Maruti: ಬೈಕ್ ಬೆಲೆಗೆ ಸಿಗುತ್ತೆ ಈ ಮಾರುತಿ ಕಾರು.. 33 Km ಮೈಲೇಜ್, 3.50 ಲಕ್ಷ ರೂಪಾಯಿ.. ಆದ್ರೂ ಗ್ರಾಹಕರು ಖರೀದಿಸುತ್ತಿಲ್ಲ!

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಇದನ್ನು ಮಧ್ಯಮ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಕೊಂಡುಕೊಳ್ಳುತ್ತಿದ್ದಾರೆ. ಆದರೂ ಈ 2026ರ ಜನವರಿಯಲ್ಲಿ 'ಎಸ್-ಪ್ರೆಸ್ಸೊ' ಮಾರಾಟವು ಇಳಿಕೆಯಾಗಿದೆ. ಬರೀ 1,954 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 2,895 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -32.50% ಕುಸಿತವಾಗಿದೆ.

ಜನವರಿ ತಿಂಗಳಲ್ಲಿ 'ಮಾರುತಿ ಎಸ್-ಪ್ರೆಸ್ಸೊ' ಮಾರಾಟ ಸಂಖ್ಯೆ ಇಳಿಮುಖವಾಗಲು ಹಲವು ಕಾರಣಗಳಿವೆ. ಬಹುಮುಖ್ಯವಾಗಿ, ದೇಶೀಯ ಮಾರುಕಟ್ಟೆಯಲ್ಲಿ ಎಸ್‌ಯುವಿಗಳಿಗೆ ವಿಪರೀತವಾದ ಬೇಡಿಕೆಯಿದೆ. ಆದರಿದು ಹ್ಯಾಚ್‌ಬ್ಯಾಕ್ ಆಗಿದೆ. ಜೊತೆಗೆ 'ಎಸ್-ಪ್ರೆಸ್ಸೊ'ದಲ್ಲಿ ಹಲವು ವೈಶಿಷ್ಟ್ಯಗಳ ಕೊರತೆಯಿದೆ. ಹೀಗಾಗಿ ಮಾರಾಟವು ಕಡಿಮೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.

Maruti Suzuki S-Presso 2026 January Sales Details

'ಮಾರುತಿ ಸುಜುಕಿ ಎಸ್-ಪ್ರೆಸ್ಸೊ' ವಿಶೇಷತೆಗಳೇನು:

ಈ ಕಾರು ಅಗ್ಗದ ಬೆಲೆಗೆ ಲಭ್ಯವಿದೆ. ಕನಿಷ್ಠ ರೂ.3.50 ಲಕ್ಷ ಹಾಗೂ ಗರಿಷ್ಠ ರೂ.5.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್ (Standard), ಎಲ್ಎಕ್ಸ್ಐ (LXi), ವಿಎಕ್ಸ್ಐ (VXi) ಮತ್ತು ವಿಎಕ್ಸ್ಐ ಪ್ಲಸ್ (VXi Plus) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಮನ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 14-ಇಂಚಿನ ವೀಲ್‌ಗಳನ್ನು ಹೊಂದಿದೆ. ಸಾಲಿಡ್ ಸಿಜಲ್ ಆರೆಂಜ್, ಸಾಲಿಡ್ ಫೈರ್ ರೆಡ್, ಪರ್ಲ್ ಸ್ಟಾರ್ರಿ ಬ್ಲೂ, ಬ್ಲ್ಯೂಯಿಶ್ ಬ್ಲ್ಯಾಕ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್ ಮತ್ತು ಸಾಲಿಡ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Maruti Suzuki S-Presso 2026 January Sales Details

ಹೊಸ 'ಎಸ್-ಪ್ರೆಸ್ಸೊ' ಸಾಕಷ್ಟು ವಿಶಾಲವಾಗಿದೆ. 3,565 ಎಂಎಂ ಉದ್ದ, 1,520 ಎಂಎಂ ಅಗಲ ಹಾಗೂ 1,553 ಎಂಎಂ ಎತ್ತರವಿದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,380 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 854 ಕೆಜಿ ತೂಕವಿದೆ.

ಈ ಹ್ಯಾಚ್‌ಬ್ಯಾಕ್ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1-ಲೀ. 3-ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 5,500 ಆರ್‌ಪಿಎಂನಲ್ಲಿ 66.6 ಬಿ‌ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 3,500 ಆರ್‌ಪಿಎಂನಲ್ಲಿ 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Maruti Suzuki S-Presso 2026 January Sales Details

ಮತ್ತೊಂದು 1-ಲೀ. ಸಿಎನ್‌ಜಿ ಎಂಜಿನ್, 5,300 ಆರ್‌ಪಿಎಂನಲ್ಲಿ 56.6 ಬಿ‌ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 3,400 ಆರ್‌ಪಿಎಂನಲ್ಲಿ 82.1 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ನೂತನ 'ಎಸ್-ಪ್ರೆಸ್ಸೊ' 24 ರಿಂದ 33 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 148 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 15.4 ಸೆಕೆಂಡುಗಳನ್ನು 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದು ಅತ್ಯುತ್ತಮವಾದ ಕ್ಯಾಬಿನ್ ವಿನ್ಯಾಸವನ್ನು ಒಳಗೊಂಡಿದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 270 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ವಿಂಡೋಗಳು, ಯುಎಸ್‌ಬಿ ಕನೆಕ್ಟಿವಿಟಿ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಸುರಕ್ಷತೆಯಿಂದಲೂ ಮಾನೆ ಮಾತಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 2-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಪ್ರೋಗ್ರಾಂ), ಸೆಂಟ್ರಲ್ ಲಾಕಿಂಗ್ ಮತ್ತು ರೇರ್-ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

More from DriveSpark

Article Published On: Wednesday, February 11, 2026, 22:17 [IST]
English summary
Maruti suzuki s presso 2026 january sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+