ಬೈಕ್‌ನಂತೆ ಮೈಲೇಜ್.. 6 ಜನ ತಿರುಗಾಡಬಹುದು.. 5 ಲಕ್ಷಕ್ಕೆ ಸಿಗುತ್ತೆ, ಈ ಕಾರಿಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಗ್ರಾಹಕರು!

ಮಾರುತಿ ಸುಜುಕಿ ಇಂಡಿಯಾ (Maruti Suzuki India) ಜನಮೆಚ್ಚಿದ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಪ್ರತಿ ತಿಂಗಳು ಕಂಪನಿಯ ಕಾರುಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತವೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. 2025ರ ಡಿಸೆಂಬರ್‌ನಲ್ಲೂ ಅದು ಮುಂದುವರಿದಿದೆ. ಒಟ್ಟು 2,17,854 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿಯೂ 1,78,248 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 22.21% ಪ್ರಗತಿಯಾಗಿದೆ.

'ಮಾರುತಿ ಸುಜುಕಿ' ಮಾರಾಟಗೊಳಿಸುವ ಕಾರುಗಳಲ್ಲಿ 'ಇಕೋ' ಎಂಪಿವಿಗೆ ಪ್ರತ್ಯೇಕವಾದ ಸ್ಥಾನವಿದೆ. ಈ 2025ರ ಡಿಸೆಂಬರ್‌ ತಿಂಗಳಲ್ಲಿ 11,899 ಯುನಿಟ್‌ಗಳನ್ನು ಮಾರಲಾಗಿದೆ. 2024ರ ಡಿಸೆಂಬರ್‌ನಲ್ಲಿ 11,678 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಅಂಶವನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಶೇಕಡ 1.89% ಬೆಳವಣಿಗೆಯಾಗಿದೆ.

Maruti Suzuki Eeco December 2025 Sales Details

ಕಳೆದ ತಿಂಗಳು 'ಮಾರುತಿ ಸುಜುಕಿ ಇಕೋ' ಎಂಪಿವಿ ಮಾರಾಟ ಪ್ರಮಾಣವು ಸ್ಥಿರವಾಗಿರಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್ 22ರಿಂದ ಜಿಎಸ್‌ಟಿ ಪರಿಷ್ಕರಣೆಹೊಂದಿದೆ. ಈ ಕಾರಿನ ಬೆಲೆಯೂ ಇಳಿಕೆಯಾಗಿದೆ. ಇದು ಹೆಚ್ಚು ಸಣ್ಣ ಗಾತ್ರದಲ್ಲಿದ್ದರೂ, ಹೆಚ್ಚು ಆಸನಗಳನ್ನು ಹೊಂದಿದೆ. ಹೀಗಾಗಿ 'ಇಕೋ' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ಹೇಳಲಾಗಿದೆ.

ಮಾರುತಿ ಸುಜುಕಿ ಇಕೋ (Maruti Suzuki Eeco) ವಿಶೇಷತೆಗಳೇನು:

ಈ ಕಾರು ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಮಧ್ಯಮ ಹಾಗೂ ಮೇಲ್ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಅದಕ್ಕೆ ತಕ್ಕಂತೆ ರೂ.5.21 ಲಕ್ಷದಿಂದ ರೂ.6.36 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ.

Maruti Suzuki Eeco December 2025 Sales Details

ಇದು ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಬ್ಲ್ಯಾಕ್-ಔಟ್ ಬಂಪರ್‌, ಹ್ಯಾಲೊಜೆನ್ ಹೆಡ್‌ಲ್ಯಾಂಪ್‌ಗಳು ಮತ್ತು ಟೈಲ್‌ಲೈಟ್‌ಗಳನ್ನು ಹೊಂದಿದೆ. ಅತ್ಯುತ್ತಮವಾದ ವೀಲ್‌ಗಳು ಹಾಗೂ ಟೈರ್‌ಗಳನ್ನು ಪಡೆದಿದೆ. ಸಾಲಿಡ್ ವೈಟ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಬ್ರಿಸ್ಕ್ ಬ್ಲೂ, ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ ಹಾಗೂ ಬ್ಲ್ಯೂಯಿಶ್ ಬ್ಲ್ಯಾಕ್ ಎಂಬ ಬಣ್ಣದ ಆಯ್ಕೆಯಲ್ಲಿಯೂ ಲಭ್ಯವಿದೆ.

ನೂತನ 'ಮಾರುತಿ ಇಕೋ' ಕಾರು 3675 ಎಂಎಂ ಉದ್ದ, 1475 ಎಂಎಂ ಅಗಲ ಹಾಗೂ 1825 ಎಂಎಂ ಎತ್ತರವಿದೆ. ಜೊತೆಗೆ 160 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2350 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 5/ 6 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 275 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

Maruti Suzuki Eeco December 2025 Sales Details

ಈ ಕಾರು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ ಆಯ್ಕೆಯನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ದೊರೆಯುತ್ತದೆ. 19 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 15.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದರ ಕ್ಯಾಬಿನ್ ವಿನ್ಯಾಸವು ಅಚ್ಚುಕಟ್ಟಾಗಿದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್, ಬೇಸಿಕ್ ಆಡಿಯೋ ಸಿಸ್ಟಮ್, ಮ್ಯಾನುವಲ್ ಎಸಿ, 12ವಿ-ಚಾರ್ಜಿಂಗ್ ಸಾಕೆಟ್ ಮತ್ತು ರೇರ್ - ಪಾರ್ಕಿಂಗ್ ಸೆನ್ಸಾರ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಪಾರ್ಕಿಂಗ್ ಸೆನ್ಸರ್‌ಗಳು, ಚೈಲ್ಡ್ ಲಾಕ್‌ಗಳು ಹಾಗೂ ಸೀಟ್‌ಬೆಲ್ಟ್ ರಿಮೈಂಡರ್‌ನ್ನು ಪಡೆದಿದೆ.

More from DriveSpark

Article Published On: Friday, January 2, 2026, 13:25 [IST]
English summary
Maruti suzuki eeco december 2025 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+