ಬಡವರ ಪ್ರೀಮಿಯಂ ಕಾರಿದು.. 5.35 ಲಕ್ಷ ರೂಪಾಯಿ, 21 Km ಮೈಲೇಜ್.. ಆದ್ರೂ ಜನ ಕೊಳ್ಳುತ್ತಿಲ್ಲ!
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಆದರೆ, ಈ ಕಾರಿನ ಮಾರಾಟವು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. 2026ರ ಜನವರಿಯಲ್ಲಿಯೂ ಅದು ಮುಂದುವರಿದಿದೆ. ಒಟ್ಟು 1902 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 3,780 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಅಂಶವನ್ನು ಲೆಕ್ಕ ಹಾಕಿದಾಗ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 49.68% ಕುಸಿತವಾಗಿದೆ.
ನೂತನ 'ಮಾರುತಿ ಇಗ್ನಿಸ್' ಮಾರಾಟ ಸಂಖ್ಯೆ ಇಳಿಮುಖವಾಗಲು ಹಲವು ಕಾರಣಗಳಿವೆ. ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರಿನ ಹೆಚ್ಚು-ಕಮ್ಮಿ ಬೆಲೆಗೆ ಎಸ್‌ಯುವಿಗಳೇ ಖರೀದಿಗೆ ಲಭ್ಯವಿವೆ. ಜೊತೆಗೆ ಮಾರುತಿಯ ನಾನಾ ಕಾರುಗಳಿಗೂ ಜನರು ಮನಸೊತ್ತಿದ್ದಾರೆ. ಹೀಗಾಗಿ 'ಇಗ್ನಿಸ್' ಮಾರಾಟವು ಕಡಿಮೆಯಾಗುತ್ತಿದೆ ಎಂದು ವಿಶ್ಲೇಷಿಸಲಾಗಿದೆ.

'ಮಾರುತಿ ಸುಜುಕಿ ಇಗ್ನಿಸ್' ವಿಶೇಷತೆಗಳೇನು:
ಈ ಹ್ಯಾಚ್‌ಬ್ಯಾಕ್ ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಜನರು ಖರೀದಿ ಮಾಡಬಹುದು. ಸಿಗ್ಮಾ (Sigma), ಡೆಲ್ಟಾ (Delta), ಜಿಟಾ (Zeta) ಮತ್ತು ಆಲ್ಫಾ (Alpha) ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ರತಿಯೊಬ್ಬರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಸ್ಪೋರ್ಟಿ ರೂಫ್ ರೈಲ್‌ಗಳು ಮತ್ತು 15-ಇಂಚಿನ ಆಲ್-ಬ್ಲ್ಯಾಕ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲ್ಯೂ, ಲುಸೆಂಟ್ ಆರೆಂಜ್, ಗ್ಲಿಸ್ಟನಿಂಗ್ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಹಾಗೂ ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಮಾರುತಿ ಇಗ್ನಿಸ್' ಹೆಚ್ಚು ವಿಶಾಲವಾಗಿದೆ. 3,700 ಎಂಎಂ ಉದ್ದ, 1,690 ಎಂಎಂ ಅಗಲ ಮತ್ತು 1,595 ಎಂಎಂ ಎತ್ತರವಿದೆ. ಜೊತೆಗೆ 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 865 ಕೆಜಿ ತೂಕವಿದೆ.
ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 6,000 ಆರ್‌ಪಿಎಂನಲ್ಲಿ 83 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4,200 ಆರ್‌ಪಿಎಂನಲ್ಲಿ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಇದು ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 20.89 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 12.93 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಹೊಸ 'ಮಾರುತಿ ಸುಜುಕಿ ಇಗ್ನಿಸ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಹೋಗುವ ಹೆಚ್ಚಿನ ಲಗೇಜ್ ಸಾಗಿಸಲು 260 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್ ಹಾಗೂ ಪವರ್ ವಿಂಡೋಗಳಂತಹ ಹತ್ತಾರು ವೈಶಷ್ತ್ಯಗಳನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಯಿಂದಲೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 2-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೇನಾರ್ಸ್, ಸೆಂಟ್ರಲ್ ಲಾಕಿಂಗ್ ಮತ್ತು ಸೀಟ್ ಬೆಲ್ಟ್ ವಾರ್ನಿಂಗ್ ಅಲರ್ಟ್ ಸಿಸ್ಟಮ್‌ಗಳನ್ನು ಹೊಂದಿದೆ.


Click it and Unblock the Notifications








