ಶೋರೂಂಗೆ ಬರುವ ಜನರಿಗೆ ಈ ಕಾರೇ ಬೇಕಂತೆ.. ಬೈಕ್‌ನಂತೆ 25 ಕಿಲೋಮೀಟರ್ ಮೈಲೇಜ್.. 8 ಲಕ್ಷ ರೂಪಾಯಿ!

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಜನಮೆಚ್ಚಿದ ಕಾಂಪ್ಯಾಕ್ಟ್ ಎಸ್‌ಯುವಿ ಎಂದೇ ಮನೆ ಮಾತಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ತಿಂಗಳು (ಡಿಸೆಂಬರ್ - 2025) ಸಹ ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿದೆ. ಒಟ್ಟು 17,700 ಯುನಿಟ್‌ಗಳನ್ನು ಖರೀದಿದಾರರಿಗೆ ಯಶಸ್ವಿಯಾಗಿ ವಿತರಿಸಲಾಗಿದೆ. ಹಾಗೆಯೇ ನವೆಂಬರ್‌ನಲ್ಲಿ 13,947 ಯುನಿಟ್, ಅಕ್ಟೋಬರ್‌ನಲ್ಲಿ 12,072 ಯುನಿಟ್, ಸೆಪ್ಟೆಂಬರ್‌ನಲ್ಲಿ 10,173 ಯುನಿಟ್, ಆಗಸ್ಟ್‌ನಲ್ಲಿ 13,620 ಯುನಿಟ್ ಹಾಗೂ 14,065 ಯುನಿಟ್‌ಗಳನ್ನು ಮಾರಲಾಗಿದೆ.

ನೂತನ 'ಮಾರುತಿ ಬ್ರೆಝಾ' ಬಜೆಟ್ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.8.26 ಲಕ್ಷ ಹಾಗೂ ಗರಿಷ್ಠ ರೂ.13 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಎಲ್ಲ ವರ್ಗದವರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಹಾಗೂ ಝಡ್ಎಕ್ಸ್ಐ ಪ್ಲಸ್ ಎಂಬ 4 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki Brezza December 2025 Sales Recorded 17 700 Units Details

ಈ ಕಾರು 'ಅರೆನಾ' ಡೀಲರ್‌ಶಿಪ್‌ ಮೂಲಕ ಗ್ರಾಹಕರ ಖರೀದಿಗೆ ದೊರೆಯುತ್ತದೆ. ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿದ್ದು, ನೋಡುಗರ ಸೆಳೆಯಬಲ್ಲದು. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.

ಇದು 3,995 ಎಂಎಂ ಉದ್ದ, 1,790 ಎಂಎಂ ಅಗಲ ಮತ್ತು 1,685 ಎಂಎಂ ಎತ್ತರವಿದೆ. 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,500 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,150 ಕೆಜಿ ತೂಕವಿದೆ. ಸಿಜ್ಲಿಂಗ್ ರೆಡ್, ಬ್ರೇವ್ ಖಾಕಿ, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Maruti Suzuki Brezza December 2025 Sales Recorded 17 700 Units Details

ಹೊಸ 'ಬ್ರೆಝಾ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 328 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು ಹೆಚ್ಚು ಶಕ್ತಿಶಾಲಿಯಾದ ಮೂರು ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 16 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Maruti Suzuki Brezza December 2025 Sales Recorded 17 700 Units Details

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 6-ಸ್ಪೀಕರ್ ಸೆಟಪ್, ಸನ್‌ರೂಫ್, ಕ್ರೂಸ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ, ಆಟೋಮೆಟಿಕ್ ಎಸಿ ಹಾಗೂ ವೈರ್‌ಲೆಸ್ ಚಾರ್ಜಿಂಗ್ ಪೋರ್ಟ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನೂತನ 'ಮಾರುತಿ ಬ್ರೆಝಾ' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಟಾಟಾ ನೆಕ್ಸಾನ್ (Tata Nexon), ಹುಂಡೈ ವೆನ್ಯೂ (Hyundai Venue), ಕಿಯಾ ಸೋನೆಟ್ (Kia Sonet), ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಹಾಗೂ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

More from DriveSpark

Article Published On: Tuesday, January 6, 2026, 8:30 [IST]
English summary
Maruti suzuki brezza december 2025 sales recorded 17700 units details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+