27 Km ಮೈಲೇಜ್.. 5-ಸೀಟರ್, ರೂ.10.77 ಲಕ್ಷ.. ಆದ್ರೂ ಈ ಜನಪ್ರಿಯ ಎಸ್‌ಯುವಿ ಕೊಳ್ಳಲು ಗ್ರಾಹಕರಿಗೆ ಮನಸಿಲ್ಲ.. ಯಾಕೆ?
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ನಂಬಿಕಾರ್ಹ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಆದರೂ ಮಾರಾಟ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಅದು ಈ 2026ರ ಫೆಬ್ರವರಿಯಲ್ಲಿಯೂ ಮುಂದುವರಿದಿದೆ. ಒಟ್ಟು 5,859 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 10,669 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -45% ಕುಸಿತವಾಗಿದೆ.
'ಮಾರುತಿ ಗ್ರ್ಯಾಂಡ್ ವಿಟಾರಾ' ಮಾರಾಟವು ಇಳಿಮುಖವಾಗಲು ಹಲವು ಕಾರಣಗಳಿವೆ. ಸ್ವತಃ 'ಮಾರುತಿ ಸುಜುಕಿ'ಯು ಇದೇ ಕಾರನ್ನು ಆಧರಿಸಿದ 'ವಿಕ್ಟೋರಿಸ್' ಎಸ್‌ಯುವಿಯನ್ನು ಮಾರಾಟಕ್ಕೆ ತಂದಿದೆ. ಗ್ರಾಹಕರು ಅದರತ್ತ ಮುಖ ಮಾಡಿದ್ದಾರೆ. ಜೊತೆಗೆ 'ಗ್ರ್ಯಾಂಡ್ ವಿಟಾರಾ' ಬೆಲೆಯೂ ತುಸು ದುಬಾರಿಯಾಗಿದೆ. ಹೀಗಾಗಿ, ಮಾರಾಟವು ಕಡಿಮೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

'ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ' ವಿಶೇಷತೆಗಳೇನು:
ಇದು ಕನಿಷ್ಠ ರೂ.10.77 ಲಕ್ಷ ಮತ್ತು ಗರಿಷ್ಠ ರೂ.19.72 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಗ್ಮಾ (Sigma), ಡೆಲ್ಟಾ (Delta), ಡೆಲ್ಟಾ ಪ್ಲಸ್ (Delta Plus) ಹಾಗೂ ಜಿಟಾ (Zeta) ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & 17-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.
ಈ ಕಾರು ಹೆಚ್ಚು ವಿಶಾಲವಾಗಿದೆ. 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಮಿ.ಮೀ ಎತ್ತರವಿದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,600 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 1,755 ಕೆಜಿ ತೂಗುತ್ತದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ, ಆಪುಲೆಂಟ್ ರೆಡ್ ಹಾಗೂ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ನೂತನ 'ಗ್ರ್ಯಾಂಡ್ ವಿಟಾರಾ' ಬೆಲೆಗೆ ತಕ್ಕಂತೆ ಶಕ್ತಿಯುತವಾದ 3 ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್, 103 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 139 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 115.5 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 141 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಇನ್ನೊಂದು 1.5-ಲೀಟರ್ ಸಿಎನ್‌ಜಿ ಎಂಜಿನ್, 88 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 121 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 21.11 ರಿಂದ 27.97 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 135 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.

ಹೊಸ ಮಾರುತಿ 'ಗ್ರ್ಯಾಂಡ್ ವಿಟಾರಾ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ವೈರ್‌ಲೆಸ್ ಚಾರ್ಜಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಈ ಕಾರು ಪ್ರಯಾಣಿಕರ ರಕ್ಷಣೆಗೂ ಹೆಸರುವಾಸಿಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು, 360 ಡಿಗ್ರಿ ಕ್ಯಾಮೆರಾಗಳು ಮತ್ತು 3 ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.


Click it and Unblock the Notifications








