Mahindra Thar: ಹೊಸ ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್ ಬಿಡುಗಡೆ.. ಬೆಲೆ ಇಷ್ಟೇನಾ, ವಿಶೇಷತೆಗಳೇನು?
ಹೊಚ್ಚ ಹೊಸ ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್ (Mahindra Thar Roxx Star Edition) ಶುಕ್ರವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದೊಂದು ಆಫ್-ರೋಡ್ ಎಸ್‌ಯುವಿಯಾಗಿದೆ. ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದ್ದು, ಹೊರ ಹಾಗೂ ಒಳಭಾಗದ ವಿನ್ಯಾಸದಲ್ಲಿ ಕೆಲವೊಂದು ಕಾಸ್ಮೆಟಿಕ್ ಬದಲಾವಣೆಗಳನ್ನು ಪಡೆದುಕೊಂಡಿದೆ. ಬನ್ನಿ, ಈ ಕಾರಿನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ನೂತನ 'ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್' ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.16.85 ಲಕ್ಷ ಹಾಗೂ ಗರಿಷ್ಠ ರೂ.18.35 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಲ್ಲ ವರ್ಗದವರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಗಾಲಿದೆ.

ಇದು ಸ್ಟ್ಯಾಂಡರ್ಡ್ 'ಮಹೀಂದ್ರಾ ಥಾರ್ ರಾಕ್ಸ್'ನಂತೆ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು ಹಾಗೂ ಎಲ್ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ. ಇದರೊಂದಿಗೆ ಸಿ-ಪಿಲ್ಲರ್‌ನಲ್ಲಿ 'ಸ್ಟಾರ್ ಎಡಿಷನ್' ಬ್ಯಾಡ್ಜ್ ಹೊಂದಿದ್ದು, ಪಿಯಾನೋ-ಬ್ಲ್ಯಾಕ್ ಬಣ್ಣದಲ್ಲಿರುವ ಗ್ರಿಲ್ ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.
ಈ 'ಥಾರ್ ರಾಕ್ಸ್ ಸ್ಟಾರ್ ಎಡಿಷನ್' ಹೊಸದಾದ 'ಸಿಟ್ರಿನ್ ಯೆಲ್ಲೋ' ಬಣ್ಣವನ್ನು ಹೊಂದಿದೆ. ಜೊತೆಗೆ ಟ್ಯಾಂಗೋ ರೆಡ್, ಎವರೆಸ್ಟ್ ವೈಟ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 4,428 ಮಿ.ಮೀ ಉದ್ದ, 1,870 ಮಿ.ಮೀ ಅಗಲ ಮತ್ತು 1,923 ಮಿ.ಮೀ ಎತ್ತರವಿದೆ. 226 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,850 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 2,288 ಕೆಜಿ ತೂಕವಿದೆ.

ನೂತನ 'ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 447 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಇದು ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಹೊಂದಿದೆ. ಈ ಕಾರಿನ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 177 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 380 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಆರ್‌ಡಬ್ಲ್ಯೂಡಿ (ರೇರ್-ವೀಲ್-ಡ್ರೈವ್) ಟೆಕ್ನಾಲಜಿಯನ್ನು ಬೆಂಬಲಿಸುತ್ತದೆ.

ಮತ್ತೊಂದು 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 175 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 400 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಆರ್‌ಡಬ್ಲ್ಯೂಡಿ (ರೇರ್-ವೀಲ್-ಡ್ರೈವ್) ಮತ್ತು 4ಡಬ್ಲ್ಯೂಡಿ (4-ವೀಲ್-ಡ್ರೈವ್) ಟೆಕ್ನಾಲಜಿಗಳಿಗೆ ಅನುಗುಣವಾಗಿದೆ.
'ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್' ಕ್ಯಾಬಿನ್ ವಿನ್ಯಾಸವು ಪ್ರೀಮಿಯಂ ಆಗಿದೆ. ಆಲ್-ಬ್ಲ್ಯಾಕ್ ಥೀಮ್‌ನ್ನು ಒಳಗೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಸೀಟ್ ಬೆಲ್ಟ್ ರಿಮೈಂಡರ್‌ಗಳು, ಹಿಲ್-ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್ ಹಾಗೂ 4-ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








