Mahindra: ಪವರ್ ತೋರಿಸಿ ಬಿಡ್ತು ಹೊಸ ಮಹೀಂದ್ರಾ ಎಸ್‌ಯುವಿ.. 7-ಸೀಟರ್.. ಕಾಯುವಿಕೆ ಅವಧಿ ಎಷ್ಟಿದೆ?
ಈಚೆಗೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿತು. ಇದು 'ಎಕ್ಸ್‌ಯುವಿ700'ನ ಫೇಸ್‌ಲಿಫ್ಟ್ ಮಾಡೆಲ್ ಎಂದೇ ಹೆಸರುವಾಸಿಯಾಗಿದೆ. ಜನವರಿ 14 ರಂದು ಬುಕ್ಕಿಂಗ್‌ನ್ನು ಶುರು ಮಾಡಲಾಗಿತ್ತು. ದಾಖಲೆ ಸಂಖ್ಯೆಯಲ್ಲಿ ಆರ್ಡರ್‌ಗಳನ್ನು ಪಡೆದುಕೊಳ್ಳುವಲ್ಲಿಯೂ ಯಶಸ್ವಿಯಾಗಿತ್ತು. ಸದ್ಯ, ಈ ಕಾರಿನ ಕಾಯುವಿಕೆ ಅವಧಿ (Waiting Period) ಕುರಿತಂತೆ ಪ್ರಮುಖ ವಿವರಗಳು ಬಹಿರಂಗಗೊಂಡಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಎಸ್‌ಯುವಿಯ ಆರಂಭಿಕ ಶ್ರೇಣಿ 'ಎಎಕ್ಸ್' ರೂಪಾಂತರಕ್ಕೆ ಭಾರೀ ಬೇಡಿಕೆಯಿದೆ. ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು ಸರಿ ಸುಮಾರು 1 ವರ್ಷ ಕಾಯಬೇಕು. ಮಧ್ಯಮ ಶ್ರೇಣಿ ರೂಪಾಂತರಗಳಾದ 'ಎಎಕ್ಸ್3' ಹಾಗೂ 'ಎಎಕ್ಸ್5' ರೂಪಾಂತರಗಳನ್ನು ವಿತರಿಸಲು 5 ತಿಂಗಳು ಬೇಕಾಗುತ್ತದೆ. ಅದೇ ರೀತಿಯಲ್ಲಿ ಗರಿಷ್ಠ ಶ್ರೇಣಿ ರೂಪಾಂತರವಾದ 'ಎಎಲ್ಸ್7ಎಲ್'ನ್ನು 4 ರಿಂದ 6 ತಿಂಗಳಲ್ಲಿ ಮನೆಗೆ ತರಬಹುದು.

ಇದು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಲಭ್ಯವಿದೆ. ರೂ.13.66 ಲಕ್ಷದಿಂದ ರೂ.24.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 19-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.
ಹೊಸ 'ಎಕ್ಸ್‌ಯುವಿ 7ಎಕ್ಸ್ಒ' ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,695 ಮಿ.ಮೀ ಉದ್ದ, 1,890 ಮಿ.ಮೀ ಅಗಲ ಮತ್ತು 1755 ಮಿ.ಮೀ ಎತ್ತರವಿದೆ. 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,750 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಎವರೆಸ್ಟ್ ವೈಟ್, ನೆಬುಲಾ ಬ್ಲ್ಯೂ, ಡಸರ್ಟ್ ಮಿಸ್ಟ್, ಮಿಡ್‌ನೈಟ್ ಬ್ಲ್ಯಾಕ್, ಗ್ಯಾಲಕ್ಸಿ ಗ್ರೇ, ರೂಬಿ ವೆಲ್ವೆಟ್ & ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 2-ಲೀ. ಟರ್ಬೊ ಪೆಟ್ರೋಲ್ ಎಂಜಿನ್, 200 ಪಿಎಸ್ ಅಶ್ವ ಶಕ್ತಿ ಹಾಗೂ 380 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 2.2-ಲೀ. ಡೀಸೆಲ್ ಎಂಜಿನ್, 185 ಪಿಎಸ್ ಅಶ್ವ ಶಕ್ತಿ ಮತ್ತು 450 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.
ಇದು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಎಫ್‌ಡಬ್ಲ್ಯೂಡಿ (ಫ್ರಂಟ್-ವೀಲ್ ಡ್ರೈವ್) ಹಾಗೂ ಎಡಬ್ಲ್ಯೂಡಿ (ಆಲ್-ವೀಲ್ ಡ್ರೈವ್) ಟೆಕ್ನಾಲಜಿಯನ್ನು ಬೆಂಬಲಿಸುತ್ತದೆ. 13 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 9.8 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಕಾರು 7 ಆಸನ ಆಯ್ಕೆಯನ್ನು ಹೊಂದಿದೆ. ಹೆಚ್ಚಿನ ಲಗೇಜ್ ಕೊಂಡೊಯ್ಯಲು 240 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 12.3-ಇಂಚಿನ ಟ್ರಿಪಲ್ ಸ್ಕ್ರೀನ್ ಸೆಟಪ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಮಲ್ಟಿ ಕಲರ್ ಆಂಬಿಯೆಂಟ್ ಲೈಟಿಂಗ್, ಪನೋರಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ರೇರ್ ಸೀಟ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಈ ಕಾರು ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಅದಕ್ಕಾಗಿ 7-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳು ಮತ್ತು 540-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








