ಮಾರುತಿಯ ಗತ್ತು ಹೆಚ್ಚಿಸಿದ ಕಾರಿದು.. 33 Km ಮೈಲೇಜ್, 6 ಲಕ್ಷ ರೂಪಾಯಿ.. ಮನಸೋತ ಗ್ರಾಹಕರು!
ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಜಗದ್ವಿಖ್ಯಾತ ಸೆಡಾನ್ ಎಂದೇ ಮನೆ ಮಾತಾಗಿದೆ. ಈ ಕಾರಿಗೆ ಗ್ರಾಹಕರು ಸಹ ಮನಸೋತಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಕಳೆದ ತಿಂಗಳು (2025 - ಡಿಸೆಂಬರ್) ಅದು ಮುಂದುವರಿದಿದೆ. ಒಟ್ಟು 19,100 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. ಹಾಗೆಯೇ ನವೆಂಬರ್‌ನಲ್ಲಿ 21,082 ಯುನಿಟ್, ಅಕ್ಟೋಬರ್‌ನಲ್ಲಿ 20,791 ಯುನಿಟ್, ಸೆಪ್ಟೆಂಬರ್‌ನಲ್ಲಿ 20,038 ಯುನಿಟ್ ಹಾಗೂ ಆಗಸ್ಟ್‌ನಲ್ಲಿ 16,509 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.
ನೂತನ 'ಮಾರುತಿ ಡಿಜೈರ್' ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.6.26 ಲಕ್ಷದಿಂದ ರೂ.9.31 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ವೈಯಕ್ತಿಕ ಹಾಗೂ ವಾಣಿಜ್ಯೋದ್ದೇಶಗಳಿಗೆ ಸುಲಭವಾಗಿ ಬಳಕೆ ಮಾಡಬಹುದು. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಮತ್ತು ಝಡ್ಎಕ್ಸ್ಐ ಪ್ಲಸ್ ಎಂಬ 4 ಅತ್ಯಾಧುನಿಕ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಮನ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, 14-ಇಂಚಿನ ಸ್ಟೀಲ್ ವೀಲ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸ್ಪ್ಲೆಂಡಿಡ್ ಸಿಲ್ವರ್, ಬ್ಲ್ಯೂಯಿಶ್ ಬ್ಲ್ಯಾಕ್, ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ಗ್ಯಾಲಂಟ್ ರೆಡ್ ಮತ್ತು ಅಲ್ಲುರಿಂಗ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಇದು ಸೆಡಾನ್ ಆಗಿದ್ದರೂ ಸಾಕಷ್ಟು ದೊಡ್ಡ ಗಾತ್ರದಲ್ಲಿದೆ. 3,995 ಎಂಎಂ ಉದ್ದ, 1,735 ಎಂಎಂ ಅಗಲ ಮತ್ತು 1,515 ಎಂಎಂ ಎತ್ತರವಿದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,450 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 1,435 ಕೆಜಿ ತೂಕವಿದೆ.

ನೂತನ 'ಡಿಜೈರ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 382 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಹೊಂದಿದೆ.
ಈ ಕಾರು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ಸಿಎನ್‌ಜಿ ಎಂಜಿನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವುದೇ ಸಾಮಾನ್ಯ ಬೈಕ್‌ಗೆ ಕಮ್ಮಿಯಿಲ್ಲವೆಂಬಂತೆ 24 ರಿಂದ 33.73 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 12.5 ರಿಂದ 17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ಅರ್ಕಾಮಿಸ್ ಸೌಂಡ್ ಸಿಸ್ಟಮ್, ಕನೆಕ್ಟ್ಡ್ ಕಾರ್ ಟೆಕ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ 'ಡಿಜೈರ್' ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಈ ಕಾರನ್ನು ಗ್ಲೋಬಲ್ ಎನ್‌ಸಿಎಪಿ (Global NCAP) ಹಾಗೂ ಭಾರತ್ ಎನ್‌ಸಿಎಪಿ (Bharat NCAP) ಸಂಸ್ಥೆಗಳೆರೆಡು ಅಂತ್ಯಂತ ಸುರಕ್ಷಿತ ಎಂದು ನಿರ್ಣಯಿಸಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿವೆ. ಇದು 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಕ್ರೂಸ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








