ಬಹುನಿರೀಕ್ಷಿತ ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ SUV ಬಿಡುಗಡೆ.. 7-ಸೀಟರ್.. ಸ್ಟೈಲಿಶ್ ಕಾರಿದು! ಬೆಲೆ ಎಷ್ಟು?

ಬಹುನಿರೀಕ್ಷಿತ ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO) ಎಸ್‌ಯುವಿ, ಸೋಮವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದು 'ಎಕ್ಸ್‌ಯುವಿ700'ನ ಫೇಸ್‌ಲಿಫ್ಟ್ ಮಾಡೆಲ್ ಆಗಿದೆ. ಈ ಕಾರಿನ ವಿನ್ಯಾಸದಲ್ಲಿ ಹಲವು ಬದಲಾವಣೆಗಳಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿದೆ. ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. ಬನ್ನಿ.. ನೂತನ 'ಎಕ್ಸ್‌ಯುವಿ 7ಎಕ್ಸ್ಒ'ನ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಹೊಚ್ಚ ಹೊಸ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.13.66 ಲಕ್ಷ ಹಾಗೂ ಗರಿಷ್ಠ ರೂ.24.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಪರಿಚಯಾತ್ಮಕ ಬೆಲೆಗಳು ಮೊದಲ 40,000 ಕಾರುಗಳ ವಿತರಣೆಗಳಿಗೆ ಮಾತ್ರ ಮಾನ್ಯವಾಗಿರಲಿದೆ. ಎಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7, ಎಎಕ್ಸ್7 ಟಿ ಹಾಗೂ ಎಎಕ್ಸ್7 ಎಲ್ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Mahindra XUV 7XO SUV Launched In India Rs 13 66 Lakh Starting Price Details

ಈ ಕಾರಿನ ಬುಕ್ಕಿಂಗ್ ಪ್ರಕ್ರಿಯೆಗೆ ಜನವರಿ 14 ರಿಂದ ಚಾಲನೆ ನೀಡಲಾಗುತ್ತದೆ. ಆಸಕ್ತ ಗ್ರಾಹಕರು ರೂ.21,000 ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಕಾಯ್ದಿರಬಹುದು. ವಿಶೇಷವಾಗಿ ಅಂದೇ ಪ್ರಿ-ಬುಕ್ಕಿಂಗ್ ಮಾಡಿದ ಗರಿಷ್ಠ ಶ್ರೇಣಿ ರೂಪಾಂತರಗಳ ವಿತರಣೆಯೂ ಶುರುವಾಗಲಿದೆ. ಆರಂಭಿಕ ಶ್ರೇಣಿ ರೂಪಾಂತರಗಳನ್ನು ಏಪ್ರಿಲ್‌ನಿಂದ ವಿತರಿಸಲಾಗುತ್ತದೆ.

ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಹೊಸದಾದ ಗ್ರಿಲ್, ಮರುವಿನ್ಯಾಸಗೊಳಿಸಲಾದ ಬಂಪರ್, ನವೀಕರಣಕ್ಕೆ ಒಳಪಟ್ಟ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪರಿಷ್ಕೃತ ಫಾಗ್ ಲ್ಯಾಂಪ್, ದೊಡ್ಡದಾದ 19-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಪಡೆದಿದೆ.

Mahindra XUV 7XO SUV Launched In India Rs 13 66 Lakh Starting Price Details

ಇದರ ಪವರ್‌ಟ್ರೇನ್‌ ಆಯ್ಕೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಈ ಕಾರಿನ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 200 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಎಫ್‌ಡಬ್ಲ್ಯೂಡಿ (ಫ್ರಂಟ್-ವೀಲ್ ಡ್ರೈವ್) ಟೆಕ್ನಾಲಜಿಯನ್ನು ಬೆಂಬಲಿಸುತ್ತದೆ.

ಮತ್ತೊಂದು 2.2-ಲೀಟರ್ ಡೀಸೆಲ್ ಎಂಜಿನ್, 185 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 450 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಎಫ್‌ಡಬ್ಲ್ಯೂಡಿ (ಫ್ರಂಟ್-ವೀಲ್ ಡ್ರೈವ್) ಮತ್ತು ಎಡಬ್ಲ್ಯೂಡಿ (ಆಲ್-ವೀಲ್ ಡ್ರೈವ್) ಟೆಕ್ನಾಲಜಿಗೆ ಅನುಗುಣವಾಗಿದೆ.

Mahindra XUV 7XO SUV Launched In India Rs 13 66 Lakh Starting Price Details

ಹೊಸ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಕಾರು 6/7 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ವಿಶೇಷವಾಗಿ 'ಎಕ್ಸ್ಇವಿ 9ಇ' ಮತ್ತು 'ಎಕ್ಸ್ಇವಿ 9ಎಸ್' ಎಸ್‌ಯುವಿಗಳು ಹೊಂದಿರುವಂತೆ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ 12.3-ಇಂಚಿನ ಕೋ-ಡ್ರೈವರ್ ಎಂಟರ್‌ಟೈನ್‌ಮೆಂಟ್ ಸಿಸ್ಟಮ್‌ಗಾಗಿ 'ಟ್ರಿಪಲ್ ಸ್ಕ್ರೀನ್' ಸೆಟಪ್ ಸಹ ಇದೆ.

ಹಾಗೆಯೇ ಈ ಕಾರು ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, 540-ಡಿಗ್ರಿ ಕ್ಯಾಮೆರಾ, ಮಲ್ಟಿ ಕಲರ್ ಆಂಬಿಯೆಂಟ್ ಲೈಟಿಂಗ್, ಪನೋರಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ರೇರ್ ಸೀಟ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದರೊಂದಿಗೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಆಟೋ ಹೋಲ್ಡ್‌, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Monday, January 5, 2026, 22:44 [IST]
English summary
Mahindra xuv 7xo suv launched in india rs 13 66 lakh starting price details
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+