ಸದ್ದಿಲ್ಲದೇ ನಂ.1 ಆಯ್ತು ಈ ಜನಪ್ರಿಯ ಮಾರುತಿ ಕಾರು.. ಬೈಕ್‌ನಂತೆ 30 Km ಮೈಲೇಜ್.. 5.99 ಲಕ್ಷಕ್ಕೆ ಸಿಗುತ್ತೆ!
ಮಾರುತಿ ಸುಜುಕಿ ಬಲೆನೊ (Maruti Suzuki Baleno) ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಈ ಕಾರು ಪ್ರತಿ ತಿಂಗಳು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಆದರೀಗ 2025ರ ಡಿಸೆಂಬರ್‌ನಲ್ಲಿ 'ಬಲೆನೊ' ಮಾರಾಟದಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಯಾಗಿದೆ. ಒಟ್ಟು 22,100 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. ಇದರೊಂದಿಗೆ ಮಾರುತಿ ಫ್ರಾಂಕ್ಸ್, ಟಾಟಾ ನೆಕ್ಸಾನ್ ಹಾಗೂ ಮಾರುತಿ ಡಿಜೈರ್‌ನಂತಹ ಘಟಾನುಘಟಿ ಕಾರುಗಳನ್ನು ಹಿಂದಿಕ್ಕಿ, ನಂಬರ್ 1 ಸ್ಥಾನಕ್ಕೇರಿದೆ.
2025ರ ಜುಲೈನಿಂದ ನವೆಂಬರ್ ಅವಧಿಯಲ್ಲಿಯೂ 'ಮಾರುತಿ ಬಲೆನೊ' ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿತ್ತು. ಸರಿ ಸುಮಾರು 68,882 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿಅಂಶವನ್ನು ಲೆಕ್ಕಹಾಕಿದಾಗ, ಮಾಸಿಕ ಸರಾಸರಿ 13,776 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಲಾಗಿದೆ.

ನೂತನ 'ಮಾರುತಿ ಸುಜುಕಿ ಬಲೆನೊ' ಮಾರಾಟ ಸಂಖ್ಯೆಯು ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದ್ದು, ಈ ಕಾರಿನ ಬೆಲೆಯೂ ಇಳಿಕೆಯಾಗಿದೆ. ಇದು ಹ್ಯಾಚ್‌ಬ್ಯಾಕ್ ಆಗಿದ್ದರೂ ನೋಡಲು ಎಸ್‌ಯುವಿಯಂತೆ ಭಾಸವಾಗುತ್ತದೆ. ಹೀಗಾಗಿ, ಮಾರಾಟವು ಹೆಚ್ಚಳಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.
'ಮಾರುತಿ ಬಲೆನೊ' ವಿಶೇಷತೆಗಳೇನು:
ಈ ಕಾರು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.5.99 ಲಕ್ಷದಿಂದ ರೂ.9.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಮೇಲ್ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಸಿಗ್ಮಾ (Sigma), ಡೆಲ್ಟಾ (Delta), ಜಿಟಾ (Zeta) ಹಾಗೂ ಆಲ್ಫಾ (Alpha) ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 15/ 16 ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಒಪುಲೆಂಟ್ ರೆಡ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2520 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ನೂತನ 'ಬಲೆನೊ' ಬೆಲೆಗೆ ತಕ್ಕಂತೆ ಹೆಚ್ಚು ಶಕ್ತಿಶಾಲಿಯಾದ ಎರಡು ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.2-ಲೀ. ಸಿಎನ್‌ಜಿ ಎಂಜಿನ್, 77.5 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 98.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಟ್ರಾಸ್ಮಿಷನ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಟ್ರಾಸ್ಮಿಷನ್ (ಗೇರ್‌ಬಾಕ್ಸ್) ಆಯ್ಕೆಯನ್ನು ಹೊಂದಿದೆ. 22 ರಿಂದ 30 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 12.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪವರ್ ಸ್ಟೀರಿಂಗ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಹೊಸ 'ಬಲೆನೊ' ಪ್ರಯಾಣಿಕರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ಹಿತದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಕ್ರೂಸ್ ಕಂಟ್ರೋಲ್, ಹಿಲ್-ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








