ಬಡವರ ಕಾರುಗಳಿವು.. ಬೈಕ್‌ನಂತೆ ಮೈಲೇಜ್, ರೂ.4 ಲಕ್ಷಕ್ಕಿಂತ ಅಗ್ಗ.. ಯಾವುದು ಬೆಸ್ಟ್?
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹಾಗೂ ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಜನಮೆಚ್ಚಿದ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿವೆ. ಇವುಗಳು ಒಂದಕ್ಕಿಂದ ಒಂದು ಅದ್ಭುತವಾಗಿದ್ದು, ಮಧ್ಯಮ ವರ್ಗದ ಜನರಿಗೆ ಹೇಳಿ ಮಾಡಿಸಿದ ರೀತಿಯಲ್ಲಿವೆ. ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿವೆ. ದೀರ್ಘಕಾಲ ಬಳಕೆಯೂ ಬರುತ್ತವೆ. ನಾವಿಲ್ಲಿ ಈ ಕಾರುಗಳ ಬೆಲೆ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಬೆಲೆ (Price):
ಈ ಕಾರುಗಳು ಬಜೆಟ್ ಬೆಲೆಯಲ್ಲಿಯೂ ಲಭ್ಯವಿವೆ. ಹೊಚ್ಚ ಹೊಸ 'ಮಾರುತಿ ಸುಜುಕಿ ಆಲ್ಟೊ ಕೆ10' ಕನಿಷ್ಠ ರೂ.3.70 ಲಕ್ಷ ಹಾಗೂ ಗರಿಷ್ಠ ರೂ.5.45 ಲಕ್ಷ ದರವನ್ನು ಪಡೆದಿದೆ. ನೂತನ 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ' ರೂ.3.50 ಲಕ್ಷದಿಂದ ರೂ.5.25 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ದರದ ವಿಚಾರದಲ್ಲಿ 'ಆಲ್ಟೊ ಕೆ10'ಗೆ ಹೋಲಿಸಿದರೆ, 'ಎಸ್-ಪ್ರೆಸ್ಸೊ' ತುಸು ಅಗ್ಗವಾಗಿದೆ.

ವಿನ್ಯಾಸ (Design):
ಇವೆರೆಡು ಹ್ಯಾಚ್‌ಬ್ಯಾಕ್‌ಗಳು ನೋಡುಗರ ಕಣ್ಣು ಕುಕ್ಕುವಂತಿವೆ. ಆಲ್ಟೊ ಕೆ10' ಕಾರು ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಸ್ಟೀಲ್ ವೀಲ್‌ಗಳನ್ನು ಹೊಂದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ ಹಾಗೂ ಮೆಟಾಲಿಕ್ ಸಿಜ್ಲಿಂಗ್ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 167 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,380 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
'ಎಸ್-ಪ್ರೆಸ್ಸೊ' ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಸ್ಟೀಲ್ ವೀಲ್‌ಗಳನ್ನು ಒಳಗೊಂಡಿದೆ. ಬ್ಲೂಯಿಶ್ ಬ್ಲ್ಯಾಕ್, ಮೆಟಾಲಿಕ್ ಗ್ರಾನೈಟ್ ಗ್ರೇ ಮತ್ತು ಮೆಟಾಲಿಕ್ ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2,380 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Performance):
ಈ ಕಾರುಗಳು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿವೆ. 'ಮಾರುತಿ ಆಲ್ಟೊ ಕೆ10' ಕಾರು 1-ಲೀ. ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 145 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.
'ಮಾರುತಿ ಎಸ್-ಪ್ರೆಸ್ಸೊ' ಸಹ 1-ಲೀ. ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24 ರಿಂದ 33 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 148 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಇವೆರೆಡು ಕಾರುಗಳು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿವೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 'ಆಲ್ಟೊ' ಸಣ್ಣದಾದ 214 ಲೀಟರ್ ಮತ್ತು ಎಸ್-ಪ್ರೆಸ್ಸೊ ದೊಡ್ಡದಾದ 270 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ವೈಶಿಷ್ಟ್ಯಗಳು (Features):
ಈ ಕಾರುಗಳು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿವೆ. 'ಮಾರುತಿ ಆಲ್ಟೊ' 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಸ್ಟೀರಿಂಗ್, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ತನ್ನದಾಗಿಸಿಕೊಂಡಿದೆ.
'ಮಾರುತಿ ಎಸ್-ಪ್ರೆಸ್ಸೊ' 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಏರ್ ಕಂಡೀಷನ್ ಸಿಸ್ಟಮ್, ಯುಎಸ್‌ಬಿ ಕನೆಕ್ಟಿವಿಟಿ ಮತ್ತು ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 2-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.


Click it and Unblock the Notifications








