ಬಡವರಿಗೆ ಫರ್ಫೆಕ್ಟ್ ಕಾರುಗಳಿವು: 5 ಲಕ್ಷಕ್ಕಿಂತ ಅಗ್ಗ.. ಸಾಟಿಯಿಲ್ಲದ ಮೈಲೇಜ್.. ಯಾವುದು ಬೆಸ್ಟ್?

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಇದಕ್ಕೆ ರೆನಾಲ್ಟ್ ಕ್ವಿಡ್ (Renault Kwid) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಇವೆರೆಡು ಕಾರುಗಳು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿವೆ. ಪ್ರತಿ ತಿಂಗಳು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ನಾವಿಲ್ಲಿ ಈ ಕಾರುಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬೆಲೆ (Price):

ಇವೆರೆಡು ಹ್ಯಾಚ್‌ಬ್ಯಾಕ್‌ಗಳು ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ಮಾರುತಿ ಸೆಲೆರಿಯೊ ರೂ.4.70 ಲಕ್ಷದಿಂದ ರೂ.6.73 ದರವನ್ನು ಪಡೆದಿದೆ. ಅದೇ ರೀತಿಯಲ್ಲಿ ರೆನಾಲ್ಟ್ ಕ್ವಿಡ್ ರೂ.4.30 ಲಕ್ಷದಿಂದ ರೂ.5.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ದರದ ವಿಚಾರದಲ್ಲಿ ಕ್ವಿಡ್‌ಗಿಂತ ಸೆಲೆರಿಯೊ ತುಂಬಾ ಅಗ್ಗವಾಗಿದೆ.

Maruti Suzuki Celerio vs Renault kwid Which Car Best Comparison

ವಿನ್ಯಾಸ (Design):

ಈ ಕಾರುಗಳು ಸರಳವಾದ ವಿನ್ಯಾಸವನ್ನು ಹೊಂದಿವೆ. ಸೆಲೆರಿಯೊ ಹ್ಯಾಚ್‌ಬ್ಯಾಕ್‌ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಆರ್ಕ್ಟಿಕ್ ವೈಟ್, ಕೆಫೀನ್ ಬ್ರೌನ್, ಪರ್ಲ್ ಬ್ಲೂಯಿಶ್ ಬ್ಲ್ಯಾಕ್ ಹಾಗೂ ಸಾಲಿಡ್ ಫೈರ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಹೆಚ್ಚು ವಿಶಾಲವಾಗಿದ್ದು, 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,435 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ರೆನಾಲ್ಟ್ ಕ್ವಿಡ್ ಕಾರು ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 14-ಇಂಚಿನ ಸ್ಟೀಲ್ ವೀಲ್‌ಗಳನ್ನು ಒಳಗೊಂಡಿದೆ. ಐಸ್ ಕೂಲ್ ವೈಟ್, ಔಟ್‌ಬ್ಯಾಕ್ ಬ್ರೊನ್, ಶ್ಯಾಡೋ ಗ್ರೇ ಹಾಗೂ ಮೂನ್‌ಲೈಟ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 184 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2422 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Maruti Suzuki Celerio vs Renault kwid Which Car Best Comparison

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಇವೆರೆಡು ಕಾರುಗಳು ಆರಾಮದಾಯಕವಾದ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಮಾರುತಿ ಸೆಲೆರಿಯೊ 313 ಲೀಟರ್‌ ಹಾಗೂ ಕ್ವಿಡ್ ಸ್ವಲ್ಪ ಮಟ್ಟಿಗೆ ಸಣ್ಣ ಗಾತ್ರದ 279 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಕಾರ್ಯಕ್ಷಮತೆ (Permanence):

ಈ ಹ್ಯಾಚ್‌ಬ್ಯಾಕ್‌ಗಳು ಬೆಲೆಗೆ ಅನುಗುಣವಾಗಿ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿವೆ. ಸೆಲೆರಿಯೊ 1-ಲೀ. ಪೆಟ್ರೋಲ್ ಹಾಗೂ 1-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 150 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 15.7 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Maruti Suzuki Celerio vs Renault kwid Which Car Best Comparison

ಕ್ವಿಡ್ ಕಾರು 1-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 21 ರಿಂದ 22 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 152 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 16 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 'ರೆನಾಲ್ಟ್ ಕ್ವಿಡ್'ಗೆ ಹೋಲಿಕೆ ಮಾಡಿದರೆ 'ಸೆಲೆರಿಯೊ' ಹೆಚ್ಚು ದೂರ ಕ್ರಮಿಸಬಲ್ಲದು.

ವೈಶಿಷ್ಟ್ಯಗಳು (Features):

ಇವೆರೆಡು ಕಾರುಗಳು ಒಂದಕ್ಕಿಂತ ಒಂದು ಅದ್ಭುತವಾಗಿವೆ. ಮಾರುತಿ ಸೆಲೆರಿಯೊ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಏರ್ ಕಂಡಿಷನರ್, ಅಡ್ಜಸ್ಟಬಲ್ ಹೆಡ್‌ರೆಸ್ಟ್‌ಗಳು, ರೇರ್-ಎಸಿ ವೆಂಟ್‌ಗಳು ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಸೀಟ್ ಬೆಲ್ಟ್ ರಿಮೈಂಡರ್ಸ್ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

ಹಾಗೆಯೇ ರೆನಾಲ್ಟ್ ಕ್ವಿಡ್ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಎಲ್ಇಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ ಮತ್ತು ಮ್ಯಾನುವಲ್ ಎಸಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 2-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗಯೂ ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಹೊಂದಿದೆ.

More from DriveSpark

Article Published On: Thursday, February 19, 2026, 18:30 [IST]
English summary
Maruti suzuki celerio vs renault kwid which car best comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+