ಪ್ರತಿದಿನ 66 ಕಾರುಗಳಷ್ಟೇ ಸೇಲ್ಸ್.. ಮುನಿಸಿಕೊಂಡ ಜನ.. ರೂ.5.35 ಲಕ್ಷ.. 20.89 ಕಿ.ಮೀ ಮೈಲೇಜ್!
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಆದರೂ ದಿನದಿಂದ ದಿನಕ್ಕೆ ಬೇಡಿಕೆಯೂ ಕುಸಿತವಾಗುತ್ತಿದೆ. ಅದು ಈ 2026ರ ಫೆಬ್ರವರಿ ತಿಂಗಳಲ್ಲೂ ಮುಂದುವರಿದಿದೆ. ಒಟ್ಟು 1,848 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 2,394 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -23% ಇಳಿಮುಖವಾಗಿದೆ.
ನೂತನ 'ಇಗ್ನಿಸ್' ಮಾರಾಟದಲ್ಲಿ ಹಲವು ತಿಂಗಳಿಂದ ಹಾವು-ಏಣಿ ಆಟ ಮುಂದುವರಿದಿದೆ. ಈ ಜನವರಿಯಲ್ಲಿ 1,902 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2025ರ ಡಿಸೆಂಬರ್‌ನಲ್ಲಿ 1,910 ಯುನಿಟ್‌ಗಳು, ನವೆಂಬರ್‌ನಲ್ಲಿ 2,316 ಯುನಿಟ್‌ಗಳು, ಅಕ್ಟೋಬರ್‌ನಲ್ಲಿ 2,645 ಯುನಿಟ್‌ಗಳು ಮತ್ತು ಸೆಪ್ಟೆಂಬರ್‌ನಲ್ಲಿ 1,704 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

ಇದೇ 'ಮಾರುತಿ ಇಗ್ನಿಸ್' ಮಾರಾಟ ಸಂಖ್ಯೆಯು ಕಡಿಮೆಯಾಗಲು ನಾನಾ ಕಾರಣಗಳಿವೆ. ಈ ಕಾರಿನ ಹೆಚ್ಚು-ಕಮ್ಮಿ ಬೆಲೆಗೆ ವಿವಿಧ ಎಸ್‌ಯುವಿಗಳು ಖರೀದಿಗೆ ಲಭ್ಯವಿವೆ. ಗ್ರಾಹಕರು ಅವುಗಳತ್ತ ಮುಖ ಮಾಡಿದ್ದಾರೆ. ಹಾಗೆಯೇ 'ಇಗ್ನಿಸ್'ನ ವೈಶಿಷ್ಟ್ಯಗಳಲ್ಲೂ ಒಂದಷ್ಟು ಕೊರತೆಯಿದೆ. ಹೀಗಾಗಿ, ಮಾರಾಟವು ಇಳಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.
'ಮಾರುತಿ ಸುಜುಕಿ ಇಗ್ನಿಸ್' ವಿಶೇಷತೆಗಳೇನು:
ಈ ಕಾರು ಬಜೆಟ್ ಬೆಲೆಯಲ್ಲಿಯೂ ಲಭ್ಯವಿದೆ. ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಲ ವರ್ಗದ ಜನರು ಸುಲಭವಾಗಿ ಕೊಳ್ಳಬಹುದು. ಸಿಗ್ಮಾ (Sigma), ಡೆಲ್ಟಾ (Delta), ಜಿಟಾ (Zeta) ಮತ್ತು ಆಲ್ಫಾ (Alpha) ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.

ನೂತನ 'ಇಗ್ನಿಸ್' ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲ್ಯೂ, ಲುಸೆಂಟ್ ಆರೆಂಜ್, ಗ್ಲಿಸ್ಟನಿಂಗ್ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ & ಟರ್ಕೋಯಿಸ್ ಬ್ಲ್ಯೂ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. ಹೆಚ್ಚು ವಿಶಾಲವಾಗಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ಇದು 'ಮಾರುತಿ ಇಗ್ನಿಸ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 6,000 ಆರ್‌ಪಿಎಂನಲ್ಲಿ 82 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4,200 ಆರ್‌ಪಿಎಂನಲ್ಲಿ 113 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 20.89 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 260 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್, ಕೀಲೆಸ್ ಎಂಟ್ರಿ ಮತ್ತು ಪವರ್ ವಿಂಡೋನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ 'ಮಾರುತಿ ಇಗ್ನಿಸ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೇನಾರ್ಸ್, ಸೆಂಟ್ರಲ್ ಲಾಕಿಂಗ್, ಸೀಟ್ ಬೆಲ್ಟ್ ವಾರ್ನಿಂಗ್ ಅಲರ್ಟ್ ಸಿಸ್ಟಮ್ ಮತ್ತು ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








