ಬಡವರಿಗೆ ಫರ್ಫೆಕ್ಟ್ ಕಾರುಗಳಿವು.. 34.43 Km ವರೆಗೆ ಮೈಲೇಜ್.. 3.70 ಲಕ್ಷ ರೂ.ನಿಂದ ಶುರು.. ಯಾವುದು ಬೆಸ್ಟ್?
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಪ್ರಮುಖ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಈ ಕಾರಿಗೆ ಯಾವುದೇ ನೇರವಾದ ಎದುರಾಳಿಯಿಲ್ಲ. ಆದರೂ ಇದೇ 'ಆಲ್ಟೊ'ಗೆ ಬದಲಾಗಿ ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಕಾರನ್ನು ಕೊಂಡುಕೊಳ್ಳಬಹುದು. ಈ ಹ್ಯಾಚ್‌ಬ್ಯಾಕ್‌ಗಳು ಪುಟ್ಟದಾಗಿದ್ದರೂ ಒಂದಕ್ಕಿಂತ ಒಂದು ಅದ್ಬುತವಾಗಿವೆ. ಜೊತೆಗೆ ಹಲವು ಹೊಸತನಗಳಿಗೂ ಸಾಕ್ಷಿಯಾಗಿವೆ. ನಾವಿಲ್ಲಿ ಈ ಕಾರುಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಬೆಲೆ (Price):
ಇವೆರೆಡು ಹ್ಯಾಚ್‌ಬ್ಯಾಕ್‌ಗಳು ಅಗ್ಗದ ದರದಲ್ಲೂ ಸಿಗುತ್ತವೆ. 'ಮಾರುತಿ ಆಲ್ಟೊ ಕೆ10' ರೂ.3.70 ಲಕ್ಷದಿಂದ ರೂ.5.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 'ಮಾರುತಿ ಸೆಲೆರಿಯೊ' ರೂ.4.70 ಲಕ್ಷದಿಂದ ರೂ.6.73 ಲಕ್ಷ ದರವನ್ನು ಪಡೆದಿದೆ. ಬೆಲೆಯ ವಿಚಾರದಲ್ಲಿ 'ಸೆಲೆರಿಯೊ'ಗೆ ಹೋಲಿಕೆ ಮಾಡಿದರೆ 'ಆಲ್ಟೊ ಕೆ10' ತುಸು ಅಗ್ಗವಾಗಿದೆ.

ವಿನ್ಯಾಸ (Design):
ಈ ಕಾರುಗಳು ಸರಳವಾಗಿರುವ ವಿನ್ಯಾಸವನ್ನು ಒಳಗೊಂಡಿವೆ. 'ಮಾರುತಿ ಆಲ್ಟೊ' ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ, ಮೆಟಾಲಿಕ್ ಸಿಜ್ಲಿಂಗ್ ರೆಡ್ ಹಾಗೂ ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣದೊಂದಿಗೂ ಸಿಗುತ್ತದೆ. 167 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,380 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
'ಮಾರುತಿ ಸೆಲೆರಿಯೊ' ಸಹ ತುಂಬಾ ಚೆನ್ನಾಗಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು & ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಕೆಫೀನ್ ಬ್ರೌನ್, ಆರ್ಕ್ಟಿಕ್ ವೈಟ್, ಪರ್ಲ್ ಬ್ಲೂಯಿಶ್ ಬ್ಲ್ಯಾಕ್, ಸಾಲಿಡ್ ಫೈರ್ ರೆಡ್ ಮತ್ತು ಗ್ಲಿಸ್ಟನಿಂಗ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space)
ಇವೆರೆಡು ಕಾರುಗಳು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 'ಮಾರುತಿ ಆಲ್ಟೊ ಕೆ10' 214 ಲೀಟರ್ ಹಾಗೂ 'ಸೆಲೆರಿಯೊ' ದೊಡ್ಡ ಗಾತ್ರದ 313 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ (Performance):
ಈ ಹ್ಯಾಚ್‌ಬ್ಯಾಕ್‌ಗಳು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿವೆ. 'ಮಾರುತಿ ಸುಜುಕಿ ಆಲ್ಟೊ ಕೆ10' ಕಾರು 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.39 ರಿಂದ 33.85 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 145 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
'ಮಾರುತಿ ಸುಜುಕಿ ಸೆಲೆರಿಯೊ' ಹ್ಯಾಚ್‌ಬ್ಯಾಕ್ 1-ಲೀ. ಪೆಟ್ರೋಲ್ ಹಾಗೂ 1-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24.97 ರಿಂದ 34.43 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 150 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.
ವೈಶಿಷ್ಟ್ಯಗಳು (Features):
ಇವೆರಡು ಕಾರುಗಳು ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿವೆ. 'ಆಲ್ಟೊ ಕೆ10' ಹ್ಯಾಚ್‌ಬ್ಯಾಕ್ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಹಾಗೂ ಕೀಲೆಸ್ ಎಂಟ್ರಿಯನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.
'ಸೆಲೆರಿಯೊ' ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಐಡಲ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ರೇರ್-ಎಸಿ ವೆಂಟ್‌ಗಳು ಮತ್ತು ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.


Click it and Unblock the Notifications








