ಬಡವರ ಪ್ರೀಮಿಯಂ ಕಾರಿದು.. 5.35 ಲಕ್ಷ ರೂಪಾಯಿ, 20.89 Km ಮೈಲೇಜ್.. ಮನಸೋತ ಗ್ರಾಹಕರು!
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಈ ಕಾರಿಗೆ ಫುಲ್ ಡಿಮ್ಯಾಂಡ್ ಇದ್ದು, ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್ - 2025) 'ಇಗ್ನಿಸ್' ಭಾರೀ ಸಂಖ್ಯೆ ಮಾರಾಟಗೊಂಡಿದೆ. ಒಟ್ಟು 1,910 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 749 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 155% ಬೆಳವಣಿಗೆಯಾಗಿದೆ.
2025ರ ಡಿಸೆಂಬರ್‌ನಲ್ಲಿ 'ಮಾರುತಿ ಇಗ್ನಿಸ್' ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣಿಗೊಂಡಿದೆ. ಆ ಬಳಿಕ ಕಾರಿನ ಬೆಲೆಯೂ ಇಳಿಕೆಯಾಗಿದೆ. ಜೊತೆಗಿದು ಹ್ಯಾಚ್‌ಬ್ಯಾಕ್ ಆಗಿದ್ದರೂ ನೋಡಲು ಎಸ್‌ಯುವಿಯಂತೆ ಭಾಸವಾಗುತ್ತದೆ. ಹೀಗಾಗಿ, ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

'ಮಾರುತಿ ಸುಜುಕಿ ಇಗ್ನಿಸ್' ವಿಶೇಷತೆಗಳೇನು:
ಈ ಕಾರು ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಸಿಗ್ಮಾ (Sigma), ಡೆಲ್ಟಾ (Delta), ಜಿಟಾ (Zeta) ಮತ್ತು ಆಲ್ಫಾ (Alpha) ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.
ನೂತನ 'ಇಗ್ನಿಸ್' ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 15-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ನೆಕ್ಸಾ ಬ್ಲ್ಯೂ, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್, ಸಿಲ್ಕಿ ಸಿಲ್ವರ್ & ಟರ್ಕೋಯಿಸ್ ಬ್ಲ್ಯೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಇದು ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 6,000 ಆರ್‌ಪಿಎಂನಲ್ಲಿ 82 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4,200 ಆರ್‌ಪಿಎಂನಲ್ಲಿ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಈ ಕಾರು ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 20.89 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 32 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 14.21 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ 'ಮಾರುತಿ ಇಗ್ನಿಸ್' 5 ಆಸನ ಆಯ್ಕೆಯನ್ನು ಪಡೆದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗುವುದಕ್ಕೆ 260 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡುಯಲ್-ಫ್ರಂಟ್ ಏರ್‌ಬ್ಯಾಗ್‌ಗಳು, ರೇರ್ ಪಾರ್ಕಿಂಗ್ ಸೇನಾರ್ಸ್, ಸೀಟ್ ಬೆಲ್ಟ್ ವಾರ್ನಿಂಗ್ ಅಲರ್ಟ್ ಸಿಸ್ಟಮ್ ಮತ್ತು ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಟಾಟಾ ಪಂಚ್ (Tata Punch), ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios), ಟಾಟಾ ಟಿಯಾಗೊ (Tata Tiago), ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಹಾಗೂ ರೆನಾಲ್ಟ್ ಕ್ವಿಡ್ (Renault Kwid) ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








