Thar: ನಂ.1 ಆಫ್-ರೋಡ್ SUV ಮಹೀಂದ್ರಾ ಥಾರ್‌ಗೆ ಜೈ ಜೈ ಎಂದ ಜನ.. ಭಾರೀ ಸಂಖ್ಯೆಯಲ್ಲಿ ಸೇಲ್ಸ್.. ರೂ.9.99 ಲಕ್ಷ!

ಮಹೀಂದ್ರಾ ಥಾರ್‌ (Mahindra Thar) ನಂಬರ್ 1 ಆಫ್-ರೋಡ್ ಎಸ್‌ಯುವಿಯಾಗಿದ್ದು, ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ 2026ರ ಫೆಬ್ರವರಿ ತಿಂಗಳಲ್ಲೂ 'ಥಾರ್‌' ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 11,047 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 9,248 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 19.45 ಬೆಳವಣಿಗೆಯಾಗಿದೆ.

ಸ್ಟ್ಯಾಂಡರ್ಡ್ 'ಮಹೀಂದ್ರಾ ಥಾರ್‌' ವಿಶೇಷತೆಗಳೇನು:

ಇದು 3-ಡೋರ್ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.9.99 ಲಕ್ಷ ಹಾಗೂ ಗರಿಷ್ಠ ರೂ.17.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಎಕ್ಸ್‌ಟಿ & ಎಲ್ಎಕ್ಸ್‌ಟಿ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

Mahindra Thar Suv February 2026 Sales Details

ಈ ಎಸ್‌ಯುವಿಯು ಸಾಕಷ್ಟು ವಿಶಾಲವಾಗಿದೆ. 3,985 ಮಿ.ಮೀ ಉದ್ದ, 1,820 ಮಿ.ಮೀ ಅಗಲ ಹಾಗೂ 1,855 ಮಿ.ಮೀ ಎತ್ತರವಿದೆ. ಜೊತೆಗೆ 226 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಟ್ಯಾಂಗೋ ರೆಡ್, ಡೀಪ್ ಫಾರೆಸ್ಟ್, ಗ್ಯಾಲಕ್ಸಿ ಗ್ರೇ, ಸ್ಟೀಲ್ತ್ ಬ್ಲ್ಯಾಕ್ & ಎವರೆಸ್ಟ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಥಾರ್‌' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ಡೀಸೆಲ್, 2.2-ಲೀ. ಡೀಸೆಲ್ ಹಾಗೂ 2.0-ಲೀ. ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ತಕ್ಕಂತೆ 6-ಸ್ಪೀಡ್ ಮ್ಯಾನುವಲ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 9 ರಿಂದ 15.2 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 155 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 10.2 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Mahindra Thar Suv February 2026 Sales Details

ಇದು 4 ಆಸನ ಆಯ್ಕೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 10.25-ಇಂಚಿನ ಹೆಚ್‌ಡಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ರಿಮೋಟ್ ಕೀಲೆಸ್ ಎಂಟ್ರಿ, ರೇರ್ ಎಸಿ ವೆಂಟ್‌ಗಳು ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾದಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಹಿಲ್ ಡಿಸೆಂಟ್ ಕಂಟ್ರೋಲ್‌ನ್ನು ಹೊಂದಿದೆ.

'ಮಹೀಂದ್ರಾ ಥಾರ್‌ ರಾಕ್ಸ್' ಸಹ ಖರೀದಿಗೆ ಲಭ್ಯ:

ಈ ಎಸ್‌ಯುವಿಯು 5-ಡೋರ್‌ಗಳನ್ನು ಒಳಗೊಂಡಿದೆ. ರೂ.12.39 ಲಕ್ಷದಿಂದ ರೂ.22.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಂಎಕ್ಸ್1, ಎಂಎಕ್ಸ್3, ಎಂಎಕ್ಸ್5, ಎಎಕ್ಸ್3ಎಲ್, ಎಎಕ್ಸ್5ಎಲ್ ಹಾಗೂ ಎಎಕ್ಸ್7ಎಲ್ ರೂಪಾಂತರಗಳೊಂದಿಗೂ ಲಭ್ಯವಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು 19-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಎವರೆಸ್ಟ್ ವೈಟ್, ಸ್ಟೆಲ್ತ್ ಬ್ಲ್ಯಾಕ್, ನೆಬ್ಯುಲಾ ಬ್ಲೂ, ಟ್ಯಾಂಗೋ ರೆಡ್, ಡೀಪ್ ಫಾರೆಸ್ಟ್ ಹಾಗೂ ಸಿಟ್ರಿನ್ ಯೆಲ್ಲೋ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Mahindra Thar Suv February 2026 Sales Details

ಹೊಸ 'ಥಾರ್‌ ರಾಕ್ಸ್' ತುಂಬಾ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2.0-ಲೀಟರ್ ಟರ್ಬೊ ಪೆಟ್ರೋಲ್ & 2-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 12.4 ರಿಂದ 15.2 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 155 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 9.54 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದು 5 ಆಸನಗಳನ್ನು ಒಳಗೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ರೇರ್-ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) & ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

More from DriveSpark

Article Published On: Thursday, March 19, 2026, 17:35 [IST]
English summary
Mahindra thar suv february 2026 sales details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+