Maruti: ಜನಪ್ರಿಯ ಮಾರುತಿ ಕಾರಿದು.. ರೂ.5.79 ಲಕ್ಷಕ್ಕೆ ಸಿಗುತ್ತೆ.. 33 Km ಮೈಲೇಜ್, ಪ್ರತಿದಿನ 574 ಕಾರು ಸೇಲ್ಸ್!

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಜನಮೆಚ್ಚಿದ ಹ್ಯಾಚ್‌ಬ್ಯಾಕ್‌ ಎಂದೇ ಮನೆ ಮಾತಾಗಿದೆ. ಈ ಕಾರಿಗೆ ದಿನದಿಂದ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) 'ಸ್ವಿಫ್ಟ್' ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 17,806 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 17,081 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 4.24% ಬೆಳವಣಿಗೆಯಾಗಿದೆ. ಅಂದರೆ, ಪ್ರತಿದಿನ 574 ಕಾರುಗಳನ್ನು ಮಾರಾಟ ಮಾಡಲಾಗಿದೆ.

ನೂತನ 'ಸ್ವಿಫ್ಟ್' ಸ್ಪರ್ಧಾತ್ಮಕ ಬೆಲೆಯಲ್ಲಿಯೂ ದೊರೆಯುತ್ತದೆ. ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ (LXi), ವಿಎಕ್ಸ್ಐ (VXi), ಝಡ್ಎಕ್ಸ್ಐ (ZXi) ಮತ್ತು ಝಡ್ಎಕ್ಸ್ಐ ಪ್ಲಸ್ (ZXi Plus) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Maruti Suzuki Swift Sales Report 2026 January Every Day 574 Deliveries

ಈ ಹ್ಯಾಚ್‌ಬ್ಯಾಕ್‌ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಮನ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸಿಜ್ಲಿಂಗ್ ರೆಡ್ ಮೆಟಾಲಿಕ್, ನಾವೆಲ್ ಆರೆಂಜ್, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಹೆಚ್ಚು ವಿಶಾಲವಾಗಿದ್ದು, 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,450 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಇದು ಅತ್ಯುತ್ತಮವಾದ 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ ಬರೋಬ್ಬರಿ 265 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

Maruti Suzuki Swift Sales Report 2026 January Every Day 574 Deliveries

ಹೊಸ 'ಸ್ವಿಫ್ಟ್' ಬೆಲೆಗೆ ತಕ್ಕಂತೆ 2 ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 82 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 112 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀ. ಸಿಎನ್‌ಜಿ ಎಂಜಿನ್‌, 70 ಬಿಹೆಚ್‌ಪಿ ಅಶ್ವ ಶಕ್ತಿ ಹಾಗೂ 102 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 24 ರಿಂದ 33 ಕಿಲೋಮೀಟರ್‌ವರೆಗೂ ಮೈಲೇಜ್ ಕೊಡುತ್ತದೆ. 165 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 17 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Maruti Suzuki Swift Sales Report 2026 January Every Day 574 Deliveries

ನೂತನ 'ಸ್ವಿಫ್ಟ್' ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು, ಪುಶ್-ಬಟನ್ ಸ್ಟಾರ್ಟ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್ ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್, ಹಿಲ್-ಹೋಲ್ಡ್ ಅಸಿಸ್ಟ್, ಸೀಟ್ ಬೆಲ್ಟ್ ರಿಮೈಂಡರ್‌ ಹಾಗೂ 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.

ಈ ಕಾರಿಗೆ ಸಾಲು - ಸಾಲು ಎದುರಾಳಿಗಳಿವೆ. ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios), ಟಾಟಾ ಟಿಯಾಗೊ (Tata Tiago), ಹ್ಯುಂಡೈ ಐ20 (Hyundai i20), ಟಾಟಾ ಪಂಚ್ (Tata Punch) ಹಾಗೂ ಹ್ಯುಂಡೈ ಎಕ್ಸ್‌ಟರ್ (Hyundai Exter) ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Wednesday, February 4, 2026, 22:20 [IST]
English summary
Maruti suzuki swift sales report 2026 january every day 574 deliveries
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+