Maruti Suzuki: 23 Km ಮೈಲೇಜ್.. 8-ಸೀಟರ್.. ಈ ಜನಪ್ರಿಯ ಮಾರುತಿ MPV ಕುರಿತ ಪ್ರಮುಖಾಂಶಗಳು!

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಪ್ರಖ್ಯಾತ ಎಂಪಿವಿಯಾಗಿ ಹೊರಹೊಮ್ಮಿದೆ. ಇದು ಅಧಿಕ ಸಂಖ್ಯೆಯ ಆಸನಗಳನ್ನು ಒಳಗೊಂಡಿದ್ದು, ತುಂಬು ಕುಟುಂಬಗಳಿಗೆ ಫರ್ಪೆಕ್ಟ್ ಆಗಿದೆ. ಒಂದಷ್ಟು ಗ್ರಾಹಕರು ಸಹ ಇಷ್ಟಪಟ್ಟು ಕೊಳುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಇನ್ವಿಕ್ಟೋ' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಎಂಪಿವಿಯ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ನೂತನ 'ಮಾರುತಿ ಇನ್ವಿಕ್ಟೋ' ಎಂಪಿವಿಯು ತುಸು ದುಬಾರಿ ಬೆಲೆಯನ್ನು ಹೊಂದಿದೆ. ರೂ.24.97 ಲಕ್ಷದಿಂದ ರೂ.28.61 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಮೇಲ್ಮಧ್ಯಮ ಹಾಗೂ ಶ್ರೀಮಂತ ವರ್ಗದವರು ಸುಲಭವಾಗಿ ಕೊಂಡುಕೊಳ್ಳಬಹುದು. ಜಿಟಾ ಹಾಗೂ ಆಲ್ಫಾ ಎಂಬ 2 ರೂಪಾಂತರಗಳೊಂದಿಗೂ ಸಿಗುತ್ತದೆ.

Maruti Suzuki Invicto Price Design Colours Engine Mileage Features and All Details

ವಿನ್ಯಾಸ & ಬಣ್ಣಗಳು (Design & Colors):

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಮೆಜೆಸ್ಟಿಕ್ ಸಿಲ್ವರ್, ಸ್ಟೆಲ್ಲರ್ ಬ್ರೋನ್, ಮ್ಯಾಗ್ನಿಫಿಸೆಂಟ್ ಬ್ಲ್ಯಾಕ್, ನೆಕ್ಸಾ ಬ್ಲೂ ಹಾಗೂ ಮಿಸ್ಟಿಕ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಸುತ್ತಳತೆ (Dimensions):

ಹೊಸ 'ಇನ್ವಿಕ್ಟೋ' ಎಂಪಿವಿಯು 'ಟೊಯೊಟಾ ಇನ್ನೋವಾ ಹೈಕ್ರಾಸ್' ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಸಾಕಷ್ಟು ವಿಶಾಲವಾಗಿದೆ. 4,755 ಮಿ.ಮೀ ಉದ್ದ, 1,850 ಮಿ.ಮೀ ಅಗಲ ಹಾಗೂ 1,795 ಮಿ.ಮೀ ಎತ್ತರವಿದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,850 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಒಟ್ಟು 2,320 ಕೆಜಿ ತೂಕವಿದೆ.

Maruti Suzuki Invicto Price Design Colours Engine Mileage Features and All Details

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಈ ಕಾರು 7 ಹಾಗೂ 8 ಆಸನಗಳನ್ನು ಒಳಗೊಂಡಿದ್ದು, ಸುಲಭವಾಗಿ ಓಡಾಟ ನಡೆಸಬಹುದು. ವೀಕೆಂಡ್‌ಗಳಲ್ಲಿ ದೂರದ ಊರುಗಳಿಗೆ ಲಾಂಗ್ ಡ್ರೈವ್ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ದೊಡ್ಡ ಗಾತ್ರದ 289 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಕಾರ್ಯಕ್ಷಮತೆ (Performance):

ಇದು ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 184 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 188 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Maruti Suzuki Invicto Price Design Colours Engine Mileage Features and All Details

ಮೈಲೇಜ್ (Mileage):

ನೂತನ 'ಮಾರುತಿ ಇನ್ವಿಕ್ಟೋ' ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 23 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಸರಿ ಸುಮಾರು 52 ಲೀಟರ್ ಸಾಮರ್ಥ್ಯ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. ಒಮ್ಮೆ ಪೂರ್ತಿಯಾಗಿ ತುಂಬಿಸಿದರೆ 1,196 ಕಿಲೋಮೀಟರ್‌ವರೆಗೂ ಕ್ರಮಿಸಬಲ್ಲದು.

ವೈಶಿಷ್ಟ್ಯಗಳು (Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. ಅತ್ಯುತ್ತಮವಾದ ಡ್ಯಾಶ್‌ಬೋರ್ಡ್‌ನ್ನು ಒಳಗೊಂಡಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್ ಮತ್ತು ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್ ಆಯ್ಕೆಯನ್ನು ಒಳಗೊಂಡಿದೆ.

More from DriveSpark

Article Published On: Thursday, February 12, 2026, 8:30 [IST]
English summary
Maruti suzuki invicto price design colours engine mileage features and all details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+