Maruti: ಈ ಜನಪ್ರಿಯ ಕಾರಿಗೆ ಮುಗಿಬಿದ್ದ ಜನ.. ಬೈಕ್‌ನಂತೆ 30 Km ಮೈಲೇಜ್.. ರೂ.5.99 ಲಕ್ಷ!

ಮಾರುತಿ ಸುಜುಕಿ ಬಲೆನೊ (Maruti Suzuki Baleno) ಪ್ರಖ್ಯಾತ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಈ ಕಾರನ್ನು ನೆಕ್ಸಾ ಡೀಲರ್‌ಶಿಪ್‌ ಮೂಲಕ ಯಶಸ್ವಿಯಾಗಿ ಮಾರಾಟಗೊಳಿಸಲಾಗುತ್ತದೆ. ದೇಶೀಯ ಮಾರುಕಟ್ಟೆಯಲ್ಲಿ 1999ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಲಾಯಿತು. ಅಂದಿನಿಂದಲೇ ಭಾರೀ ಬೇಡಿಕೆಯನ್ನು ಹೊಂದಿದೆ. ಗ್ರಾಹಕರು ಸಹ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಈ 2026ರ ಫೆಬ್ರವರಿಯಲ್ಲಿ ಒಟ್ಟು 14,632 ಯುನಿಟ್‌ 'ಬಲೆನೊ' ಹ್ಯಾಚ್‌ಬ್ಯಾಕ್‌ಗಳನ್ನು ಮಾರಾಟ ಮಾಡಲಾಗಿದೆ. 2025ರ ಇದೇ ಅವಧಿಯಲ್ಲಿ 15,480 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಸ್ವಲ್ಪ ಮಟ್ಟಿಗೆ ಅಂದರೆ ಶೇಕಡ -5.48% ಕುಸಿತವಾಗಿದೆ.

'ಮಾರುತಿ ಬಲೆನೊ' ವಿಶೇಷತೆಗಳೇನು:

ಇದು ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.5.99 ಲಕ್ಷದಿಂದ ರೂ.9.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಜಿಟಾ ಮತ್ತು ಆಲ್ಫಾ ಎಂಬ ಅತ್ಯಾಕರ್ಷಕವಾದ ರೂಪಾಂತರಗಳೊಂದಿಗೂ ಲಭ್ಯವಿದೆ.

Maruti Suzuki Baleno Hatchback February 2026 Sales Report

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡುಗರ ಕಣ್ಮನ ಸೆಳೆಯುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್ & ಬ್ಲ್ಯೂಯಿಶ್ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ನೂತನ ಬಲೆನೊ ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 3,990 ಎಂಎಂ ಉದ್ದ, 1,745 ಎಂಎಂ ಅಗಲ ಹಾಗೂ 1,500 ಎಂಎಂ ಎತ್ತರವಿದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,520 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 925 ರಿಂದ 1,035 ಕೆಜಿ ತೂಗುತ್ತದೆ.

Maruti Suzuki Baleno Hatchback February 2026 Sales Report

ಇದು ಅತ್ಯಾಧುನಿಕವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 6,000 ಆರ್‌ಪಿಎಂನಲ್ಲಿ 90 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4,400 ಆರ್‌ಪಿಎಂನಲ್ಲಿ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 6,000 ಆರ್‌ಪಿಎಂನಲ್ಲಿ 77.5 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4,300 ಆರ್‌ಪಿಎಂನಲ್ಲಿ 98.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಈ ಕಾರು ರೂಪಾಂತರಗಳಿಗೆ ತಕ್ಕಂತೆ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವುದೇ ಸಾಮಾನ್ಯ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 22 ರಿಂದ 30 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 12.1 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Maruti Suzuki Baleno Hatchback February 2026 Sales Report

ಹೊಸ 'ಬಲೆನೊ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ರೇರ್ ಎಸಿ ವೆಂಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪವರ್ ಸ್ಟೀರಿಂಗ್, ಫಾಸ್ಟ್ ಚಾರ್ಜಿಂಗ್ ಯುಎಸ್‌‍ಬಿ ಪೋರ್ಟ್‌ಗಳು ಮತ್ತು ಕೀಲೆಸ್ ಎಂಟ್ರಿಯಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಇದು ಸುರಕ್ಷತೆಯಿಂದಲೂ ಗುರುತಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಭಾರತ್ ಎನ್‌ಸಿಎಪಿಯಿಂದ 4-ಸ್ಟಾರ್ ರೇಟಿಂಗ್‌ನ್ನು ಪಡೆದಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.

More from DriveSpark

Article Published On: Wednesday, March 4, 2026, 16:01 [IST]
English summary
Maruti suzuki baleno hatchback february 2026 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+