ಹೊಸ ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ vs ಟೊಯೊಟಾ ಇನ್ನೋವಾ ಹೈಕ್ರಾಸ್: ಇವೆರೆಡು ಫ್ಯಾಮಿಲಿ ಕಾರುಗಳು.. ಯಾವುದು ಬೆಸ್ಟ್?

ನಿನ್ನೆಯಷ್ಟೇ ಹೊಸ ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿದೆ. ಇದಕ್ಕೆ ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿಯು ಪ್ರಬಲವಾದ ಪ್ರತಿಸ್ಪರ್ಧಿವಾಗಿದೆ. ಇವೆರೆಡು ಕಾರುಗಳು ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿದ್ದು, ಹತ್ತಾರು ಹೊಸತನಗಳಿಗೆ ಸಾಕ್ಷಿಯಾಗಿವೆ. ನಾವಿಲ್ಲಿ ಈ ಕಾರುಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ.

ಬೆಲೆ (Price):

ಈ ಕಾರುಗಳು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತವೆ. 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ರೂ.13.66 ಲಕ್ಷದಿಂದ ರೂ.24.92 ಲಕ್ಷ ದರವನ್ನು ಪಡೆದಿದೆ. 'ಟೊಯೊಟಾ ಇನ್ನೋವಾ ಹೈಕ್ರಾಸ್' ರೂ.18.16 ಲಕ್ಷದಿಂದ ರೂ.30.83 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ದರ ವಿಚಾರದಲ್ಲಿ 'ಇನ್ನೋವಾ ಹೈಕ್ರಾಸ್' ದುಬಾರಿಯಾಗಿದೆ.

Mahindra XUV 7XO vs Toyota Innova Hycross Which Car Best Details

ವಿನ್ಯಾಸ (Design):

ಇವೆರೆಡು ಕಾರುಗಳು ಒಂದಕ್ಕಿಂದ ಒಂದು ಅದ್ಬುತವಾದ ವಿನ್ಯಾಸವನ್ನು ಒಳಗೊಂಡಿವೆ. 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ನವೀನವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಎವರೆಸ್ಟ್ ವೈಟ್, ನೆಬುಲಾ ಬ್ಲ್ಯೂ, ಮಿಡ್‌ನೈಟ್ ಬ್ಲ್ಯಾಕ್, ಗ್ಯಾಲಕ್ಸಿ ಗ್ರೇ ಮತ್ತು ಸ್ಟೆಲ್ತ್ ಬ್ಲ್ಯಾಕ್ ಬಣ್ಣಗಳೊಂದಿಗೂ ದೊರೆಯುತ್ತದೆ.

'ಟೊಯೊಟಾ ಇನ್ನೋವಾ ಹೈಕ್ರಾಸ್' ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, 16-ಇಂಚಿನ ಸ್ಟೀಲ್ ವೀಲ್‌ಗಳು ಹಾಗೂ 18-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಪ್ಲಾಟಿನಂ ವೈಟ್ ಪರ್ಲ್ ಮತ್ತು ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Mahindra XUV 7XO vs Toyota Innova Hycross Which Car Best Details

ಆಸನ ಆಯ್ಕೆ (Seating Capacity):

ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಎಸ್‌ಯುವಿಯು 6/ 7 ಆಸನಗಳನ್ನು ಒಳಗೊಂಡಿದೆ. ಅದೇ ರೀತಿಯಲ್ಲಿ 'ಟೊಯೊಟಾ ಇನ್ನೋವಾ ಹೈಕ್ರಾಸ್' ಎಂಪಿವಿಯು 7/ 8 ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಹೀಗಾಗಿ, ಈ ಕಾರುಗಳಲ್ಲಿ ಎರಡು ಕುಟುಂಬ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ಕಾರ್ಯಕ್ಷಮತೆ (Permanence):

ಇವೆರೆಡು ಕಾರುಗಳು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿವೆ. 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಎಸ್‌ಯುವಿ 2-ಲೀ. ಟರ್ಬೊ ಪೆಟ್ರೋಲ್ ಮತ್ತು 2.2-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 13 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ.

'ಟೊಯೊಟಾ ಇನ್ನೋವಾ ಹೈಕ್ರಾಸ್' ಎಂಪಿವಿ 2-ಲೀಟರ್ ಪೆಟ್ರೋಲ್ ಹಾಗೂ 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ನ್ನು ಹೊಂದಿದೆ. ಸಿವಿಟಿ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16 ರಿಂದ 23 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಒಟ್ಟಾರೆ ಇಂಧನ ದಕ್ಷತೆಯಲ್ಲಿ 'ಎಕ್ಸ್‌ಯುವಿ 7ಎಕ್ಸ್ಒ'ಗಿಂತ 'ಇನ್ನೋವಾ ಹೈಕ್ರಾಸ್' ಕಾರೇ ಸ್ವಲ್ಪ ಮಟ್ಟಿಗೆ ಮುಂದಿದೆ.

ವೈಶಿಷ್ಟ್ಯಗಳು (Features):

ಈ ಕಾರುಗಳು ಹತ್ತಾರು ಸಾಟಿಯಿಲ್ಲದ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಟ್ರಿಪಲ್ ಸ್ಕ್ರೀನ್ ಸೆಟಪ್, 16 ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಮಲ್ಟಿ-ಕಲರ್ ಆಂಬಿಯೆಂಟ್ ಲೈಟಿಂಗ್ ಹಾಗೂ ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್‌ನ್ನು ಹೊಂದಿದೆ.

'ಟೊಯೊಟಾ ಇನ್ನೋವಾ ಹೈಕ್ರಾಸ್' 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಪವರ್ ವಿಂಡೋಗಳು, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸನ್‌ರೂಫ್ ಮತ್ತು ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ರಿವರ್ಸ್ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Tuesday, January 6, 2026, 22:45 [IST]
English summary
Mahindra xuv 7xo vs toyota innova hycross which car best details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+