ಹೊಸ ಮಾರುತಿ ಕಾರಿಗಾಗಿ ಶೋರೂಂ ಮುಂದೆ ಕ್ಯೂ ನಿಲ್ಲಲು ಸಿದ್ಧರಾಗಿ.. ನಂ.1 ವಿಂಡ್ಸರ್ ಕಥೆ ಮುಗಿತಾ? ಯಾವುದು ಬೆಸ್ಟ್?

ನೂತನ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಕಾರು ಮಂಗಳವಾರ ಮಾರಾಟಕ್ಕೆ ಬಂದಿದೆ. ಇದಕ್ಕೆ ನಂಬರ್ 1 ಎಂಜಿ ವಿಂಡ್ಸರ್ ಇವಿ (MG Windsor EV) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಈ ಎಲೆಕ್ಟ್ರಿಕ್ ಎಸ್‌ಯುವಿಗಳು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿವೆ. ನಾವಿಲ್ಲಿ ಇವೆರೆಡು ಕಾರುಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬೆಲೆ (Price):

ಈ ಕಾರುಗಳು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿವೆ. ಮಾರುತಿ ಇ-ವಿಟಾರಾ ರೂ.10.99 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ದರವನ್ನು ಪಡೆದಿದೆ. ಆದರೆ, ಎಲ್ಲ ರೂಪಾಂತರಗಳ ಬೆಲೆಯನ್ನು ಘೋಷಣೆ ಮಾಡಲಾಗಿಲ್ಲ. ಇದು ಬಾಸ್ (ಬ್ಯಾಟರಿ-ಆಸ್-ಎ-ಸರ್ವಿಸ್) ಯೋಜನೆಯಡಿ ಬಿಡುಗಡೆಗೊಂಡಿದೆ. ಗ್ರಾಹಕರು ಒಂದು ಕಿಲೋಮೀಟರ್‌ಗೆ ರೂ.3.99 ಬಾಡಿಗೆಯನ್ನು ಪಾವತಿಸಬೇಕು.

Maruti Suzuki e Vitara vs Mg Windsor EV Which Car Best Comparison

ನೂತನ ಎಂಜಿ ವಿಂಡ್ಸರ್ ಇವಿ ಕನಿಷ್ಠ ರೂ.14 ಲಕ್ಷ ಹಾಗೂ ಗರಿಷ್ಠ ರೂ.18.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬಾಸ್ (ಬ್ಯಾಟರಿ-ಆಸ್-ಎ-ಸರ್ವಿಸ್) ಯೋಜನೆಯಡಿ ಇದೇ ಕಾರಿನ ಬೆಲೆಯೂ ರೂ.9.99 ಲಕ್ಷದಿಂದ ಶುರುವಾಗುತ್ತದೆ. ಹಾಗೆಯೇ ಪ್ರತಿ ಕಿಲೋಮೀಟರ್‌ಗೆ ರೂ.3.50 ಬಾಡಿಗೆ ಕಟ್ಟಬೇಕು. ದರದ ವಿಚಾರದಲ್ಲಿ ಎರಡು ಕಾರುಗಳು ಹೆಚ್ಚು-ಕಮ್ಮಿ ಒಂದೇ ರೀತಿಯಲ್ಲಿವೆ.

ವಿನ್ಯಾಸ (Design):

ಇವೆರೆಡು ಎಸ್‌ಯುವಿಗಳು ಒಂದಕ್ಕಿಂತ ಒಂದು ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಒಳಗೊಂಡಿವೆ. ಇ-ವಿಟಾರಾ ಎಸ್‌ಯುವಿಯು ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಬ್ಲ್ಯೂಯಿಶ್ ಬ್ಲ್ಯಾಕ್ ಎಂಬಾ ಬಣ್ಣಗಳೊಂದಿಗೂ ದೊರೆಯುತ್ತದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Maruti Suzuki e Vitara vs Mg Windsor EV Which Car Best Comparison

ಎಂಜಿ ವಿಂಡ್ಸರ್ ಇವಿ ಸಹ ಉತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸೆಲಾಡಾನ್ ಬ್ಲೂ, ಗ್ಲೇಜ್ ರೆಡ್ ಮತ್ತು ಅರೋರಾ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 186 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಈ ಕಾರುಗಳು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿವೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ ಮಾರುತಿ ಇ-ವಿಟಾರಾ 236 ಲೀಟರ್‌ ಹಾಗೂ ಎಂಜಿ ವಿಂಡ್ಸರ್ ಇವಿ ದೊಡ್ಡ ಗಾತ್ರದ 604 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Permanence):

ಇವೆರೆಡು ಎಸ್‌ಯುವಿಗಳು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿವೆ. ಇ-ವಿಟಾರಾ 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 543 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ವಿಂಡ್ಸರ್ ಇವಿ 38 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 52.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. 331 ರಿಂದ 449 ರೇಂಜ್ (ಮೈಲೇಜ್) ನೀಡುತ್ತದೆ. ಎಂಜಿ ವಿಂಡ್ಸರ್ ಇವಿಗೆ ಹೋಲಿಕೆ ಮಾಡಿದರೆ, ಮಾರುತಿ ಇ-ವಿಟಾರಾ ಹೆಚ್ಚು ದೂರ ಕ್ರಮಿಸಬಲ್ಲದು.

ವೈಶಿಷ್ಟ್ಯಗಳು (Features):

ಈ ಕಾರುಗಳು ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಮಾರುತಿ ಇ-ವಿಟಾರಾವು 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟ್‌ರ್, 2-ಸ್ಪೋಕ್ ಸ್ಟೀರಿಂಗ್ ವೀಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್ ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಎಂಜಿ ವಿಂಡ್ಸರ್ ಇವಿಯು 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ವಿಶೇಷವಾಗಿ 'ಇ-ವಿಟಾರಾ' ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಆದರೆ, ವಿಂಡ್ಸರ್ ಇವಿಯೂ ಯಾವುದೇ ರೇಟಿಂಗ್ ಪಡೆದಿಲ್ಲ.

More from DriveSpark

Article Published On: Wednesday, February 18, 2026, 11:30 [IST]
English summary
Maruti suzuki e vitara vs mg windsor ev which car best comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+