Maruti: 23 ಕಿ.ಮೀ ಮೈಲೇಜ್.. 8-ಸೀಟರ್.. ಆದ್ರೂ ಈ ಆನೆ ಗಾತ್ರದ ಮಾರುತಿ ಕಾರನ್ನು ಜನ ಖರೀದಿಸುತ್ತಿಲ್ಲ.. ಯಾಕೆ?

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಪ್ರಮುಖ ಎಂಪಿವಿಯಾಗಿದೆ. ಆದರೆ, ಈ ಕಾರಿನ ಮಾರಾಟದಲ್ಲಿ ಹಾವು - ಏಣಿ ಆಟ ಸಾಗುತ್ತಿದೆ. ಕಳೆದ ತಿಂಗಳು (ಫೆಬ್ರವರಿ - 2026) ಬರೀ 143 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗದೆ. 2025ರ ಇದೇ ಅವಧಿಯಲ್ಲಿ 380 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ -62% ಇಳಿಮುಖವಾಗಿದೆ.

'ಮಾರುತಿ ಇನ್ವಿಕ್ಟೋ' ಮಾರಾಟ ಸಂಖ್ಯೆ ಕುಸಿತವಾಗಲು ಹಲವು ಕಾರಣಗಳಿವೆ. ಇದು ಸ್ವಲ್ಪ ಮಟ್ಟಿಗೆ ದುಬಾರಿಯಾಗಿದೆ. ಜೊತೆಗೆ 'ಟೊಯೊಟಾ ಇನ್ನೋವಾ ಹೈಕ್ರಾಸ್' ಎಂಪಿವಿಯ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಹೆಚ್ಚು - ಕಮ್ಮಿ ಅದಕ್ಕೆ ಹೋಲಿಕೆಯಾಗುತ್ತದೆ. ಹೀಗಾಗಿ, ಮಾರಾಟವು ಇಳಿಕೆಯಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.

Maruti Suzuki Invicto February 2026 Sales Report

'ಮಾರುತಿ ಸುಜುಕಿ ಇನ್ವಿಕ್ಟೋ' ವಿಶೇಷತೆಗಳೇನು:

ಇದು ಕನಿಷ್ಠ ರೂ.24.97 ಲಕ್ಷ ಮತ್ತು ಗರಿಷ್ಠ ರೂ.28.61 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಜಿಟಾ (Zeta) ಮತ್ತು ಆಲ್ಫಾ (Alpha) ಎಂಬ 2 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಈ ಕಾರು ಹೆಚ್ಚು ವಿಶಾಲವಾಗಿದೆ. 4,755 ಎಂಎಂ ಉದ್ದ, 1,850 ಎಂಎಂ ಅಗಲ ಮತ್ತು 1,795 ಎಂಎಂ ಎತ್ತರವಿದೆ. 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,850 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 2,320 ಕೆಜಿ ತೂಗುತ್ತದೆ. ಮೆಜೆಸ್ಟಿಕ್ ಸಿಲ್ವರ್, ಸ್ಟೆಲ್ಲರ್ ಬ್ರೋನ್, ಮ್ಯಾಗ್ನಿಫಿಸೆಂಟ್ ಬ್ಲ್ಯಾಕ್, ನೆಕ್ಸಾ ಬ್ಲೂ ಮತ್ತು ಮಿಸ್ಟಿಕ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

Maruti Suzuki Invicto February 2026 Sales Report

ನೂತನ 'ಮಾರುತಿ ಇನ್ವಿಕ್ಟೋ' ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 6,000 ಆರ್‌ಪಿಎಂನಲ್ಲಿ 184 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5,200 ಆರ್‌ಪಿಎಂನಲ್ಲಿ 188 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 23 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದು 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 289 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.

Maruti Suzuki Invicto February 2026 Sales Report

ಹೊಸ 'ಇನ್ವಿಕ್ಟೋ' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಮತ್ತು ಆಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಈ ಕಾರಿಗೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO), ಟಾಟಾ ಸಫಾರಿ (Tata Safari), ಕಿಯಾ ಕ್ಯಾರೆನ್ಸ್ (Kia Carens), ಹ್ಯುಂಡೈ ಅಲ್ಕಾಜರ್ (Hyundai Alcazar) ಹಾಗೂ ಎಂಜಿ ಹೆಕ್ಟರ್ ಪ್ಲಸ್ (MG Hector Plus) ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Monday, March 9, 2026, 8:33 [IST]
English summary
Maruti suzuki invicto february 2026 sales report
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+