Mahindra: ಕಲ್ಲು ಬಂಡೆಯಂತಹ ನೂತನ ಮಹೀಂದ್ರಾ SUV ಕುರಿತ ಪ್ರಮುಖಾಂಶಗಳಿವು.. ರೂ.16.85 ಲಕ್ಷ, ಮೊನ್ನೆ ಬಿಡುಗಡೆ!

ಇದೇ ಶುಕ್ರವಾರ ನೂತನ ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್ (Mahindra Thar Roxx Star Edition) ಬಿಡುಗಡೆಗೊಂಡಿದೆ. ಸ್ಟ್ಯಾಂಡರ್ಡ್ 'ಥಾರ್ ರಾಕ್ಸ್'ಗೆ ಹೋಲಿಕೆ ಮಾಡಿದರೆ, ವಿನ್ಯಾಸದಲ್ಲಿ ಹಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಪಡೆದುಕೊಂಡಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಇದೇ 'ಥಾರ್ ರಾಕ್ಸ್ ಸ್ಟಾರ್ ಎಡಿಷನ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಎಸ್‌ಯುವಿಯ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಪ್ರಮುಖಾಂಶಗಳನ್ನು ತಿಳಿಯೋಣ.

ಬೆಲೆ (Price):

'ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್' ಒಂದಷ್ಟು ಹೊಸತನಗಳಿಗೆ ಸಾಕ್ಷಿಯಾಗಿದೆ. ಹೀಗಾಗಿ, ಕೊಂಚ ಮಟ್ಟಿಗೆ ದುಬಾರಿ ದರವನ್ನು ಪಡೆದಿದೆ. ರೂಪಾಂತರಗಳನ್ನು ಅವಲಂಭಿಸಿ ರೂ.16.85 ಲಕ್ಷದಿಂದ ರೂ.18.35 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದ್ದು, ಆಫ್-ರೋಡ್ ಪ್ರಿಯರಿಗೆ ಹೇಳಿ ಮಾಡಿಸಿದ ರೀತಿಯಲ್ಲಿದೆ.

Mahindra Thar Roxx Star Edition Top Things You Should Must Know

ವಿನ್ಯಾಸ & ಬಣ್ಣಗಳು (Design & Colours):

ಈ ಎಸ್‌ಯುವಿಯು ಪ್ರಸ್ತುತವಿರುವ 'ಥಾರ್ ರಾಕ್ಸ್'ನಂತೆಯೇ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್‌ಲೈಟ್‌ಗಳನ್ನು ಪಡೆದಿದೆ. ಹೆಚ್ಚುವರಿಯಾಗಿ ಸಿ-ಪಿಲ್ಲರ್‌ನಲ್ಲಿ 'ಸ್ಟಾರ್ ಎಡಿಷನ್' ಬ್ಯಾಡ್ಜ್ ಹೊಂದಿದ್ದು, ಪಿಯಾನೋ-ಬ್ಲ್ಯಾಕ್ ಬಣ್ಣದಲ್ಲಿರುವ ಗ್ರಿಲ್‌ ಹಾಗೂ ಬೃಹದಾಕಾರದ 19-ಇಂಚಿನ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ. ಸಿಟ್ರಿನ್ ಯೆಲ್ಲೋ, ಟ್ಯಾಂಗೋ ರೆಡ್, ಎವರೆಸ್ಟ್ ವೈಟ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಸುತ್ತಳತೆ (Dimension):

ಇದು ಸಾಕಷ್ಟು ವಿಶಾಲ ಗಾತ್ರದಲ್ಲಿದೆ.4,428 ಎಂಎಂ ಉದ್ದ, 1,870 ಎಂಎಂ ಅಗಲ ಹಾಗೂ 1,923 ಎಂಎಂ ಎತ್ತರವಿದೆ. ಜೊತೆಗೆ 226 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,850 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 2,288 ಕೆಜಿ ತೂಕವಿದೆ.

Mahindra Thar Roxx Star Edition Top Things You Should Must Know

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಹೊಸ 'ಥಾರ್ ರಾಕ್ಸ್ ಸ್ಟಾರ್ ಎಡಿಷನ್' 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ಮಾಡಬಹುದು. ವೀಕೆಂಡ್‌ಗಳಲ್ಲಿ ಲಾಂಗ್ ಡ್ರೈವ್ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 447 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಕಾರ್ಯಕ್ಷಮತೆ (Performance):

ಈ ಕಾರು 2 ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀ. ಟರ್ಬೊ ಪೆಟ್ರೋಲ್ ಹಾಗೂ 2.2-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 12.4 ರಿಂದ 15.2 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯಗಳು (Features):

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಆಲ್ ಬ್ಲ್ಯಾಕ್ ಥೀಮ್‌ನ್ನು ಹೊಂದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ರೇರ್ ಎಸಿ ವೆಂಟ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ನೂತನ 'ಮಹೀಂದ್ರಾ ಥಾರ್ ರಾಕ್ಸ್ ಸ್ಟಾರ್ ಎಡಿಷನ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಸೀಟ್ ಬೆಲ್ಟ್ ರಿಮೈಂಡರ್‌ಗಳು, ಹಿಲ್ ಹೋಲ್ಡ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್ ಮತ್ತು 4 ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Sunday, January 25, 2026, 13:30 [IST]
English summary
Mahindra thar roxx star edition top things you should must know
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+