲಾಸಿಕ್' 7 ಹಾಗೂ 9 ಆಸನ ಆಯ್ಕೆಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ಕೊಂಡೊಯ್ಯಲು 3ನೇ ಸಾಲಿನ ಸೀಟ್‌ಗಳನ್ನು ಮಡಿಸಿದಾಗ, 460 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಲಭ್ಯವಾಗುತ್ತದೆ.

ಕಾರ್ಯಕ್ಷಮತೆ (Performance):

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 2.2-ಲೀ. 4-ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 3,750 ಆರ್‌ಪಿಎಂನಲ್ಲಿ 130 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 2,800 ಆರ್‌ಪಿಎಂನಲ್ಲಿ 300 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಇದು ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 14.44 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 60 ಲೀಟರ್‌ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 13 ಸೆಕೆಂಡುಗಳಲ್ಲಿ 13 ರಿಂದ 14 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ವೈಶಿಷ್ಟ್ಯಗಳು (Features):

ನೂತನ 'ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಬ್ಲೂಟೂತ್ ಕನೆಕ್ಟಿವಿಟಿ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೈಟ್ ಅಡ್ಜಸ್ಟೇಬಲ್ ಡ್ರೈವಿಂಗ್ ಸೀಟ್, ಕ್ರೂಸ್ ಕಂಟ್ರೋಲ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೆನ್ಸಾರ್‌ಗಳು, ಪ್ಯಾನಿಕ್ ಬ್ರೇಕ್ ಇಂಡಿಕೇಟರ್ ಹಾಗೂ ಸ್ಪೀಡ್ ಅಲರ್ಟ್ ಸಿಸ್ಟಮ್‌ನ್ನು ಹೊಂದಿದೆ.

ಪ್ರತಿಸ್ಪರ್ಧಿ ಕಾರುಗಳು (Rival Cars):

ಇದಕ್ಕೆ ಹಲವು ಎದುರಾಳಿಗಳಿವೆ. ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto), ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis) ಹಾಗೂ ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Thursday, February 19, 2026, 8:30 [IST]
English summary
Mahindra scorpio classic price design colours engine mileage features and all details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+