Maruti: ಕೇವಲ ರೂ.6.85 ಲಕ್ಷಕ್ಕೆ ಇಂತಹ ಮಾರುತಿ ಕಾರು! ಭಾರತವೇ ಮೆಚ್ಚಿದೆ.. 28 ಕಿ.ಮೀ ಮೈಲೇಜ್, 5-ಸೀಟರ್

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಜನಮೆಚ್ಚಿದ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಪ್ರತಿ ತಿಂಗಳು ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ಫ್ರಾಂಕ್ಸ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ.. ಈ ಎಸ್‌ಯುವಿಯ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ನೂತನ 'ಮಾರುತಿ ಫ್ರಾಂಕ್ಸ್' ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ರೂ.6.85 ಲಕ್ಷದಿಂದ ರೂ.11.98 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಜಿಟಾ ಮತ್ತು ಆಲ್ಫಾ ಎಂಬ ಆಕರ್ಷಕವಾದ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

Maruti Suzuki Fronx Price Design Colours Engine Mileage Features And All Details

ವಿನ್ಯಾಸ & ಬಣ್ಣಗಳು (Design & Colours):

ಈ ಕಾರು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ದೊಡ್ಡದಾದ 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಬ್ಲ್ಯೂಯಿಶ್ ಬ್ಲ್ಯಾಕ್, ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರೇಂಡಿಯರ್ ಗ್ರೇ ಮತ್ತು ಆಪುಲೆಂಟ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimensions):

ಇದು ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 3,995 ಮಿ.ಮೀ ಉದ್ದ, 1,765 ಮಿ.ಮೀ ಅಗಲ ಮತ್ತು 1,550 ಮಿ.ಮೀ ಎತ್ತರವಿದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2520 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,060 ಕೆಜಿ ತೂಕವಿದೆ.

Maruti Suzuki Fronx Price Design Colours Engine Mileage Features And All Details

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಹೊಸ 'ಫ್ರಾಂಕ್ಸ್' ಎಸ್‌ಯುವಿಯು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 308 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಕಾರ್ಯಕ್ಷಮತೆ (Performance):

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್, 99 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 148 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 89 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

Maruti Suzuki Fronx Price Design Colours Engine Mileage Features And All Details

ಇನ್ನೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್‌, 76 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 99 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ & 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 20.01 ರಿಂದ 28.51 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ವೈಶಿಷ್ಟ್ಯಗಳು (Features):

ನೂತನ 'ಮಾರುತಿ ಫ್ರಾಂಕ್ಸ್' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 10.38 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಹಾಗೂ ರೇರ್ ಎಸಿ ವೆಂಟ್‌ಗಳಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಕ್ರೂಸ್ ಕಂಟ್ರೋಲ್, ಹಿಲ್-ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಬ್ರೇಕ್ ಅಸಿಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Image Source Link: Youtube/ The Car Show

More from DriveSpark

Article Published On: Monday, February 23, 2026, 13:53 [IST]
English summary
Maruti suzuki fronx price design colours engine mileage features and all details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+