Maruti: ಮಾರುತಿಯ ತಾಕತ್ತು ಅನಾವರಣ.. 5 ಲಕ್ಷ ರೂಪಾಯಿ, ಬೈಕ್‌ನಂತೆ 27 Km ಮೈಲೇಜ್.. ಈ ಕಾರಿಗೆ ಮನಸೋತ ಜನ!
ಮಾರುತಿ ಸುಜುಕಿ (Maruti Suzuki) ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಈ 2026ರ ಜನವರಿ ತಿಂಗಳಲ್ಲೂ ಕಂಪನಿಯ ಕಾರುಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಒಟ್ಟು 2,36,963 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2025ರ ಇದೇ ಅವಧಿಯಲ್ಲಿ 212,251 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 11.6% ಪ್ರಗತಿಯಾಗಿದೆ.
ಈ ಜನವರಿಯಲ್ಲಿಯೂ ಮಾರುತಿ ಸುಜುಕಿ ಇಕೋ (Maruti Suzuki Eeco) ಎಂಪಿವಿ ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗಿದೆ. ಬರೋಬ್ಬರಿ 11,914 ಕಾರುಗಳನ್ನು ಖರೀದಿದಾರರು ಕೊಂಡುಕೊಂಡಿದ್ದಾರೆ. ಅಂದರೆ ಪ್ರತಿದಿನ ಸರಿ ಸುಮಾರು 384 'ಇಕೋ' ಮಾಡೆಲ್‌ಗಳನ್ನು ಮಾರಾಟ ಮಾಡಲಾಗಿದೆ.

'ಮಾರುತಿ ಸುಜುಕಿ ಇಕೋ' ವಿಶೇಷತೆಗಳೇನು:
ಇದು ಅತಿಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.5.21 ಲಕ್ಷದಿಂದ ರೂ.6.36 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ರೂ.6.25 ಲಕ್ಷದಿಂದ ರೂ.7.60 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಹೀಗಾಗಿ ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ.
ನೂತನ 'ಮಾರುತಿ ಇಕೋ' ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಬ್ಲ್ಯಾಕ್ ಔಟ್ ಬಂಪರ್, ಹ್ಯಾಲೊಜೆನ್ ಹೆಡ್‌ಲ್ಯಾಂಪ್‌ಗಳು, ಟೈಲ್‌ಲೈಟ್‌ಗಳು ಮತ್ತು 13-ಇಂಚಿನ ಸ್ಟೀಲ್ ವೀಲ್‌ಗಳನ್ನು ಪಡೆದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಬ್ರಿಸ್ಕ್ ಬ್ಲೂ, ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ ಮತ್ತು ಬ್ಲ್ಯೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಎಂಪಿವಿ ಸಾಕಷ್ಟು ವಿಶಾಲವಾಗಿದೆ. 3675 ಮಿ.ಮೀ ಉದ್ದ, 1475 ಮಿ.ಮೀ ಅಗಲ ಮತ್ತು 1825 ಮಿ.ಮೀ ಎತ್ತರವಿದೆ. 160 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2350 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,050 ಮಿ.ಮೀ ತೂಕವಿದೆ.
ಇದು ಬೆಲೆಗೆ ತಕ್ಕಂತೆ ಬಲಿಷ್ಠವಾದ ಎರಡು ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀ. ಪೆಟ್ರೋಲ್ ಎಂಜಿನ್, 81 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 105.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2 ಲೀ. ಸಿಎನ್‌ಜಿ ಎಂಜಿನ್, 71 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 95 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.

ಹೊಸ 'ಇಕೋ' ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಮಾತ್ರ ಲಭ್ಯವಿದೆ. 19 ರಿಂದ 27 ಕಿಲೋಮೀಟರ್‌ವರೆಗೂ ಮೈಲೇಜ್‌ನ್ನು ಕೊಡುತ್ತದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 15.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5/ 6 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 275 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್, ಬೇಸಿಕ್ ಆಡಿಯೋ ಸಿಸ್ಟಮ್, ಮ್ಯಾನುವಲ್ ಎಸಿ, 12ವಿ ಚಾರ್ಜಿಂಗ್ ಸಾಕೆಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸಾರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಪಾರ್ಕಿಂಗ್ ಸೆನ್ಸರ್‌ಗಳು, ಚೈಲ್ಡ್ ಲಾಕ್‌ಗಳು ಮತ್ತು ಸೀಟ್‌ಬೆಲ್ಟ್ ರಿಮೈಂಡರ್‌ನ್ನು ಪಡೆದಿದೆ.


Click it and Unblock the Notifications








