ಬಡವರ ಪ್ರೀಮಿಯಂ ಕಾರಿದು.. ರೂ.5.79 ಲಕ್ಷ.. 33 Km ಮೈಲೇಜ್.. ಮನಸೋತ ಜನ!
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. 2005ರಲ್ಲಿ ಮೊದಲ ಬಾರಿಗೆ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಯಿತು. ಅಂದಿನಿಂದ ಇಂದಿನವರೆಗೆ ವ್ಯಾಪಕವಾದ ಬೇಡಿಕೆಯನ್ನು ಹೊಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿಯೇ ಮಾರಾಟಗೊಳುತ್ತಿದೆ. ಈ 2026ರ ಫೆಬ್ರವರಿಯಲ್ಲಿ ಒಟ್ಟು 14,885 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 16,269 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ ಅಂಶವನ್ನು ವಿಶ್ಲೇಷಿಸಿದಾಗ ಮಾರಾಟವು ವರ್ಷದಿಂದ ವರ್ಷಕ್ಕೆ ಸ್ವಲ್ಪ ಮಟ್ಟಿಗೆ ಅಂದರೆ ಶೇಕಡ -8.83% ಮಾತ್ರ ಇಳಿಕೆಯಾಗಿದೆ.
'ಮಾರುತಿ ಸ್ವಿಫ್ಟ್' ವಿಶೇಷತೆಗಳೇನು:
ಈ ಕಾರು ಅಗ್ಗದ ದರದಲ್ಲಿ ಲಭ್ಯವಿದೆ. ಕನಿಷ್ಠ ರೂ.5.79 ಲಕ್ಷ ಹಾಗೂ ಗರಿಷ್ಠ ರೂ.8.65 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಮನೆಗೆ ತರಬಹುದು. ಎಲ್ಎಕ್ಸ್ಐ (LXi), ವಿಎಕ್ಸ್ಐ (VXi), ಝಡ್ಎಕ್ಸ್ಐ (ZXi) ಹಾಗೂ ಝಡ್ಎಕ್ಸ್ಐ ಪ್ಲಸ್ (ZXi Plus) ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ.

ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಲಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಬ್ಲ್ಯೂಯಿಶ್ ಬ್ಲ್ಯಾಕ್ ಎಂಬ ಸಿಂಗಲ್-ಟೋನ್ ಬಣ್ಣದೊಂದಿಗೂ ದೊರೆಯುತ್ತದೆ. ಇದರೊಂದಿಗೆ ಪರ್ಲ್ ಆರ್ಕ್ಟಿಕ್ ವೈಟ್ ವಿತ್ ಮಿಡ್‌ನೈಟ್ ಬ್ಲ್ಯಾಕ್ ಮತ್ತು ಸಿಜ್ಲಿಂಗ್ ರೆಡ್ ವಿತ್ ಮಿಡ್‌ನೈಟ್ ಬ್ಲ್ಯಾಕ್ ಎಂಬ ಡುಯಲ್-ಟೋನ್ ಬಣ್ಣದೊಂದಿಗೆ ಲಭ್ಯವಿದೆ.
ನೂತನ 'ಸ್ವಿಫ್ಟ್' ಸಾಕಷ್ಟು ವಿಶಾಲವಾಗಿದೆ. 3,860 ಎಂಎಂ ಉದ್ದ, 1,735 ಎಂಎಂ ಅಗಲ & 1,520 ಎಂಎಂ ಎತ್ತರವಿದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,450 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 925 ಕೆಜಿ ತೂಕವಿದೆ.

ಈ ಹ್ಯಾಚ್‌ಬ್ಯಾಕ್ ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್, 82 ಪಿಎಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.2-ಲೀಟರ್ ಸಿಎನ್‌ಜಿ ಎಂಜಿನ್, 70 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 102 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ.
ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ & 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಪೆಟ್ರೋಲ್ ಮಾಡೆಲ್‌ಗಳು 24.80 ರಿಂದ 25.75 ಕಿ.ಮೀ ಹಾಗೂ ಸಿಎನ್‌ಜಿ ಮಾಡೆಲ್‌ಗಳು 32.85 ಕಿ.ಮೀವರೆಗೆ ಮೈಲೇಜ್ ಕೊಡುತ್ತವೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 17.3 ಸೆಕೆಂಡುಗಳಲ್ಲಿ 0 ಕೆಎಂಪಿಹೆಚ್ 100 ವೇಗವನ್ನು ಪಡೆಯಲಿದೆ.

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 265 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್ ಹಾಗೂ ವೈರ್‌ಲೆಸ್ ಚಾರ್ಜರ್‌ನಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಯಿಂದಲೂ ಎಲ್ಲೆಡೆ ಮನೆ ಮಾತಾಗಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಕ್ಯಾಮೆರಾ ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.


Click it and Unblock the Notifications








