Maruti: 5 ಜನರಿಗೆ ಪರ್ಫೆಕ್ಟ್ ಎಸ್‌ಯುವಿಯಿದು.. 6.85 ಲಕ್ಷ, 28 Km ಮೈಲೇಜ್.. ಆದರೂ ಗ್ರಾಹಕರು ಖರೀದಿಸುತ್ತಿಲ್ಲ.. ಯಾಕೆ?
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಜನಪ್ರಿಯ ಎಸ್‌ಯುವಿಯಾಗಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದು, ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೇ ಮಾರಾಟವಾಗುತ್ತಿದೆ. ಆದರೆ, 2026ರ ಜನವರಿಯಲ್ಲಿ ಸ್ವಲ್ಪ ಮಟ್ಟಗೆ ಮಾರಾಟವು ಕುಸಿತವಾಗಿದೆ. ಒಟ್ಟು 13,353 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 15,192 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -12% ಇಳಿಕೆಯಾಗಿದೆ.
ಈ ಜನವರಿಯಲ್ಲಿ 'ಫ್ರಾಂಕ್ಸ್' ಮಾರಾಟ ಸಂಖ್ಯೆ ಕಡಿಮೆಯಾಗಲು ಹಲವು ಕಾರಣಗಳಿವೆ. ಈ ಎಸ್‌ಯುವಿಯ ಹೆಚ್ಚು-ಕಮ್ಮಿ ಬೆಲೆಗೆ ಸ್ವತಃ 'ಮಾರುತಿ ಸುಜುಕಿ' ಸೇರಿದಂತೆ ಇತರೆ ಕಂಪನಿಯ ಕಾರುಗಳು ಖರೀದಿಗೆ ಲಭ್ಯವಿವೆ. ಗ್ರಾಹಕರು ಅವುಗಳನ್ನು ಕೊಂಡುಕೊಳ್ಳಲು ಮನಸ್ಸು ಮಾಡುತ್ತಿದ್ದಾರೆ. ಜೊತೆಗೆ ಇದಕ್ಕಿಂತ ಕೊಂಚ ಅಧಿಕ ಬೆಲೆಗೆ ಆಕರ್ಷಕವಾಗಿರುವ ಹೊಸ ಎಸ್‌ಯುವಿಗಳು ಮಾರಾಟಕ್ಕೆ ಬಂದಿವೆ. ಹೀಗಾಗಿ, ಮಾರಾಟವು ಇಳಿಮುಖವಾಗಿದೆ ಎಂದು ವಿಶ್ಲೇಷಿಸಲಾಗಿದೆ.

'ಮಾರುತಿ ಫ್ರಾಂಕ್ಸ್' ವಿಶೇಷತೆಗಳೇನು:
ಇದು ಅಗ್ಗದ ದರದಲ್ಲೂ ಲಭ್ಯವಿದೆ. ರೂ.6.85 ಲಕ್ಷದಿಂದ ರೂ.11.98 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಮನೆಗೆ ತರಬಹುದು. ಸಿಗ್ಮಾ (Sigma), ಡೆಲ್ಟಾ (Delta), ಡೆಲ್ಟಾ ಪ್ಲಸ್ (Delta Plus), ಜಿಟಾ (Zeta) ಹಾಗೂ ಆಲ್ಫಾ (Alpha) ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.
ಈ ಕಾರು ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರೇಂಡಿಯರ್ ಗ್ರೇ, ಆಪುಲೆಂಟ್ ರೆಡ್ ಮತ್ತು ಬ್ಲ್ಯೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2520 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಫ್ರಾಂಕ್ಸ್' ಬಲಿಷ್ಠವಾದ ಮೂರು ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1-ಲೀ. ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್, 99 ಪಿಎಸ್ ಅಶ್ವ ಶಕ್ತಿ ಹಾಗೂ 148 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 89 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಇನ್ನೊಂದು 1.2-ಲೀ. ಸಿಎನ್‌ಜಿ ಎಂಜಿನ್, 76 ಪಿಎಸ್ ಅಶ್ವ ಶಕ್ತಿ ಹಾಗೂ 99 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಸ್ಪೀಡ್ ಆಟೋಮೆಟಿಕ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 20 ರಿಂದ 28.51 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 10.38 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಕಾರು 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 308 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್, ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, ರೇರ್ ಎಸಿ ವೆಂಟ್‌ಗಳು, ಸ್ಲೈಡಿಂಗ್ ಫ್ರಂಟ್ ಆರ್ಮ್‌ರೆಸ್ಟ್ ಹಾಗೂ ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಹೊಸ 'ಫ್ರಾಂಕ್ಸ್' ಸುರಕ್ಷತೆಯಿಂದಲೂ ಮನೆ ಮಾತಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಬ್ರೇಕ್ ಅಸಿಸ್ಟ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








