33 ಕಿ.ಮೀ ಮೈಲೇಜ್.. ರೂ.3.50 ಲಕ್ಷ.. ತುಂಬಾ ಚೆನ್ನಾಗಿದೆ.. ಆದರೂ ಕೇಳೋರಿಲ್ಲ.. ಪ್ರತಿದಿನ 16 ಕಾರುಗಳಷ್ಟೇ ಸೇಲ್ಸ್!

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಅಗ್ಗದ ದರದಲ್ಲೂ ಲಭ್ಯವಿದೆ. ಆದರೂ ಈ ಕಾರಿನ ಮಾರಾಟವು ದಿನದಿಂದ ದಿನಕ್ಕೆ ಇಳಿಕೆಯಾಯಾಗುತ್ತದೆ. ಕಳೆದ ತಿಂಗಳು (ಫೆಬ್ರವರಿ - 2026) ಅದು ಮುಂದುವರಿದಿದೆ. ಕೇವಲ 451 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. ಅಂದರೆ ಪ್ರತಿದಿನ 16 'ಎಸ್-ಪ್ರೆಸ್ಸೊ' ಕಾರುಗಳನ್ನು ಮಾತ್ರ ಮಾರಾಟಗೊಳಿಸಲಾಗಿದೆ. 2025ರ ಇದೇ ಅವಧಿಯಲ್ಲಿ 1,685 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -73% ಕುಸಿತವಾಗಿದೆ.

ನೂತನ 'ಮಾರುತಿ ಎಸ್-ಪ್ರೆಸ್ಸೊ' ಮಾರಾಟದಲ್ಲಿ ಹಲವು ತಿಂಗಳಿಂದ ಏರಿಳಿತಗಳನ್ನು ಕಾಣಲಾಗಿದೆ. ಇದೇ ಜನವರಿಯಲ್ಲಿ 1,954 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2025ರ ಡಿಸೆಂಬರ್‌ನಲ್ಲಿ 3,396 ಯುನಿಟ್, ನವೆಂಬರ್‌ನಲ್ಲಿ 1,747 ಯುನಿಟ್, ಅಕ್ಟೋಬರ್‌ನಲ್ಲಿ 2,857 ಯುನಿಟ್ ಹಾಗೂ ಸೆಪ್ಟೆಂಬರ್‌ನಲ್ಲಿ 1,774 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ.

Maruti Suzuki S-Presso February 2026 Sales Details

ಇದೇ 'ಎಸ್-ಪ್ರೆಸ್ಸೊ' ಮಾರಾಟವು ಇಳಿಮುಖವಾಗಲು ಹಲವು ಕಾರಣಗಳಿವೆ. ಸದ್ಯ ಗ್ರಾಹಕರು ಎಸ್‌ಯುವಿಗಳ ಖರೀದಿಯತ್ತ ಮುಖ ಮಾಡಿದ್ದಾರೆ. ಜೊತೆಗೆ ಈ ಕಾರಿನ ವೈಶಿಷ್ಟ್ಯದಲ್ಲಿ ಒಂದಷ್ಟು ಕೊರತೆಗಳಿವೆ. ಹೀಗಾಗಿ ಮಾರಾಟ ಸಂಖ್ಯೆಯೂ ಕಡಿಮೆಯಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.

'ಮಾರುತಿ ಸುಜುಕಿ ಎಸ್-ಪ್ರೆಸ್ಸೊ' ವಿಶೇಷತೆಗಳೇನು:

ಇದು ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಸ್ಟ್ಯಾಂಡರ್ಡ್, ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ. ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 14-ಇಂಚಿನ ವೀಲ್‌ಗಳನ್ನು ಪಡೆದಿದೆ.

Maruti Suzuki S-Presso February 2026 Sales Details

ಈ ಕಾರು ಸಾಕಷ್ಟು ವಿಶಾಲವಾಗಿದೆ. 3,565 ಮಿ.ಮೀ ಉದ್ದ, 1,520 ಮಿ.ಮೀ ಅಗಲ ಮತ್ತು 1,553 ಮಿ.ಮೀ ಎತ್ತರವಿದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,380 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 854 ಕೆಜಿ ತೂಗುತ್ತದೆ. ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್, ಸಾಲಿಡ್ ಸಿಜಲ್ ಆರೆಂಜ್, ಸಾಲಿಡ್ ಫೈರ್ ರೆಡ್, ಪರ್ಲ್ ಸ್ಟಾರ್ರಿ ಬ್ಲೂ, ಬ್ಲ್ಯೂಯಿಶ್ ಬ್ಲ್ಯಾಕ್ & ಸಾಲಿಡ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಮಾರುತಿ ಎಸ್-ಪ್ರೆಸ್ಸೊ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 66.6 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 89 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1-ಲೀಟರ್ ಸಿಎನ್‌ಜಿ ಎಂಜಿನ್, 56.6 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 82.1 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

Maruti Suzuki S-Presso February 2026 Sales Details

ಇದು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.12 ರಿಂದ 32.73 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 148 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 15.4 ಸೆಕೆಂಡುಗಳನ್ನು 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. 270 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಕನೆಕ್ಟಿವಿಟಿ ಮತ್ತು ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 2-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ರೇರ್-ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Wednesday, March 11, 2026, 11:14 [IST]
English summary
Maruti suzuki s presso february 2026 sales details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+