Maruti: ಈ ಜನಪ್ರಿಯ ಮಾರುತಿ ಕಾರೇ ನಂ.1.. ಬೈಕ್‌ನ್ನು ಮೀರಿಸುವಂತೆ 33 Km ಮೈಲೇಜ್, ರೂ.6 ಲಕ್ಷಕ್ಕೆ ಸಿಗುತ್ತೆ!

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಜನಮೆಚ್ಚಿದ ಸೆಡಾನ್ ಎಂದೇ ಮನೆ ಮಾತಾಗಿದೆ. ಈ ಕಾರನ್ನು ಸಾಮಾನ್ಯರಿಂದ ಹಿಡಿದು ಶ್ರೀಮಂತ ವರ್ಗದ ಗ್ರಾಹಕರು ಇಷ್ಟಪಟ್ಟು ಕೊಂಡುಕೊಂಡಿದ್ದಾರೆ. ಇದು ದಿನಬಳಕೆಗೂ ಹೆಚ್ಚು ಸೂಕ್ತವಾಗಿದೆ. ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಯನ್ನು ಒದಗಿಸಬಲ್ಲದು. ದೀರ್ಘಕಾಲ ಬಾಳಿಕೆಯೂ ಬರುತ್ತದೆ. ಅದಕ್ಕೆ ತಕ್ಕಂತೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಾಗುತ್ತದೆ.

ಸದ್ಯ 'ಮಾರುತಿ ಡಿಜೈರ್' ಸೆಡಾನ್ ಮಾರಾಟದಲ್ಲಿ ಹೊಸದೊಂದು ಇತಿಹಾಸ ನಿರ್ಮಾಣಗೊಂಡಿದೆ. 2025ರಲ್ಲಿ ಒಟ್ಟು 2,14,488 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಅಂದರೆ ಪ್ರತಿದಿನ ಸರಾಸರಿ 587 'ಡಿಜೈರ್' ಕಾರುಗಳನ್ನು ಗ್ರಾಹಕರಿಗೆ ವಿತರಿಸಲಾಗಿಲಾಗಿದೆ. ಈ ಮೂಲಕ ನಂಬರ್ 1 ಸ್ಥಾನದಲ್ಲಿದೆ.

Maruti Suzuki Dzire CY2025 Sales Every Day 587 Cars Delivery For Customers

'ಮಾರುತಿ ಸುಜುಕಿ ಡಿಜೈರ್' ವಿಶೇಷತೆಗಳೇನು:

ಇದು ಕನಿಷ್ಠ ರೂ.6.26 ಲಕ್ಷ ಹಾಗೂ ಗರಿಷ್ಠ ರೂ.9.31 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ (LXi), ವಿಎಕ್ಸ್ಐ (VXi), ಜಡ್ಎಕ್ಸ್ಐ (ZXi) ಮತ್ತು ಜಡ್ಎಕ್ಸ್ಐ ಪ್ಲಸ್ (ZXi Plus) ಎಂಬ 4 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ದೊಡ್ಡದಾಗಿರುವ 15-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಪ್ಲೆಂಡಿಡ್ ಸಿಲ್ವರ್, ಬ್ಲ್ಯೂಯಿಶ್ ಬ್ಲ್ಯಾಕ್, ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ ಮತ್ತು ಗ್ಯಾಲಂಟ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,450 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Maruti Suzuki Dzire CY2025 Sales Every Day 587 Cars Delivery For Customers

ನೂತನ 'ಡಿಜೈರ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.2-ಲೀ. ಪೆಟ್ರೋಲ್ ಎಂಜಿನ್‌, 82 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 112 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀ. ಸಿಎನ್‌ಜಿ ಎಂಜಿನ್, 70 ಬಿಹೆಚ್‌ಪಿ ಅಶ್ವ ಶಕ್ತಿ ಹಾಗೂ 102 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಇದು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24 ರಿಂದ 33.73 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Maruti Suzuki Dzire CY2025 Sales Every Day 587 Cars Delivery For Customers

ಈ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 382 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಅರ್ಕಾಮಿಸ್ ಸೌಂಡ್ ಸಿಸ್ಟಮ್, ಕನೆಕ್ಟ್ಡ್ ಕಾರ್ ಟೆಕ್, ವೈರ್‌ಲೆಸ್ ಫೋನ್ ಚಾರ್ಜರ್, ರೇರ್-ಎಸಿ ವೆಂಟ್‌ಗಳು ಹಾಗೂ ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ 'ಮಾರುತಿ ಡಿಜೈರ್' ಸುರಕ್ಷತೆಗೆ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಬಲ್ಲದು. ಅದಕ್ಕಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಕ್ರೂಸ್ ಕಂಟ್ರೋಲ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಹ್ಯುಂಡೈ ಔರಾ (Hyundai Aura), ಟಾಟಾ ಟಿಗೂರ್ (Tata Tigor), ಹೋಂಡಾ ಸಿಟಿ (Honda City) ಹಾಗೂ ಹೋಂಡಾ ಅಮೇಜ್ (Honda Amaze) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

Article Published On: Monday, January 26, 2026, 18:25 [IST]
English summary
Maruti suzuki dzire cy2025 sales every day 587 cars delivery for customers
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+