ಮಾರುತಿಯ ಬೆಸ್ಟ್ ಕಾರಿದು.. 33 Km ಮೈಲೇಜ್, 6 ಲಕ್ಷ ರೂಪಾಯಿ.. ಮುಗಿಬಿದ್ದ ಗ್ರಾಹಕರು!

ಮಾರುತಿ ಸುಜುಕಿ ಡಿಜೈರ್ (Marutai Suzuki Dzire) ಜನಮೆಚ್ಚಿದ ಸೆಡಾನ್ ಎಂದೇ ಖ್ಯಾತಿ ಗಳಿಸಿದೆ. ಈ ಕಾರಿಗೆ ಫುಲ್ ಡಿಮ್ಯಾಂಡ್ ಇದ್ದು, ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) 'ಡಿಜೈರ್' ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 19,629 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 15,383 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 27.60% ಪ್ರಗತಿಯಾಗಿದೆ.

'ಮಾರುತಿ ಡಿಜೈರ್' ವಿಶೇಷತೆಗಳೇನು:

ಇದು ಅತಿಕಡಿಮೆ ಬೆಲೆಯಲ್ಲಿ ದೊರೆಯಲಿದ್ದು, ರೂ.6.26 ಲಕ್ಷದಿಂದ ರೂ.9.31 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಲ ವರ್ಗದವರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಎಲ್ಎಕ್ಸ್ಐ (LXi), ವಿಎಕ್ಸ್ಐ (VXi), ಝಡ್ಎಕ್ಸ್ಐ (ZXi) ಹಾಗೂ ಝಡ್ಎಕ್ಸ್ಐ ಪ್ಲಸ್ (ZXi Plus) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki Dzire 19 629 Cars Sold In 2026 January

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದ್ದು, ಪ್ರತಿಯೊಬ್ಬರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಪ್ಲೆಂಡಿಡ್ ಸಿಲ್ವರ್, ಬ್ಲ್ಯೂಯಿಶ್ ಬ್ಲ್ಯಾಕ್, ಆರ್ಕ್ಟಿಕ್ ವೈಟ್ ಮತ್ತು ಮ್ಯಾಗ್ಮಾ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಡಿಜೈರ್' ಹೆಚ್ಚು ವಿಶಾಲವಾಗಿದೆ. 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವೀಕೆಂಡ್‌ಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 382 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಪಡೆದಿದೆ.

Maruti Suzuki Dzire 19 629 Cars Sold In 2026 January

ಇದು ಸಾಕಷ್ಟು ಬಲಿಷ್ಠವಾದ 2 ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 82 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 112 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಿತ್ತದೆ. ಮತ್ತೊಂದು 1.2-ಲೀ. ಸಿಎನ್‌ಜಿ ಎಂಜಿನ್, 70 ಬಿಹೆಚ್‌ಪಿ ಅಶ್ವ ಶಕ್ತಿ ಹಾಗೂ 102 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಈ ಕಾರು ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 24 ರಿಂದ 33.73 ಕಿಲೋಮೀಟರ್‌ವರೆಗೂ ಮೈಲೇಜ್‌ನ್ನು ಕೊಡುತ್ತದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 12.5 ರಿಂದ 17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Maruti Suzuki Dzire 19 629 Cars Sold In 2026 January

ಹೊಸ 'ಮಾರುತಿ ಡಿಜೈರ್' ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಅರ್ಕಾಮಿಸ್ ಸೌಂಡ್ ಸಿಸ್ಟಮ್, ಕನೆಕ್ಟ್ಡ್ ಕಾರ್ ಟೆಕ್, ವೈರ್‌ಲೆಸ್ ಫೋನ್ ಚಾರ್ಜರ್, ರೇರ್ ಎಸಿ ವೆಂಟ್‌ಗಳು ಹಾಗೂ ಸನ್‌ರೂಫ್‌ನಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ.

ಇದು ಸುರಕ್ಷತೆಯಿಂದಲೂ ದೇಶಾದ್ಯಂತ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ ಪ್ರತಿಷ್ಠಿತ ಗ್ಲೋಬಲ್ ಎನ್‌ಸಿಎಪಿ ಮತ್ತು ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿಯೂ ಯಶಸ್ವಿಯಾಗಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಕ್ರೂಸ್ ಕಂಟ್ರೋಲ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಈ ಕಾರಿಗೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಹೋಂಡಾ ಅಮೇಜ್ (Honda Amaze), ಹ್ಯುಂಡೈ ಔರಾ (Hyundai Aura), ಟಾಟಾ ಟಿಗೊರ್ (Tata Tigor), ಟಾಟಾ ಪಂಚ್ (Tata Punch), ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಹಾಗೂ ಹ್ಯುಂಡೈ ಎಕ್ಸ್‌ಟರ್ (Hyundai Exter) ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

Article Published On: Tuesday, February 3, 2026, 13:32 [IST]
English summary
Maruti suzuki dzire 19629 cars sold in 2026 january
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+