Maruti: ಮಾರುತಿಯ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ.. ಮಧ್ಯಮ ವರ್ಗದವರಿಗೆ ಪರ್ಫೆಕ್ಟ್.. 10.99 ಲಕ್ಷ ರೂಪಾಯಿ!

ಸದ್ದಿಲ್ಲದೇ ಹೊಚ್ಚ ಹೊಸ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಕಾರು ಮಂಗಳವಾರ ಬಿಡುಗಡೆಗೊಂಡಿದೆ. ಇದು ಕಂಪನಿಯ ಮೊಟ್ಟ ಮೊದಲ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ಕಾರನ್ನು ನೆಕ್ಸಾ ಡೀಲರ್‌ಶಿಪ್‌ ಮೂಲಕ ಮಾರಾಟಗೊಳಿಸಲಾಗುತ್ತದೆ. ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಬನ್ನಿ, ನೂತನ 'ಇ-ವಿಟಾರಾ'ದ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಹೊಸ 'ಮಾರುತಿ ಇ-ವಿಟಾರಾ' ಕೈಗೆಟುಕುವ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ರೂ.10.99 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ದರವನ್ನು ಪಡೆದಿದ್ದು, ಬಾಸ್ (ಬ್ಯಾಟರಿ-ಆಸ್-ಎ-ಸರ್ವಿಸ್) ಯೋಜನೆಯಡಿ ಮಾರಾಟಗೊಳಿಸಲಾಗುತ್ತದೆ. ಅಂದರೆ, ಗ್ರಾಹಕರು ಪ್ರತಿ ಕಿಲೋಮೀಟರ್‌ಗೆ ರೂ.3.99 ಬಾಡಿಗೆ ಪಾವತಿಸಬೇಕಾಗಿತ್ತದೆ.

Maruti Suzuki e Vitara Launched In India Rs 10 99 Lakh Starting Price Details

ಈ ಕಾರಿಗಾಗಿ ಬುಕ್ಕಿಂಗ್‌ನ್ನು ಶುರು ಮಾಡಲಾಗಿದೆ. ಆಸಕ್ತ ಗ್ರಾಹಕರು, ರೂ.21,000 ಮುಂಗಡ ಹಣ ಪಾವತಿಸುವುದರೊಂದಿಗೆ ಸಮೀಪದ ಶೋರೂಂಗೆ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಆರ್ಡರ್ ಮಾಡಬಹದು. ಇದು ಡೆಲ್ಟಾ, ಜಿಟಾ ಮತ್ತು ಆಲ್ಫಾ ಎಂಬ 3 ರೂಪಾಂತರಗಳೊಂದಿಗೂ ಸಿಗುತ್ತದೆ.

ನೂತನ 'ಇ-ವಿಟಾರಾ' ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, 'ವೈ' ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು, 'ಇ ವಿಟಾರಾ' ಬ್ಯಾಡ್ಜಿಂಗ್ ಹಾಗೂ 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಬ್ಲ್ಯೂಯಿಶ್ ಬ್ಲ್ಯಾಕ್ ಹಾಗೂ ಆಪ್ಯುಲೆಂಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

Maruti Suzuki e Vitara Launched In India Rs 10 99 Lakh Starting Price Details

ಇದು ಹೆಚ್ಚು ವಿಶಾಲವಾಗಿದೆ. 4,275 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,640 ಎಂಎಂ ಎತ್ತರವಿದೆ. ಜೊತೆಗೆ 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1815 ಕೆಜಿ ತೂಕವಿದೆ.

ಈ ಎಸ್‌ಯುವಿಯು ಅತ್ಯುತ್ತಮವಾದ 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ ಸ್ಟ್ಯಾಂಡರ್ಡ್ ಆಗಿ 236 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

Maruti Suzuki e Vitara Launched In India Rs 10 99 Lakh Starting Price Details

ಹೊಸ 'ಮಾರುತಿ ಸುಜುಕಿ ಇ-ವಿಟಾರಾ' ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ (ಎಆರ್‌ಎಐ) ರೇಂಜ್ ನೀಡುತ್ತದೆ ಎಂದು ಕಂಪನಿ ಹೇಳಿದೆ. ಈ ಬ್ಯಾಟರಿಗಳು ಡಿಸಿ ಫಾಸ್ಟ್ ಚಾರ್ಜರ್ ಬಳಕೆಯಲ್ಲಿ ಕೇವಲ 45 ನಿಮಿಷಗಳಲ್ಲಿ ಶೇಕಡ 10 ರಿಂದ 80% ಚಾರ್ಜ್ ಆಗುತ್ತದೆ.

ನೂತನ 'ಇ-ವಿಟಾರಾ'ದ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ದೊಡ್ಡದಾದ 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟ್‌ರ್, 2-ಸ್ಪೋಕ್ ಸ್ಟೀರಿಂಗ್ ವೀಲ್, ಫಿಕ್ಸೆಡ್ ಗ್ಲಾಸ್ ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. 7-ಏರ್‌ಬ್ಯಾಗ್‌, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 360-ಡಿಗ್ರಿ ಕ್ಯಾಮೆರಾ, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

ಈ ಕಾರಿಗೆ ಸಾಲು - ಸಾಲು ಎದುರಾಳಿಗಳಿವೆ. ಟಾಟಾ ನೆಕ್ಸಾನ್ ಇವಿ (Tata Nexon EV), ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric), ವಿನ್‌ಫಾಸ್ಟ್ ವಿಎಫ್6 (VinFast VF6) ಹಾಗೂ ಎಂಜಿ ವಿಂಡ್ಸರ್ ಇವಿ (MG Windsor EV) ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Tuesday, February 17, 2026, 16:28 [IST]
English summary
Maruti suzuki e vitara launched in india rs 10 99 lakh starting price details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+