Maruti Suzuki: ಮಾರುತಿ ಸುಜುಕಿಯ ಮೊದಲ ಎಲೆಕ್ಟ್ರಿಕ್ ಕಾರಿನ ಅಬ್ಬರ.. ಮುಗಿಬಿದ್ದ ಗ್ರಾಹಕರು.. 543 ಕಿ.ಮೀ ರೇಂಜ್!

ಇತ್ತೀಚೆಗೆ ನೂತನ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಕಾರನ್ನು ಮಾರಾಟಕ್ಕೆ ತರಲಾಯಿತು. ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಹೆಚ್ಚು ಅತ್ಯಾಧುನಿಕವಾಗಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿದೆ. ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಸದ್ಯ, ಇದೇ 'ಇ-ವಿಟಾರಾ'ದ ಕಾಯುವಿಕೆ ಅವಧಿ (Waiting Period) ಕುರಿತಂತೆ ಒಂದಷ್ಟು ವಿವರಗಳು ಬಹಿರಂಗಗೊಂಡಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಹೊಚ್ಚ ಹೊಸ 'ಮಾರುತಿ ಇ-ವಿಟಾರಾ'ವು ವಿತರಣೆಗೊಳಲು ಸ್ವಲ್ಪ ಮಟ್ಟಿಗೆ ಹೆಚ್ಚಿನ ಕಾಲಾವಕಾಶ ಬೇಕಾಗುತ್ತದೆ. ಈ ಎಲೆಕ್ಟ್ರಿಕ್ ಎಸ್‌ಯುವಿಯು 6 ರಿಂದ 8 ವಾರಗಳವರೆಗೆ ಕಾಯುವಿಕೆ ಅವಧಿಯನ್ನು ಹೊಂದಿದೆ. ಅಂದರೆ 1.5 ರಿಂದ 2 ತಿಂಗಳು ಹಿಡಿಯುತ್ತದೆ. ವಿಶೇಷವಾಗಿ, ಆರಂಭಿಕ ಶ್ರೇಣಿ ರೂಪಾಂತರವಾದ 'ಡೆಲ್ಟಾ'ವನ್ನು ಖರೀದಿಸಲು ಗ್ರಾಹಕರು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ ಎಂದು ಡೀಲರ್‌ಶಿಪ್‌ ಮೂಲಗಳು ಹೇಳಿವೆ ಎಂದು 'ಆಟೊಕಾರ್' ವರದಿ ಮಾಡಿದೆ.

Maruti Suzuki e Vitara Suv Waiting Period Revealed Details

'ಮಾರುತಿ ಸುಜುಕಿ ಇ-ವಿಟಾರಾ' ವಿಶೇಷತೆಗಳೇನು:

ಇದು ಸ್ಟ್ಯಾಂಡರ್ಡ್ ಆಗಿ ಕನಿಷ್ಠ ರೂ.15.99 ಲಕ್ಷ ಹಾಗೂ ಗರಿಷ್ಠ ರೂ.20.01 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬಾಸ್ (ಬ್ಯಾಟರಿ-ಆಸ್-ಎ-ಸರ್ವಿಸ್) ಯೋಜನೆಯಡಿಯೂ ಲಭ್ಯವಿದೆ. ಆ ಮಾಡೆಲ್ ಬೆಲೆ ರೂ.10.99 ಲಕ್ಷದಿಂದ ಶುರುವಾಗುತ್ತದೆ. ಗ್ರಾಹಕರು 1 ಕಿಲೋಮೀಟರ್‌ ಓಡಾಟಕ್ಕೆ ರೂ.3.99 ಬಾಡಿಗೆಯನ್ನು ಪಾವತಿಸಬೇಕು. ಡೆಲ್ಟಾದೊಂದಿಗೆ ಜಿಟಾ ಹಾಗೂ ಆಲ್ಫಾ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

ಈ ಎಸ್‌ಯುವಿಯು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಒಳಗೊಂಡಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ, ನೆಕ್ಸಾ ಬ್ಲ್ಯೂ, ಆಪುಲೆಂಟ್ ರೆಡ್ ಹಾಗೂ ಬ್ಲ್ಯೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಮಾರುತಿ ಇ-ವಿಟಾರಾ' ಹೆಚ್ಚು ವಿಶಾಲವಾಗಿದೆ. 4,275 ಮಿ.ಮೀ ಉದ್ದ, 1,800 ಮಿ.ಮೀ ಅಗಲ ಹಾಗೂ 1,640 ಮಿ.ಮೀ ಎತ್ತರವಿದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 236 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಇದು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 440 ರಿಂದ 543 ಕಿಲೋಮೀಟರ್‌ವರೆಗೆ ರೇಂಜ್ ಮೈಲೇಜ್ ಕೊಡುತ್ತದೆ. 150 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 8.7 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟ್‌ರ್, 2-ಸ್ಪೋಕ್ ಸ್ಟೀರಿಂಗ್ ವೀಲ್, ಫಿಕ್ಸೆಡ್ ಗ್ಲಾಸ್ ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹೊಸ 'ಇ-ವಿಟಾರಾ' ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 360-ಡಿಗ್ರಿ ಕ್ಯಾಮೆರಾ, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Wednesday, February 25, 2026, 13:30 [IST]
English summary
Maruti suzuki e vitara suv waiting period revealed details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+