Maruti: ಬಡವರ ಕಾರಿದು.. 3.70 ಲಕ್ಷ ರೂಪಾಯಿ.. ಬೈಕ್‌ನಂತೆ 34 Km ಮೈಲೇಜ್.. ಮನಸೋತ ಗ್ರಾಹಕರು!

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಪ್ರಮಖ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 12,314 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 11,352 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 8.47% ಪ್ರಗತಿಯಾಗಿದೆ.

'ಮಾರುತಿ ಆಲ್ಟೊ ಕೆ10' ವಿಶೇಷತೆಗಳೇನು:

ಇದು ಅಗ್ಗದ ಬೆಲೆಯಲ್ಲಿಯೂ ಲಭ್ಯವಿದೆ. ರೂ.3.70 ಲಕ್ಷದಿಂದ ರೂ.5.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ಸ್ಟ್ಯಾಂಡರ್ಡ್ (Standard), ಎಲ್ಎಕ್ಸ್ಐ (LXi), ವಿಎಕ್ಸ್ಐ (VXi) ಮತ್ತು ವಿಎಕ್ಸ್ಐ ಪ್ಲಸ್ (VXi Plus) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki Alto K10 2026 January Sales Details

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 13-ಇಂಚಿನ ಸ್ಟೀಲ್ ವೀಲ್‌ಗಳನ್ನು ಒಳಗೊಂಡಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ ಮತ್ತು ಮೆಟಾಲಿಕ್ ಸಿಜ್ಲಿಂಗ್ ರೆಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಆಲ್ಟೊ ಕೆ10' ಪುಟ್ಟ ಹ್ಯಾಚ್‌ಬ್ಯಾಕ್ ಆಗಿದ್ದರೂ ಹೆಚ್ಚು ವಿಶಾಲವಾಗಿದೆ. 3,530 ಮಿ.ಮೀ ಉದ್ದ, 1,490 ಮಿ.ಮೀ ಅಗಲ ಮತ್ತು 1,520 ಮಿ.ಮೀ ಎತ್ತರವಿದೆ. ಜೊತೆಗೆ 167 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,380 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 750 ರಿಂದ 830 ಕೆಜಿ ತೂಕವಿದೆ.

Maruti Suzuki Alto K10 2026 January Sales Details

ಇದು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. ಈ ಕಾರಿನ 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 5,500 ಆರ್‌ಪಿಎಂನಲ್ಲಿ 65.71 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 3,500 ಆರ್‌ಪಿಎಂನಲ್ಲಿ 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.

ಮತ್ತೊಂದು 1-ಲೀ. ಸಿಎನ್‌ಜಿ ಎಂಜಿನ್‌, 5,300 ಆರ್‌ಪಿಎಂನಲ್ಲಿ 55.92 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 3,400 ಆರ್‌ಪಿಎಂನಲ್ಲಿ 82.1 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಹೊಸ 'ಆಲ್ಟೊ ಕೆ10' ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಬೈಕ್‌ನಂತೆ 24 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 145 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

Maruti Suzuki Alto K10 2026 January Sales Details

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ದೂರದ ಊರುಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 214 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಸ್ಟೀರಿಂಗ್, 4-ಸ್ಪೀಕರ್‌ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ ಮತ್ತು ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

'ಮಾರುತಿ ಆಲ್ಟೊ ಕೆ10' ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ಸಲುವಾಗಿ 6-ಏರ್‌ಬ್ಯಾಗ್‌, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಸೀಟ್ ಬೆಲ್ಟ್ ರಿಮೆಂಡರ್, ಹೈ-ಸ್ಪೀಡ್ ಅಲರ್ಟ್ ಸಿಸ್ಟಮ್ ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಹೊಂದಿದೆ.

More from DriveSpark

Article Published On: Saturday, February 7, 2026, 13:28 [IST]
English summary
Maruti suzuki alto k10 2026 january sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+