ಹೊಸ ಮಾರುತಿ ಎಸ್‌ಯುವಿಗೆ ಫುಲ್ ಡಿಮ್ಯಾಂಡ್.. 50,000 ಕಾರುಗಳು ಸೇಲ್ಸ್, 29 Km ಮೈಲೇಜ್.. 10.50 ಲಕ್ಷ ರೂಪಾಯಿ!
ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಕಳೆದ ವರ್ಷದ ಸೆಪ್ಟೆಂಬರ್ 16ರಂದು ಬಿಡುಗಡೆಗೊಳಿಸಲಾಗಿತ್ತು. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ 2026ರ ಜನವರಿ ತಿಂಗಳಲ್ಲೂ ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 15,240 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. ಇದರೊಂದಿಗೆ ಅತಿಕಡಿಮೆ ಅವಧಿಯಲ್ಲಿ 50,000 ಯುನಿಟ್ ಮಾರಾಟ ಮೈಲಿಗಲ್ಲನ್ನು ಮುಟ್ಟಿದೆ.
ಸೆಪ್ಟೆಂಬರ್‌ನಲ್ಲಿ ಅಂತ್ಯದಲ್ಲಿ ಹೊಸ 'ಮಾರುತಿ ವಿಕ್ಟೋರಿಸ್' ವಿತರಣೆಗಳು ಪ್ರಾರಂಭವಾಗಿತ್ತು. ಒಂದೆರೆಡು ದಿನಗಳಲ್ಲಿಯೇ 4,261 ಯುನಿಟ್‌ಗಳು ಮಾರಾಟಗೊಂಡಿದ್ದವು. ಅಕ್ಟೋಬರ್‌ನಲ್ಲಿ 13,496 ಯುನಿಟ್‌ಗಳು, ನವೆಂಬರ್‌ನಲ್ಲಿ 12,300 ಯುನಿಟ್‌ಗಳು ಹಾಗೂ ಡಿಸೆಂಬರ್‌ನಲ್ಲಿ 6,210 ಯುನಿಟ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಲಾಗಿದೆ.

'ಮಾರುತಿ ಸುಜುಕಿ ವಿಕ್ಟೋರಿಸ್' ವಿಶೇಷತೆಗಳೇನು:
ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ, ಜಡ್ಎಕ್ಸ್ಐ (ಒ), ಜಡ್ಎಕ್ಸ್ಐ ಪ್ಲಸ್ ಹಾಗೂ ಜಡ್ಎಕ್ಸ್ಐ (ಒ) ಪ್ಲಸ್ ಎಂಬ ಆಕರ್ಷಕ ರೂಪಾಂತರಗಳ ಆಯ್ಕೆಯಲ್ಲಿಯೂ ಲಭ್ಯವಿದೆ.
ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್ ಹಾಗೂ ಮ್ಯಾಗ್ಮಾ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ 'ವಿಕ್ಟೋರಿಸ್' ಬೆಲೆಗೆ ತಕ್ಕಂತೆ ಬಲಿಷ್ಠವಾದ 3 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.5-ಲೀ. ಪೆಟ್ರೋಲ್ ಎಂಜಿನ್, 103 ಬಿಹೆಚ್‌ಪಿ ಅಶ್ವ ಶಕ್ತಿ ಹಾಗೂ 137 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 116 ಬಿಹೆಚ್‌ಪಿ ಅಶ್ವ ಶಕ್ತಿ ಮತ್ತು 141 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಇನ್ನೊಂದು 1.5-ಲೀ. ಸಿಎನ್‌ಜಿ ಎಂಜಿನ್, 88 ಬಿಹೆಚ್‌ಪಿ ಅಶ್ವ ಶಕ್ತಿ ಹಾಗೂ 121 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 21.06 ರಿಂದ 28.65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಇದರ ಕ್ಯಾಬಿನ್ ಸಹ ಉತ್ತಮವಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ಕಪ್ ಹೋಲ್ಡರ್‌ಗಳು, 64-ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋ ಎಸಿ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ಪಡೆದಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ ಗ್ಲೋಬಲ್ ಎನ್‌ಸಿಎಪಿ ಮತ್ತು ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ರೇಟಿಂಗ್‌ನ್ನು ಪಡೆದುಕೊಳ್ಳುವಲ್ಲಿ ಸಫಲವಾಗಿದೆ. 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) & 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








