Maruti Suzuki: ಹೊಸ ಕಾರಿನ ಅಬ್ಬರ.. ಥಂಡಾ ಹೊಡೆದ ಪ್ರತಿಸ್ಪರ್ಧಿಗಳು.. 29 Km ಮೈಲೇಜ್, ರೂ.10.50 ಲಕ್ಷ!

ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ತಿಂಗಳು (ಡಿಸೆಂಬರ್ - 2025) ಸಹ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 14,000ಕ್ಕೂ ಅಧಿಕ ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. ನೂತನ 'ವಿಕ್ಟೋರಿಸ್'ನ್ನು ಸೆಪ್ಟೆಂಬರ್ 16 ರಂದು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಅದೇ ತಿಂಗಳು 4,261 ಯುನಿಟ್‌ಗಳನ್ನು ಮಾರಲಾಗಿತ್ತು. ಅಕ್ಟೋಬರ್‌ನಲ್ಲಿ 13,496 ಯುನಿಟ್‌ಗಳು ಹಾಗೂ ನವೆಂಬರ್‌ನಲ್ಲಿ 12,300 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.

ನೂತನ 'ಮಾರುತಿ ವಿಕ್ಟೋರಿಸ್' ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ, ಜಡ್ಎಕ್ಸ್ಐ (ಒ), ಜಡ್ಎಕ್ಸ್ಐ ಪ್ಲಸ್ ಹಾಗೂ ಜಡ್ಎಕ್ಸ್ಐ (ಒ) ಪ್ಲಸ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ.

Maruti Suzuki Victoris 14 000 Cars Sold In December 2025 Details

ಇದು ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿದೆ. ನೋಡುಗರ ಕಣ್ಮನ ಸೆಳೆಯುವಂತಿದೆ. ಅದಕ್ಕೆ ತಕ್ಕಂತೆ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಈ ಕಾರು ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಆರ್ಕ್ಟಿಕ್ ವೈಟ್ ಹಾಗೂ ಮಿಸ್ಟಿಕ್ ಗ್ರೀನ್ ಎಂಬ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5-ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Maruti Suzuki Victoris 14 000 Cars Sold In December 2025 Details

ಹೊಸ 'ವಿಕ್ಟೋರಿಸ್' ಬೆಲೆಗೆ ತಕ್ಕಂತೆ ಹೆಚ್ಚು ಶಕ್ತಿಶಾಲಿಯಾದ 3 ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್, 103 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 137 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 116 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 141 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಇನ್ನೊಂದು 1.5-ಲೀ. ಸಿಎನ್‌ಜಿ ಎಂಜಿನ್‌, 88 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 121 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರು 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 21 ರಿಂದ 28.65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ.

Maruti Suzuki Victoris 14 000 Cars Sold In December 2025 Details

ನೂತನ 'ವಿಕ್ಟೋರಿಸ್' 135 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 14.2 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪನೋರಮಿಕ್ ಸನ್‌ರೂಫ್, ಕಪ್ ಹೋಲ್ಡರ್‌ಗಳು, 64-ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋ ಎಸಿಯಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಯಾಗಿದೆ. ಗ್ಲೋಬಲ್ ಎನ್‌ಸಿಎಪಿ ಮತ್ತು ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದಿದೆ. 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Monday, January 5, 2026, 15:35 [IST]
English summary
Maruti suzuki victoris 14000 cars sold in december 2025 details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+