ಮಾರುತಿಗೆ ತಾಕತ್ತು ಹೆಚ್ಚಿಸಿದ ಕಾರಿದು.. 26 Km ಮೈಲೇಜ್.. 8.80 ಲಕ್ಷಕ್ಕೆ ಸಿಗುತ್ತೆ, 7-ಸೀಟರ್.. ಮುಗಿಬಿದ್ದ ಗ್ರಾಹಕರು!

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಜನಪ್ರಿಯ ಫ್ಯಾಮಿಲಿ ಎಂಪಿವಿ ಎಂದೇ ಮನೆ ಮಾತಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್ - 2025) ಸಹ ಅದು ಮುಂದುವರಿದೆ. ಒಟ್ಟು 16,300 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. ಹಾಗೆಯೇ ನವೆಂಬರ್‌ನಲ್ಲಿ 16,197 ಯುನಿಟ್, ಅಕ್ಟೋಬರ್‌ನಲ್ಲಿ 20,087 ಯುನಿಟ್, ಸೆಪ್ಟೆಂಬರ್‌ನಲ್ಲಿ 12,115 ಯುನಿಟ್ ಮತ್ತು ಆಗಸ್ಟ್‌ನಲ್ಲಿ 18,445 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿಅಂಶವನ್ನು ಲೆಕ್ಕಹಾಕಿದಾಗ ಪ್ರತಿ ತಿಂಗಳು ಸರಾಸರಿ 16,628 ಯುನಿಟ್ 'ಎರ್ಟಿಗಾ' ಎಂಪಿವಿಗಳು ಮಾರಾಟಗೊಂಡಿವೆ.

'ಮಾರುತಿ ಎರ್ಟಿಗಾ' ಎಂಪಿವಿ ಮಾರಾಟ ಸಂಖ್ಯೆಯು ಈ ಪರಿಪ್ರಮಾಣದಲ್ಲಿ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದ್ದು, ಈ ಕಾರಿನ ಬೆಲೆಯೂ ಇಳಿಕೆಯಾಗಿದೆ. ಇದು ಎಂಪಿವಿಯಾಗಿದ್ದು, ಹೆಚ್ಚಿನ ಆಸನ ಆಯ್ಕೆ ವ್ಯವಸ್ಥೆಯಲ್ಲಿ ಲಭ್ಯವಿದೆ. ಹೀಗಾಗಿ, ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಖರೀದಿಸಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

Maruti Suzuki Ertiga 16 300 Cars Sold In December 2025 All Details

ಈ ಕಾರು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ರೂ.8.80 ಲಕ್ಷದಿಂದ ರೂ.12.94 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ವೈಯಕ್ತಿಕ ಹಾಗೂ ವಾಣಿಜ್ಯ ಬಳಕೆಗೆ ಹೆಚ್ಚು ಸೂಕ್ತವಾಗಿದೆ. ಎಲ್ಎಕ್ಸ್ಐ (LXi), ವಿಎಕ್ಸ್ಐ (VXi), ಝಡ್ಎಕ್ಸ್ಐ (ZXi) ಮತ್ತು ಝಡ್ಎಕ್ಸ್ಐ ಪ್ಲಸ್ (ZXi Plus) ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ.

ಇದು ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ನೋಡುಗರ ಸೆಳೆಯುವಂತಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. 4,395 ಎಂಎಂ ಉದ್ದ, 1,735 ಎಂಎಂ ಅಗಲ ಮತ್ತು 1,690 ಎಂಎಂ ಎತ್ತರವಿದೆ. 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,740 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Maruti Suzuki Ertiga 16 300 Cars Sold In December 2025 All Details

ನೂತನ 'ಮಾರುತಿ ಸುಜುಕಿ ಎರ್ಟಿಗಾ' ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ ಮತ್ತು ಪರ್ಲ್ ಮೆಟಾಲಿಕ್ ಡಿಗ್ನಿಟಿ ಬ್ರೌನ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ. 7 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಕಾರು ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್, 102 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 139 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.5-ಲೀಟರ್ ಸಿಎನ್‌ಜಿ ಎಂಜಿನ್‌, 87 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 121 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 20.30 ರಿಂದ 26.11 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 13.2 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದು ಅತ್ಯುತ್ತಮವಾದ ಕ್ಯಾಬಿನ್ ವಿನ್ಯಾಸವನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ ಹಿಲ್ ಹೋಲ್ಡ್ ಅಸಿಸ್ಟ್‌ನ್ನು ಹೊಂದಿದೆ.

More from DriveSpark

Article Published On: Tuesday, January 6, 2026, 15:32 [IST]
English summary
Maruti suzuki ertiga 16300 cars sold in december 2025 all details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+