ಬಡವರಿಗೆ ಬೆಸ್ಟ್ ಕಾರಿದು.. ರೂ.3.70 ಲಕ್ಷಕ್ಕೆ ಸಿಗುತ್ತೆ.. 34 Km ಮೈಲೇಜ್.. ಪ್ರತಿದಿನ 349 ಕಾರುಗಳು ಸೇಲ್ಸ್!

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಈ ಕಾರು ಎಸ್‌ಯುವಿಗಳ ತೀವ್ರ ಸ್ಪರ್ಧೆಯ ನಡುವೆಯೂ ಉತ್ತಮ ಸಂಖ್ಯೆಯೇ ಮಾರಾಟವಾಗುತ್ತಿದೆ. ಗ್ರಾಹಕರು ಸಹ ಇಷ್ಟಪಟ್ಟು ಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಫೆಬ್ರವರಿ - 2026) ಒಟ್ಟು 9,787 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 8,541 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 15% ಬೆಳವಣಿಗೆಯಾಗಿದೆ.

'ಮಾರುತಿ ಆಲ್ಟೊ ಕೆ10' ವಿಶೇಷತೆಗಳೇನು:

ಈ ಕಾರು ಅಗ್ಗದ ದರದಲ್ಲೂ ಲಭ್ಯವಿದೆ. ಕನಿಷ್ಠ ರೂ.3.70 ಲಕ್ಷ ಮತ್ತು ಗರಿಷ್ಠ ರೂ.5.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಖರೀದಿಸಬಹುದು. ನಗರ ಸಂಚಾರಕ್ಕೂ ಹೇಳಿ ಮಾಡಿಸಿದಂತಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.

Maruti Suzuki Alto K10 February 2026 Sales Report

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಸಾಧಿಸಲು 13-ಇಂಚಿನ ವೀಲ್‌ಗಳು ಮತ್ತು 145/80ಆರ್13 ಗಾತ್ರದ ಟೈರ್‌ಗಳನ್ನು ಪಡೆದಿದೆ.

ನೂತನ 'ಆಲ್ಟೊ ಕೆ10' ಸಾಕಷ್ಟು ವಿಶಾಲವಾಗಿದೆ. 3,530 ಎಂಎಂ ಉದ್ದ, 1,490 ಎಂಎಂ ಅಗಲ ಹಾಗೂ 1,520 ಎಂಎಂ ಎತ್ತರವಿದೆ. ಜೊತೆಗೆ 167 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,380 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 1,210 ಕೆಜಿ ತೂಕವಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ, ಮೆಟಾಲಿಕ್ ಸಿಜ್ಲಿಂಗ್ ರೆಡ್ ಮತ್ತು ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Maruti Suzuki Alto K10 February 2026 Sales Report

ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 5,500 ಆರ್‌ಪಿಎಂನಲ್ಲಿ 67.6 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 3,500 ಆರ್‌ಪಿಎಂನಲ್ಲಿ 91 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.

ಮತ್ತೊಂದು 1-ಲೀಟರ್ ಸಿಎನ್‌ಜಿ ಎಂಜಿನ್‌, 5,300 ಆರ್‌ಪಿಎಂನಲ್ಲಿ 55.92 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 3,400 ಆರ್‌ಪಿಎಂನಲ್ಲಿ 82.1 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24 ರಿಂದ 34 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.145 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 12.15 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Maruti Suzuki Alto K10 February 2026 Sales Report

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಕೊಂಡೊಯ್ಯಲು 214 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4-ಸ್ಪೀಕರ್‌ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ 'ಆಲ್ಟೊ ಕೆ10' ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರಿಗೆ ರಕ್ಷಣೆಯನ್ನು ಒದಗಿಸುವ ಸಲುವಾಗಿ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.

More from DriveSpark

Article Published On: Saturday, March 7, 2026, 13:14 [IST]
English summary
Maruti suzuki alto k10 february 2026 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+