Maruti Suzuki: ಬಡವರಿಗೆ ಪರ್ಫೆಕ್ಟ್ ಕಾರಿದು.. 3.70 ಲಕ್ಷ ರೂಪಾಯಿ, 34 Km ಮೈಲೇಜ್.. ಆಲ್ಟೊಗೆ ಫುಲ್ ಡಿಮ್ಯಾಂಡ್!
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಪ್ರಮುಖ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್ - 2025) ಸಹ 'ಆಲ್ಟೊ ಕೆ10' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 10,829 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 7,410 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 46.14% ಪ್ರಗತಿಯಾಗಿದೆ.
ಡಿಸೆಂಬರ್‌ನಲ್ಲಿ 'ಮಾರುತಿ ಆಲ್ಟೊ ಕೆ10' ಮಾರಾಟ ಸಂಖ್ಯೆಯು ಹೆಚ್ಚಳಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಕಾರಿನ ಬೆಲೆಯೂ ಇಳಿಕೆಯಾಗಿದೆ. ಜೊತೆಗಿದು ಪುಟ್ಟ ಹ್ಯಾಚ್‌ಬ್ಯಾಕ್ ಆಗಿದ್ದರೂ ಹೆಚ್ಚು ಅತ್ಯಾಕರ್ಷಕವಾಗಿದೆ. ಹೀಗಾಗಿ, ಮಾರಾಟವು ಅಧಿಕಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಈ ಕಾರು ಅತ್ಯಂತ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.3.70 ಲಕ್ಷ ಹಾಗೂ ಗರಿಷ್ಠ ರೂ.5.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದವರು ಸುಲಭವಾಗಿ ಕೊಂಡುಕೊಳ್ಳಬಹುದು. ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.
ಇದು ಹೆಚ್ಚು ಅತ್ಯಾಧುನಿಕವಾಗಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ, ಪ್ರೀಮಿಯಂ ಅರ್ಥ್ ಗೋಲ್ಡ್ ಮತ್ತು ಮೆಟಾಲಿಕ್ ಸಿಜ್ಲಿಂಗ್ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 167 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,380 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಮಾರುತಿ ಆಲ್ಟೊ' ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್, 67 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 91 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1-ಲೀಟರ್ ಸಿಎನ್‌ಜಿ ಎಂಜಿನ್, 55 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 82 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 24 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 145 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 13.3 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 214 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ 'ಮಾರುತಿ ಸುಜುಕಿ ಆಲ್ಟೊ ಕೆ10' ಪ್ರಯಾಣಿಕರು ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಒಳಗೊಂಡಿದೆ. ಇದಕ್ಕೆ ರೆನಾಲ್ಟ್ ಕ್ವಿಡ್ ಹಾಗೂ ಟಾಟಾ ಟಿಯಾಗೊಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








